ಶಾರುಖ್ ಪುತ್ರನ ಕೇಸ್; 25 ಕೋಟಿ ರೂ.ಲಂಚ: ಸಮೀರ್ ವಿರುದ್ಧ ಎಫ್ಐಆರ್
29 ಸ್ಥಳಗಳಲ್ಲಿ ಶೋಧ ಕಾರ್ಯ...
Team Udayavani, May 12, 2023, 6:30 PM IST
ಮುಂಬಯಿ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಸಿಲುಕಿಸದಿರಲು 25 ಕೋಟಿ ರೂ. ಲಂಚ ಕೇಳಿದ ಆರೋಪದ ಮೇಲೆ ಎನ್ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಶುಕ್ರವಾರ ಅವರ ನಿವಾಸ, ಕಚೇರಿಗಳ ಆವರಣದಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಂಬೈ, ದೆಹಲಿ, ರಾಂಚಿ ಮತ್ತು ಕಾನ್ಪುರದ 29 ಸ್ಥಳಗಳಲ್ಲಿ ಶೋಧ ಕಾರ್ಯಗಳನ್ನು ನಡೆಸಲಾಗಿದೆ.
ಅಕ್ಟೋಬರ್ 2, 2021 ರಂದು ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಡ್ರಗ್ ಬಸ್ಟ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.ಚಾರ್ಜ್ ಶೀಟ್ ಸಲ್ಲಿಸಿದ ಎನ್ಸಿಬಿ ಆರ್ಯನ್ ಖಾನ್ಗೆ ಕ್ಲೀನ್ ಚಿಟ್ ನೀಡಿತ್ತು, ಆದರೆ ಡ್ರಗ್ಸ್ ವಿರೋಧಿ ಏಜೆನ್ಸಿ ಸ್ಥಾಪಿಸಿದ ಎಸ್ಐಟಿ ಸಮೀರ್ ವಾಂಖೆಡೆ ನೇತೃತ್ವದ ತನಿಖೆಯಲ್ಲಿ ಲೋಪವಾಗಿದೆ ಎಂದು ಹೇಳಿದೆ.
ಐಆರ್ಎಸ್ ಅಧಿಕಾರಿ ವಾಂಖೆಡೆ ಮತ್ತು ಇತರರು ಮಾದಕ ದ್ರವ್ಯ ದಂಧೆಯಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅಧಿಕಾರಿ ಮತ್ತು ಆತನ ಸಹಚರರಿಂದ ಮುಂಗಡವಾಗಿ 50 ಲಕ್ಷ ರೂಪಾಯಿ ಸಂಗ್ರಹಿಸಲಾಗಿದೆ ಎಂದು ಸಿಬಿಐಗೆ ಮಾಹಿತಿ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್ಯನ್ ಖಾನ್ ಬಂಧನದ ವೇಳೆ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮುಖ್ಯಸ್ಥರಾಗಿದ್ದ ವಾಂಖೆಡೆ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಚೆನ್ನೈನಲ್ಲಿರುವ ತೆರಿಗೆದಾರರ ಸೇವೆಗಳ ಮಹಾನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.