ಮಾಸಾಂತ್ಯದಲ್ಲಿ ಪಟ್ಟಣಗಳಿಗೆ ಡ್ಯಾಂ ನೀರು


Team Udayavani, May 13, 2023, 5:04 PM IST

ಮಾಸಾಂತ್ಯದಲ್ಲಿ ಪಟ್ಟಣಗಳಿಗೆ ಡ್ಯಾಂ ನೀರು

ಬಂಗಾರಪೇಟೆ: ಕುಡಿಯುವ ನೀರಿನ ಯೋಜನೆ ಆಗಿರುವ ಯರಗೋಳ್‌ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡು ತುಂಬಿ ಹರಿದು 8 ತಿಂಗಳ ನಂತರ ಇದೇ ಮೊಟ್ಟ ಮೊದಲ ಬಾರಿಗೆ ಗುರುವಾರ ರಾತ್ರಿ ಬಂಗಾರಪೇಟೆಗೆ ನೀರು ಬಂದಿದೆ.

ತಾಲೂಕಿನಲ್ಲಿ 2022 ಆಗಷ್ಟನಲ್ಲಿ ಯರಗೋಳ್‌ ಅಣೆಕಟ್ಟು ತುಂಬಿದ್ದು, ತಾಲೂಕಿನ ಗಡಿಭಾಗದಲ್ಲಿರುವ ಯರಗೋಳ್‌ ಅಣೆಕಟ್ಟು 300 ಎಕರೆ ಭೂ ಪ್ರದೇಶದಷ್ಟು ವಿಶಾಲವಾಗಿದೆ. ಅಣೆಕಟ್ಟು ನಿರ್ಮಾಣಗೊಂಡ 2 ವರ್ಷಗಳ ನಂತರ ತುಂಬಿ ಹರಿದಿದೆ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮುನರತ್ನ ನೇತೃತ್ವದಲ್ಲಿ ಅಣೆಕಟ್ಟು ಉದ್ಘಾಟನೆ ಮಾಡಿದ್ದರೂ, ಸಹ ನೀರು ಸರಬರಾಜು ಮಾಡಲು ಯಂತ್ರ ಅಳವಡಿಕೆ ಮಾಡದ ಕಾರಣ, ಅಣೆಕಟ್ಟಿನಲ್ಲಿಯೇ ನೀರು ಸಂಗ್ರಹವಾಗಿತ್ತು.

ಆನಂದ ಗಿರಿ ಬಳಿ ಪಂಪ್‌ಹೌಸ್‌ : ಜಿಲ್ಲಾಡಳಿತವು ಕಳೆದ 8 ತಿಂಗಳ ಹಿಂದೆ ಲೋಕಾರ್ಪಣೆ ಮಾಡಿದ್ದರೂ, ನೀರು ಪೂರೈಕೆ ಮಾಡಲು ಯಂತ್ರಗಳ ಕೊರತೆಯಿಂದ ಸಾಧ್ಯವಾಗಲಿಲ್ಲ. ಸರ್ಕಾರವು ಸುಮಾರು 8 ಕೋಟಿಗೆ ಟೆಂಡರ್‌ ಕರೆದು ಅಣೆಕಟ್ಟಿನಿಂದ ಬಂಗಾರಪೇಟೆ ಸರ ಬರಾಜು ಮಾಡಿದ ನಂತರ ಇಲ್ಲಿಂದ ಕೋಲಾರ ಹಾಗೂ ಮಾಲೂರು ನಗರಗಳಿಗೆ ನೀರು ಪೂರೈಕೆ ಮಾಡುವ ಯೋಜನೆ ರೂಪಿಸಿದೆ. ತಾಲೂಕಿನ ಬೂದಿ ಕೋಟೆ ಮುಖ್ಯರಸ್ತೆಯ ಆನಂದಗಿರಿ ಬಳಿ ನಿರ್ಮಾಣ ಮಾಡಿರುವ ಬೃಹತ್‌ ಗಾತ್ರದ ನೀರು ಸಂಗ್ರಹಣೆಯ ಪಂಪ್‌ಹೌಸ್‌ನಲ್ಲಿ ನೀರನ್ನು ಪಂಪ್‌ ಮಾಡಲು ಯಂತ್ರಗಳನ್ನು ಅಳವಡಿಸಿ ಯಶಸ್ವಿಯಾಗಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕೋಲಾರ ವಿಭಾಗದ ಅಧಿಕಾರಿಗಳು ನೀರು ಸರಬರಾಜು ಮಾಡಲು ಎಲ್ಲಾ ಯಂತ್ರೋಪಕರಣಗಳನ್ನು ಯಶಸ್ವಿಯಾಗಿ ಅಳವಡಿಸಿದೆ. ಮೇ 11 ರಂದು ರಾತ್ರಿ ಯರಗೋಳ್‌ ಅಣೆಕಟ್ಟಿನಿಂದ ಪಂಪ್‌ ಮಾಡಿದ್ದರಿಂದ ಬಂಗಾರಪೇಟೆಯ ಆನಂದಗಿರಿ ಪಂಪ್‌ಹೌಸ್‌ಗೆ ನೀರು ಬಂದಿದೆ. ಇದನ್ನು ವೀಕ್ಷಿಸಿದ ಪುರಸಭೆ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

45 ಗ್ರಾಮಗಳಿಗೆ ಕುಡಿಯುವ ನೀರು: ಜಿಲ್ಲೆಯ ಬಂಗಾರಪೇಟೆ, ಕೋಲಾರ, ಮಾಲೂರು ಪಟ್ಟಣಗಳಿಗೆ ಹಾದು ಹೋಗುವ ಮಾರ್ಗ ಮಧ್ಯೆ ಬರುವ 45 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆ ಯೋಜನೆ ಯರಗೋಳ್‌ ಅಣೆಕಟ್ಟು ಆಗಿದೆ. ಯೋಜನೆ 2006ರಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆದು ಕಾಮಗಾರಿಯ ಜವಾಬ್ದಾರಿಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕೋಲಾರ ವಿಭಾಗ ಹೊಂದಿದೆ. ಕಾಮಗಾರಿಯ ಗುತ್ತಿಗೆಯನ್ನು ಆಂಧ್ರ ಪ್ರದೇಶ ಮೂಲದ ರಾಮ್‌ಕೀ ಕಂಪನಿಯು ಪಡೆ ದಿದ್ದು, 24 ತಿಂಗಳಲ್ಲಿ ಕಾಮಗಾರಿ ಮುಗಿಸುವುದಾಗಿ ಹೇಳಿ ಬರೋಬ್ಬರಿ 13 ವರ್ಷಗಳು ತೆಗೆದುಕೊಂಡಿದೆ.

ಜಿಲ್ಲೆಗೆ ವರದಾನ: ಯರಗೋಳ್‌ ಅಣೆಕಟ್ಟು ಸಾರ್ವಜನಿಕರ ಉಪಯೋಗಕ್ಕೆ ಬರಲು ಮುಖ್ಯವಾಗಿ ಸಮರ್ಪಕ ಮಳೆಯಾದಲ್ಲಿ ನೀರು ಶೇಖರಣೆಯಾಗಲು, ಇದೊಂದು ಮಹತ್ವದ ಅಣೆಕಟ್ಟು ಆಗಲಿದೆ. ನೂರಾರು ಕೋಟಿ ರೂಪಾಯಿ ವೆಚ್ಚದಿಂದ ಕೂಡಿದ ಯೋಜನೆಗೆ ಹೊರಗಿನಿಂದ ಯಾವುದಾದರೊಂದು ನೀರಾವರಿ ಯೋಜನೆಯ ಮೂಲಕ ನೀರು ಬಂದಿದ್ದೇ ಆದಲ್ಲಿ, ನೀರು ಶೇಖರಣೆಗೆ ಇದು ಉತ್ತಮ ಅಣೆಕಟ್ಟು ಆಗಿ ಕೋಲಾರ ಜಿಲ್ಲೆಗೆ ವರದಾನವಾಗಲಿದೆ.

ಯರಗೋಳ್‌ ಜಲಾಶಯವು ಒಟ್ಟು 500 ಎಂಸಿಎಫ್ಟಿ ಸಾಮಾರ್ಥ್ಯ ಹೊಂದಿದ್ದು, ಸರಾಸರಿ 136.50 ಮೀಟರ್‌ ಆಳವಾದ ಪ್ರದೇಶಹೊಂದಿದೆ. ಒಟ್ಟು 482.73 ಕ್ಯೂಮೆಕ್‌ ಪ್ರದೇಶ ಹೊಂದಿದ್ದು, ಸುಮಾರು 8 ಕೋಟಿಗಳ ವೆಚ್ಚದಲ್ಲಿ ಯರಗೋಳ್‌ ಅಣೆಕಟ್ಟಿನಿಂದ 24.5 ಕಿ.ಮೀ ದೂರದಿಂದ ಬಂಗಾರಪೇಟೆಗೆ ಹಾಗೂ ಮಾಲೂರು ಮತ್ತು ಕೋಲಾರ ನಗರಗಳಿಗೆ ನೀರು ಸರಬರಾಜು ಮಾಡಲು ನೂತನವಾಗಿ ಯಂತ್ರೋಪ ಕರಣ ಅಳವಡಿಸಿ ಪ್ರಯೋಗ ನಡೆಸಲಾಗಿದ್ದು, ಯಶಸ್ವಿಯಾಗಿ ರುವುದರಿಂದ ಮೇ ತಿಂಗಳ ಅಂತ್ಯದ ವೇಳೆಗೆ ನಿಯಾಮಾನುಸಾರವಾಗಿ ಮೂರು ನಗರಗಳಿಗೆ ನೀರು ಪೂರೈಕೆಯಾಗಲು ಕ್ರಮಕೈಗೊಳ್ಳಲಾಗುವುದು. -ಬಿ.ಸಿ.ರವೀಂದ್ರ, ಕಾರ್ಯಪಾಲಕ ಅಭಿಯಂತರರು

-ಎಂ.ಸಿ.ಮಂಜುನಾಥ್‌.

ಟಾಪ್ ನ್ಯೂಸ್

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.