ರಾಹುಲ್‌ ಗಾಂಧಿ ವಿರುದ್ಧದ ಷಡ್ಯಂತ್ರಕ್ಕೆ ಜನ ನೀಡಿದ ಉತ್ತರ: ಬಿ.ಕೆ. ಹರಿಪ್ರಸಾದ್

ಕರ್ನಾಟಕದ ಜನರನ್ನು ಮತ್ತೆ ವಂಚಿಸುವ ಬಿಜೆಪಿ ನಾಯಕರ ಪ್ರಯತ್ನ ವಿಫಲ

Team Udayavani, May 13, 2023, 6:15 PM IST

B K HARi

ಬೆಂಗಳೂರು: ಕೋಲಾರದಲ್ಲಿ ಲೋಕಸಭಾ ಚುನಾವಣೆ ವೇಳೆ ಮಾಡಿದ್ದ ಭಾಷಣವನ್ನು ಮುಂದಿಟ್ಟುಕೊಂಡು ಷಡ್ಯಂತ್ರ ರೂಪಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದರು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಾರಿ ಬಹುಮತ ನೀಡುವ ಮೂಲಕ ಜನರು ರಾಹುಲ್‌ ಗಾಂಧಿಯವರ ವಿರುದ್ಧದ ಬಿಜೆಪಿಯ ಷಡ್ಯಂತ್ರಕ್ಕೆ ಸರಿಯಾದ ಉತ್ತರ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿರುವ ರಾಜ್ಯದ ಮತದಾರರು, ಕಾಂಗ್ರೆಸ್‌ಗೆ ಅಭೂತಪೂರ್ವ ಬಹುಮತ ನೀಡಿದ್ದಾರೆ. ಬಿಜೆಪಿಯ ನಕಲಿ ಹಿಂದುಳಿದ ವರ್ಗಗಳ ನಾಯಕರು ರಾಜ್ಯದ ಹಿಂದುಳಿದ ವರ್ಗಗಳ ಜನರಿಗೆ ಮೋಸ ಮಾಡಲು ಹೊರಟಿದ್ದರು. ಈ ಚುನಾವಣೆಯಲ್ಲಿ ಕರ್ನಾಟಕದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯುವುದಿಲ್ಲ ಎಂಬ ಸಂದೇಶವನ್ನು ಈ ಫಲಿತಾಂಶದ ಮೂಲಕ ರವಾನಿಸಿದ್ದಾರೆ ಎಂದು ಹೇಳಿದ್ದಾರೆ.

2019ರಲ್ಲಿ ಆಪರೇಷನ್‌ ಕಮಲ ನಡೆಸಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದ್ದ ಬಿಜೆಪಿ, ಆರಂಭದ ದಿನಗಳಿಂದಲೂ ಮತೀಯ ಗೂಂಡಾಗಿರಿಗೆ ಪ್ರಚೋದನೆ ನೀಡುತ್ತಾ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿತ್ತು. ಭ್ರಷ್ಟಾಚಾರ, ದುರಾಡಳಿತ ಮೇರೆ ಮೀರಿತ್ತು. 40% ಭ್ರಷ್ಟಾಚಾರದ ಸರ್ಕಾರ ಎಂಬ ಹಣಪಟ್ಟಿ ಅಂಟಿಸಿಕೊಂಡಿದ್ದ ಬಿಜೆಪಿ ಸರ್ಕಾರವನ್ನು ಜನರು ಅಧಿಕಾರದಿಂದ ಕಿತ್ತೊಗೆದಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಮುಂದುವರಿದಿದ್ದರೆ ರಾಜ್ಯವು ಇನ್ನೂ ಹಿನ್ನಡೆ ಅನುಭವಿಸುವ ಅಪಾಯವಿತ್ತು. ಅದನ್ನು ಅರಿತ ಮತದಾರರು ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದ್ದಾರೆ. ರೋಡ್‌ ಶೋ, ಪ್ರಚಾರದ ಹೆಸರಿನಲ್ಲಿ ಕರ್ನಾಟಕದ ಜನರನ್ನು ಮತ್ತೆ ವಂಚಿಸುವ ಬಿಜೆಪಿ ನಾಯಕರ ಪ್ರಯತ್ನ ವಿಫಲವಾಗಿದೆ ಎಂದಿದ್ದಾರೆ.

ರಾಜ್ಯದ ಉದ್ದಗಲಕ್ಕೆ ಜನರು ಬದಲಾವಣೆಯ ಪರ ಮತ ಚಲಾಯಿಸಿರುವುದೇ ಇದಕ್ಕೆ ಸಾಕ್ಷಿ. ರಾಜ್ಯದ ಜನರು ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್‌ ನೀಡಿದ ಗ್ಯಾರೆಂಟಿಗಳಲ್ಲಿ ನಂಬಿಕೆ ಇರಿಸಿದ್ದು, ಸ್ವಚ್ಛ ಮತ್ತು ಭ್ರಷ್ಟಾಚಾರರಹಿತ ಆಡಳಿತವನ್ನು ನಮ್ಮ ಪಕ್ಷ ನೀಡಲಿದೆ ಎಂಬ ವಿಶ್ವಾಸವನ್ನು ಹೊಂದಿದ್ದಾರೆ. ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿರುವುದಕ್ಕಾಗಿ ರಾಜ್ಯದ ಸಮಸ್ತ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.