ಮೇ 13 ರಂದು ಮತ ಎಣಿಕೆ: ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ
Team Udayavani, May 11, 2023, 8:28 PM IST
ಉಡುಪಿ: ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಮತ ಎಣಿಕೆ ಕಾರ್ಯವು ಮೇ 13 ರಂದು ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆ, ಬ್ರಹ್ಮಗಿರಿ ಉಡುಪಿಯಲ್ಲಿ ನಡೆಯಲಿದೆ.
ಚುನಾವಣೆಯ ಮತಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ನಂತರ ಕಾನೂನು ಸುವ್ಯವಸ್ಥೆಯನ್ನು ಕಾಯ್ದಕೊಂಡು, ಶಾಂತಿಯನ್ನು ಕಾಪಾಡುವ ಸಲುವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿಪಾಲನೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರನ್ವಯ ಜಿಲ್ಲೆಯಾದ್ಯಂತ ಮೇ 13 ರಂದು ಬೆಳಿಗ್ಗೆ 5 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
ಇದನ್ನೂ ಓದಿ: ಮೂಡುಶೆಡ್ಡೆ ಬಿಜೆಪಿ-ಕಾಂಗ್ರೆಸ್ ಘರ್ಷಣೆ ಪ್ರಕರಣ: ನಾಲ್ವರ ಬಂಧನ
ಷರತ್ತುಗಳು
1. ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು ನಿಷೇಧಿಸಿದೆ.
2. ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ನಿಷೇಧಿಸಿದೆ.
3. ಚುನಾವಣೆಯ ಮತ ಎಣಿಕೆ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ.
4. ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಗಧೆ, ಕೋಲು, ಚೂರಿ, ದೊಣ್ಣೆ, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ನಾವುದೇ ವಸ್ತುಗಳನ್ನು ಧರಿಸುವುದನ್ನು ಮತ್ತು ಯಾವುದೇ ಕಾರಕ ಯಾ ಸ್ಫೋಟಕ ವಸ್ತುಗಳು/ಪಟಾಕಿ | ಸಿಡಿಮದ್ದು ಹೊಂದುವುದನ್ನು ನಿಷೇಧಿಸಿದೆ.
5. ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಯಾ ಕ್ಷಿಪಣಿಗಳು ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಾಗ್ರಿಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.
6. ಈ ಅವಧಿಯಲ್ಲಿ ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಗಾಯನ ಮಾಡುವುದು, ಆವೇಶ ಭಾಷಣ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು, ಚೇಷ್ಟೆ ಮಾಡುವುದು, ಚಿತ್ರಗಳ ಪ್ರದರ್ಶನ ತಯಾರಿಸುವುದು ಯಾ ಪುಸಾರ ಮಾಡುವುದು, ಗುರುತುಗಳು, ಪ್ರಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳ ಪ್ರದರ್ಶನದಿಂದ ಸಭ್ಯತನ, ಸದಾಚಾರ, ಸಾರ್ವಜನಿಕ ಹಿತ ಯಾ ಭದ್ರತೆ ಶಿಥಿಲಗೊಳ್ಳುವಂತಹ ಯಾ ಸರಕಾರವನ್ನು ಕೆದಕುವ ಯಾ ಅಪರಾಧವೆಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.
7. ಈ ನಿಷೇದಾಜ್ಞೆ ಆದೇಶವು ಸರಕಾರದಿಂದ ಯಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಸರಕಾರಿ ನೌಕರರು ಕರ್ತವ್ಯ ನಿರ್ವಹಣೆಯ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ.
8. ಈ ನಿಷೇಧಾಜ್ಞೆ ಆದೇಶವು ಕೆಳಗೆ ಸಹಿ ಮಾಡಿರುವವರ ಅಥವಾ ಉಪವಿಭಾಗದ ದಂಡಾಧಿಕಾರಿ, ತಾಲೂಕು ದಂಡಾಧಿಕಾರಿಯವರ ಪೂರ್ವಾನುಮತಿಯಂತೆ ನಡೆಯುವ ಕಾರ್ಯಕ್ರಮಗಳಿಗೆ ಹಾಗೂ ಶವ ಮೆರವಣಿಗೆ, ಮದುವೆ ಮೆರವಣಿಗೆ ಮತ್ತು ಧಾರ್ಮಿಕ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.