ಹುಬ್ಬಳ್ಳಿ: ಆರ್‌ಪಿಐ ಅಭ್ಯರ್ಥಿಗೆ ಇರಿದು ಹತ್ಯೆಗೆ ಯತ್ನ!

Team Udayavani, May 12, 2023, 9:18 PM IST

police

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಕುಂದಗೋಳ ವಿಧಾನಸಭಾ ಮತಕ್ಷೇತ್ರದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಅಭ್ಯರ್ಥಿಗೆ ಸ್ನೇಹಿತನೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಶುಕ್ರವಾರ ಸಂಜೆ ಇಲ್ಲಿನ ವಿದ್ಯಾನಗರ ರಾಜೀವನಗರದ ಚಂದ್ರಗಿರಿ ಲೇಔಟ್‌ನಲ್ಲಿ ನಡೆದಿದೆ.

ಘಟನೆಯಲ್ಲಿ ಆರ್‌ಪಿಐ ಅಭ್ಯರ್ಥಿ, ಉಣಕಲ್ಲ ಬಳಿಗಾರ ಓಣಿಯ ಮಲ್ಲಿಕಾರ್ಜುನ ಕೆ. ತೋಟಗೇರ (46) ಹಲ್ಲೆಗೊಳಗಾಗಿದ್ದು, ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರ ಸ್ನೇಹಿತ, ಚಂದ್ರಗಿರಿ ಲೇಔಟ್‌ನ ಸುನಿಲ ಎಂಬಾತ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಹಲ್ಲೆಗೊಳಗಾದ ಮಲ್ಲಿಕಾರ್ಜುನ ಅವರು ಪಕ್ಷೇತರಾಗಿ ಕುಂದಗೋಳ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾರೆ. ಎರಡು ವರ್ಷಗಳ ಹಿಂದೆ ಹು-ಧಾ. ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲೂ ವಾರ್ಡ್ ನಂ. 37 ರಲ್ಲಿ ಆರ್‌ಪಿಐ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಹಣಕಾಸಿನ ವಿಷಯವಾಗಿ ಭೇಟಿಯಾಗಲೆಂದು ಮಲ್ಲಿಕಾರ್ಜುನರು ಸುನಿಲ ಮನೆಗೆ ಹೋದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವುಂಟಾಗಿದೆ. ಅದು ವಿಕೋಪಕ್ಕೆ ಹೋಗುತ್ತಿದ್ದಂತೆ ಅವಾಚ್ಯ ಶಬ್ದಗಳಿಂದ ಪರಸ್ಪರರ ಮಧ್ಯೆ ವಾಗ್ವಾದ ನಡೆದಿದೆ. ಆಗ ಕೋಪಗೊಂಡ ಸುನಿಲನು ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ಮಲ್ಲಿಕಾರ್ಜುನರು ಹನುಮಂತ ನಗರದಲ್ಲಿ ಕಿರಾಣಿ ಅಂಗಡಿ ಇಟ್ಟುಕೊಂಡು ಉಪಜೀವನ ಸಾಗಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಹಾಗೂ ಕಿಮ್ಸ್ ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು, ವಿದ್ಯಾನಗರ ಪೊಲೀಸರು ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಷುಲ್ಲಕ ವಿಷಯವಾಗಿ ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದವನು ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.