ಪೈಲಟ್ ಮಾಡಿದ ಎಡವಟ್ಟಿಗೆ 3 ತಿಂಗಳು ಅಮಾನತು ಶಿಕ್ಷೆ, ಏರ್ ಲೈನ್ಸ್ ಗೆ 30 ಲಕ್ಷ ರೂ. ದಂಡ
Team Udayavani, May 12, 2023, 8:31 PM IST
ನವದೆಹಲಿ: ಏರ್ ಇಂಡಿಯಾ ವಿಮಾನದ ಪೈಲಟ್ ಮಾಡಿದ ಒಂದು ಎಡವಟ್ಟಿಗೆ ಇದೀಗ ಪೈಲಟ್ ಮೂರು ತಿಂಗಳು ಅಮಾನತಿನ ಶಿಕ್ಷೆಗೆ ಗುರಿಯಾದರೆ, ಏರ್ ಲೈನ್ಸ್ ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ 30 ಲಕ್ಷ ರೂ ದಂಡ ವಿಧಿಸಿದೆ.
ವಿಷಯ ಇಲ್ಲಿದೆ : ಕಳೆದ ಫೆಬ್ರವರಿ ತಿಂಗಳಲ್ಲಿ ನಡೆದ ಘಟನೆಯೊಂದರಲ್ಲಿ ದುಬೈನಿಂದ ದೆಹಲಿಗೆ ಏರ್ ಇಂಡಿಯಾ ವಿಮಾನವೊಂದು ಪ್ರಯಾಣಿಕರನ್ನು ಹೊತ್ತು ಹೊರಟಿತ್ತು ಈ ವೇಳೆ ವಿಮಾನದ ಪೈಲಟ್ ತನ್ನ ಮಹಿಳಾ ಸ್ನೇಹಿತೆಯನ್ನು ಕಾಕ್ಪಿಟ್ ಒಳಗೆ ಕುಳಿತುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾನೆ ಈ ಕಾರಣಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ ಗೆ ಮೂರು ತಿಂಗಳುಗಳ ಕಾಲ ಅಮಾನತಿನ ಶಿಕ್ಷೆ ನೀಡಿದೆ ಅಲ್ಲದೆ ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸುವಲ್ಲಿ ವಿಫಲರಾದ ಕಾರಣಕ್ಕಾಗಿ ಏರ್ಲೈನ್ಗೆ 30 ಲಕ್ಷ ರೂ. ದಂಡ ವಿಧಿಸಿದೆ.
ಪೈಲಟ್ ಕಾಕ್ಪಿಟ್ ಒಳಗೆ ತನ್ನ ಗೆಳತಿಯನ್ನು ಕರೆಸಿ ನಿಯಮ ಉಲ್ಲಂಘಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಹೇಳಿಕೆ ನೀಡಿದೆ ಅಲ್ಲದೆ ಪೈಲಟ್ ಮಾಡಿರುವ ತಪ್ಪನ್ನು ಬಗೆಹರಿಸುವಲ್ಲಿ ವಿಮಾನಯಾನ ಸಂಸ್ಥೆ ವಿಫಲವಾಗಿದೆ ಎಂದು 30 ಲಕ್ಷ ರೂ. ದಂಡವಿಧಿಸಿದೆ.
ಇದನ್ನೂ ಓದಿ: ಅದಾನಿ-ಹಿಂಡೆನ್ಬರ್ಗ್ ವಿವಾದ : ಸಮಿತಿಯ ವರದಿಯನ್ನು ಅಧ್ಯಯನ ಮಾಡಲಿರುವ ಸುಪ್ರೀಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.