Chikkamagaluru: ಕಾರು – ಟಿಟಿ ಮುಖಾಮುಖಿ ಢಿಕ್ಕಿ; ಮಗು ಸೇರಿ ಇಬ್ಬರು ಮೃತ್ಯು
Team Udayavani, May 11, 2023, 12:46 PM IST
ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ (ಮೇ.11 ರಂದು) ನಡೆದಿದೆ.
ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಹಿನ್ನೆಲೆ: ಕಾರಿನಲ್ಲಿ ಹೊನ್ನಾವರದಿಂದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ಗಿರಿಧರ್ ಕುಟುಂಬ ಬೆಂಗಳೂರು ಟು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕೇರಳದಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಬರುತ್ತಿದ್ದ ಟಿಟಿ ವಾಹನಕ್ಕೆ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಢಿಕ್ಕಿ ಹೊಡೆದ ಪರಿಣಾಮ ಟಿಟಿ ವಾಹನ ಪಲ್ಟಿಯಾಗಿ 7 ಮಂದಿ ಗಾಯಗೊಂಡಿದ್ದಾರೆ.
ಗಂಭೀರ ಗಾಯಗೊಂಡ ಕೇರಳ ಮೂಲದ 7 ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.