Daily Horoscope; ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು
Team Udayavani, May 13, 2023, 7:04 AM IST
ಮೇಷ: ಗುರುಹಿರಿಯರ ಆಶೀರ್ವಾದದ ಸಹಕಾರ. ನಿರೀಕ್ಷಿತ ಸ್ಥಾನ ಮಾನ ಗೌರವ ಪ್ರಾಪ್ತಿ. ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ.
ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಮನೆಯಲ್ಲಿ ಸಂತೋಷದ ವಾತಾವರಣ.
ಮಿಥುನ: ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಕೆಲಸ ಕಾರ್ಯ ಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ, ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.
ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡುಬಂದಾವು. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರ ದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.
ಸಿಂಹ: ಪರಿಸ್ಥಿತಿಗೆ ಸರಿಯಾದ ಕಾರ್ಯ ವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆರೋಗ್ಯ ಗಮನಹರಿಸಿ. ದೂರ ಸಂಚಾರ ಸಂಭವ. ಸಾಂಸಾರಿಕವಾಗಿ ನೆಮ್ಮದಿಯ ದಿನ.
ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಗಮ. ಖರ್ಚಿನ ಬಗ್ಗೆ ಗಮನವಿರಲಿ.
ತುಲಾ: ಮನೋರಂಜನೆ ಉಲ್ಲಾಸದಲ್ಲಿ ಕಾಲ ಕಳೆಯುವಿಕೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ. ದೀರ್ಘ ಪ್ರಯಾಣ. ವಿವಾಹಾದಿ ವಿಚಾರ ಗಳಲ್ಲಿ ಆಸಕ್ತಿ. ವಿದೇಶದಲ್ಲಿ ಅಧ್ಯಯನ ಆಸಕ್ತರಿಗೆ ವಿಪುಲ ಅವಕಾಶಗಳು ಒದಗಿ ಬರುವುದು.
ವೃಶ್ಚಿಕ: ಅವಿವಾಹಿತರಿಗೆ ವಿವಾಹ ಯೋಗ. ಉದ್ಯೋಗ ವ್ಯವಹಾರಗಳಲ್ಲಿ ಬಹುಜನರ ಸಂಪರ್ಕ. ಅನ್ಯರ ಮೇಲೆ ಅವಲಂಬನೆ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ವಾಹನಾದಿ ಸುಖ ವೃದ್ಧಿ. ಆಸ್ತಿ ಸಂಗ್ರಹ. ಮಿತ್ರರ ಸಹಕಾರ ಲಭ್ಯ.
ಧನು: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಗೌರವಾನ್ವಿತ ಧನ ಸಂಪಾದನೆ. ಸಾಂಸಾರಿಕ ಸುಖ ತೃಪ್ತಿದಾಯಕ.
ಮಕರ: ಕುಟುಂಬದವರೊಂದಿಗೆ ಪುಣ್ಯಕ್ಷೇತ್ರ ಭೇಟಿ. ಬಂಧುಮಿತ್ರರ ಆಗಮನದಿಂದ ಮನಃಸಂತೋಷ. ಗುರುಹಿರಿಯರ ಅವಲಂಬನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ ಮಾನ್ಯತೆ ಪ್ರಾಪ್ತಿ. ಗೃಹದಲ್ಲಿ ಸಂಭ್ರಮ.
ಕುಂಭ: ಉತ್ತಮ ಸ್ಥಾನ ಗೌರವದ ಸುಖ. ಆಸ್ತಿ ಸಂಗ್ರಹದಲ್ಲಿ ಆಸಕ್ತಿ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಆರೋಗ್ಯದಲ್ಲಿ ಸುಧಾರಣೆ. ಆರ್ಥಿಕವಾಗಿ ಸುದೃಢತೆ.
ಮೀನ: ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಅಧ್ಯಯನದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ವಿಫುಲ ಸದವಕಾಶಗಳು ಒದಗಿ ಬರುವುದು. ಹೆಚ್ಚಿದ ಧನಾಗಮನ. ಉಳಿತಾಯಕ್ಕೆ ಆದ್ಯತೆ. ಸಣ್ಣ ಪ್ರಯಾಣ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಅವಕಾಶ. ಖರ್ಚಿನ ಬಗ್ಗೆ ಗಮನಹರಿಸಿ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.