ಮಹಿಳಾ ಮತದಾರರು ಹೆಚ್ಚು, ಟಿಕೆಟ್ ಸಿಕ್ಕಿದ್ದು ಮಾತ್ರ ಕಡಿಮೆ
Team Udayavani, May 10, 2023, 6:45 AM IST
ಬೆಂಗಳೂರು: ರಾಜ್ಯದ ಒಟ್ಟಾರೆ 224 ಕ್ಷೇತ್ರಗಳಲ್ಲಿ 100ಕ್ಕೂ ಹೆಚ್ಚು ಕಡೆ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬಹುತೇಕ ಅವರೇ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಅವರ ಓಲೈಕೆಗಾಗಿ ಹತ್ತುಹಲವು ಯೋಜನೆಗಳನ್ನೂ ರೂಪಿಸಲಾಗಿದೆ. ಅಷ್ಟೇ ಅಲ್ಲ, ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಕೂಗು ಕೂಡ ಇದೆ. ಆದರೆ, ಟಿಕೆಟ್ ಹಂಚಿಕೆಯಲ್ಲಿ ಈ ಪ್ರಾತಿನಿಧ್ಯ ಸಿಕ್ಕಿದ್ದು ತುಂಬಾ ಕಡಿಮೆ. ಟಿಕೆಟ್ ಗಿಟ್ಟಿಸಿಕೊಂಡವರಲ್ಲಿ ಗೆದ್ದಿದ್ದು ಇನ್ನೂ ಕಡಿಮೆ.
ರಾಜ್ಯದಲ್ಲಿ ಈವರೆಗೆ 15 ಸಾರ್ವತ್ರಿಕ ವಿಧಾನಸಭೆ ಚುನಾವಣೆಗಳು ನಡೆದಿವೆ. 1967ರಿಂದ 2018ರ ಚುನಾವಣೆವರೆಗೆ ಒಟ್ಟು ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು, ಅದರಲ್ಲಿ ಗೆದ್ದಿದ್ದು ಮಾತ್ರ ಅಂದಾಜು 100-120 ಜನ. ಈಗಲೂ ಗೆಲುವು ಸಾಧಿಸುತ್ತಿರುವುದು ಬೆರಳೆಣಿಕೆಯಷ್ಟು ಮಹಿಳೆಯರು ಮಾತ್ರ. ಇನ್ನು ಪ್ರಮುಖ ರಾಜಕೀಯ ಪಕ್ಷಗಳಿಂದ ಟಿಕೆಟ್ ಗಿಟ್ಟಿಸಿಕೊಂಡು, ಅಖಾಡಕ್ಕಿಳಿದವರು ತುಂಬಾ ಕಡಿಮೆ. ಸ್ವತಂತ್ರ ಅಭ್ಯರ್ಥಿಯಾಗಿ ಅದೃಷ್ಟ ಪರೀಕ್ಷೆಗಿಳಿದವರೇ ಹೆಚ್ಚು ಎನ್ನುವುದನ್ನು ಕಾಣಬಹುದು.
ಗೆಲುವು ಸಾಧಿಸಿದ್ದಾರೆ
ರಾಜಕೀಯ ಪಕ್ಷಗಳ ಲೆಕ್ಕಾಚಾರ ನೋಡಿದರೆ, ಆರಂಭದಿಂದ ಈವರೆಗೆ ಒಂದಕ್ಕಿಂತ ಹೆಚ್ಚು ಬಾರಿ ಗೆದ್ದಿರುವುದು ಸೇರಿದಂತೆ ಕಾಂಗ್ರೆಸ್‌ನಿಂದ ಅತಿ ಹೆಚ್ಚು 70ಕ್ಕೂ ಅಧಿಕ ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಜನತಾ ಪರಿವಾರ (ಜನತಾ ಪಕ್ಷ, ಜನತಾದಳ, ಜೆಡಿಎಸ್, ಜೆಡಿಯು)ದಿಂದ 17, ಬಿಜೆಪಿಯಿಂದ 10 ಹಾಗೂ ಇತರೆ ನಾಲ್ವರು ಗೆದ್ದಿದ್ದಾರೆ. ಪ್ರಸ್ತುತ ವಿಧಾನಸಭೆಯಲ್ಲಿ ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ ಮೂವರು ಹಾಗೂ ಜೆಡಿಎಸ್‌ನ ಒಬ್ಬರು ಸೇರಿ ಒಟ್ಟು 10 ಮಂದಿ ಶಾಸಕಿಯರಿದ್ದಾರೆ.
ಇನ್ನೂ ಸಾಧ್ಯವಾಗುತ್ತಿಲ್ಲ
ರಾಜ್ಯದ ಈವರೆಗಿನ ಚುನಾವಣ ರಾಜಕಾರಣದ ಇತಿಹಾಸ ಗಮನಿಸಿದರೆ ಶೇ. 33ರಷ್ಟು ಮೀಸಲಾತಿ ಮಾತಂತೂ ದೂರ ಉಳಿಯಿತು. ಮಹಿಳಾ ಪ್ರಾತಿನಿಧ್ಯ ಮೂರು ಮತ್ತೂಂದು ಎಂಬತಿದೆ. ಮಹಿಳಾ ಸಬಲೀಕರಣದ ಬಗ್ಗೆ ದೊಡ್ಡದಾಗಿ ಪ್ರತಿಪಾದಿಸುವ ಎಲ್ಲ ಪಕ್ಷಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರಾತಿನಿಧ್ಯ ಪಡೆದುಕೊಳ್ಳುವಲ್ಲಿ ಮಹಿಳೆಯರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ರಾಜಕೀಯ ಪಕ್ಷಗಳು ಮಹಿಳೆಯರಿಗೆ ಟಿಕೆಟ್ ಕೊಡುವುದರಲ್ಲಿ ಜಿಪುಣತನ ತೋರಿಸುತ್ತವೆ. ಕೊಟ್ಟರೂ ಅವರನ್ನು ಗೆಲುವಿನ ದಡ ಸೇರಿಸುವ ಪ್ರಯತ್ನ ಅಷ್ಟಕ್ಕಷ್ಟೇ, ಗೆದ್ದರೆ ಅದೃಷ್ಟ. ರಾಜಕೀಯ ಪಕ್ಷಗಳ ಗೆಲುವಿನ ಮಾನದಂಡಗಳಿಂದ ಮಹಿಳೆ ಇನ್ನೂ ದೂರ ಇರುವುದನ್ನು ಕಾಣಬಹುದು.
ಕಣಕ್ಕಿಳಿದವರು
ಪ್ರಸ್ತುತ ಕಾಂಗ್ರೆಸ್‌ನಿಂದ ಆಯ್ಕೆಯಾದ 6 ಜನ ಶಾಸಕಿಯರಿದ್ದು, ಈ ಬಾರಿ 11 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದರಲ್ಲಿ ಮಾಜಿ ಶಾಸಕಿಯರೂ ಇದ್ದಾರೆ. ಅದೇ ರೀತಿ, ಬಿಜೆಪಿಯಲ್ಲಿ ಮೂವರು ಶಾಸಕಿಯರಿದ್ದು, ವಿಧಾನಸಭಾ ಚುನಾವಣೆಯಲ್ಲಿ 12 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಈ ಮಧ್ಯೆ ಜೆಡಿಎಸ್‌ನಿಂದ ಒಬ್ಬ ಶಾಸಕಿ ಇದ್ದು, ಪ್ರಸಕ್ತ ಚುನಾವಣೆಯಲ್ಲಿ 12 ಜನ ಮಹಿಳಾ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ.
– ವಿಜಯಕುಮಾರ ಚಂದರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.