ಮುಗಿಲು ಮುಟ್ಟಿದ ಕಾಂಗ್ರೆಸ್‌ ಸಂಭ್ರಮಾಚರಣೆ

Team Udayavani, May 14, 2023, 2:48 PM IST

ಮುಗಿಲು ಮುಟ್ಟಿದ ಕಾಂಗ್ರೆಸ್‌ ಸಂಭ್ರಮಾಚರಣೆ

ಗುಂಡ್ಲುಪೇಟೆ: ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಎಂ.ಗಣೇಶಪ್ರಸಾದ್‌ ಗೆಲುವು ಸಾಧಿಸುತ್ತಿದ್ದಂತೆ ಕ್ಷೇತ್ರಾದ್ಯಂತ ಕಾಂಗ್ರೆಸ್‌ ಕಾರ್ಯ ಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

ಶನಿವಾರ ಬೆಳಗ್ಗೆ 10 ಗಂಟೆ ಸುಮಾರು ಹಲವು ಸುತ್ತುಗಳ ಮತ ಎಣಿಕೆಯಲ್ಲಿ ಎಚ್‌. ಎಂ.ಗಣೇಶಪ್ರಸಾದ್‌ ಮುನ್ನಡೆ ಸಾಧಿಸುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್‌ ಕಚೇರಿಯತ್ತ ಸಾವಿರಾರು ಕಾರ್ಯಕರ್ತರು ಧಾವಿಸಿ ಪಟಾಕಿ ಸಿಡಿ, ಕಾಂಗ್ರೆಸ್‌ ಬಾವುಟ ಹಾರಿಸಿ ಕಾಂಗ್ರೆಸ್‌ ಪಕ್ಷ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ರಾಹುಲ್‌ ಗಾಂಧಿ, ಗಣೇಶಪ್ರಸಾದ್‌ ಪರ ಘೋಷಣೆ ಕೂಗಿ ಸಂಭ್ರಮಿಸಿದರು.

ಅಂತಿಮವಾಗಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಎಂ.ಗಣೇಶಪ್ರಸಾದ್‌ ಪ್ರತಿ ಸ್ಪರ್ಧಿ ಸಿ.ಎಸ್‌ .ನಿರಂಜನಕುಮಾರ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಹೊರ ಬಿದ್ದ ಕೂಡಲೇ ಕಾಂಗ್ರೆಸ್‌ ಕಚೇರಿ ಮುಂದೆ ಡಿ.ಜೆ. ಹಾಕಿ ಮಹಿಳೆಯರು, ವಯಸ್ಕರು, ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಣ್ಣ ಹಾಕಿಕೊಂಡು ಕುಣಿದು ಕುಪ್ಪಳಿಸಿದರು. ಬಾವುಟ ಹಿಡಿದು ಕಾಂಗ್ರೆಸ್‌ ಪರ ಘೋಷಣೆ: ಗಣೇಶಪ್ರಸಾದ್‌ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೈಕ್‌ ಹಾಗೂ ಕಾರುಗಳಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್‌ ಬಾವುಟ ಬೀಸುತ್ತ ಸಾಗುವ ಮೂಲಕ ಕಾಂಗ್ರೆಸ್‌ ಪಕ್ಷದ ಪರ ಘೋಷಣೆ ಕೂಗಿ ಸಂಭ್ರಮಿ ಸಿದರು. ಜೊತೆಗೆ ತಾಲೂಕಿನ ಹಲವು ಗ್ರಾಮಗಳ ಲ್ಲಿಯೂ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಗೆಲುವನ್ನು ಸಂಭ್ರಸಿದರು.

ಗಣೇಶಪ್ರಸಾದ್‌ಗೆ ಅದ್ಧೂರಿ ಸ್ವಾಗತ: ವಿಧಾನ ಸಭಾ ಚುನಾವಣೆಯಲ್ಲಿ ಎಚ್‌.ಎಂ.ಗಣೇಶಪ್ರಸಾದ್‌ ಗೆಲುವು ಸಾಧಿಸಿ ತಾಲೂಕಿಗೆ ಆಗಮಿಸುತ್ತಿದ್ದಂತೆ ತೆರಕಣಾಂಬಿಯಲ್ಲಿ ಮಳೆಯ ನಡುವೆಯೂ ಕಾಂಗ್ರೆಸ್‌ ಮುಖಂಡರು ಪಟಾಕಿ ಸಿಡಿಸಿ ಹೂ ಮಳೆಗೈಯುವ ಮೂಲಕ ಅದ್ಧೂರಿಯಿಂದ ಸ್ವಾಗತ ಕೋರಿ ಬರಮಾಡಿಕೊಂಡರು. ನಂತರ ಪಟ್ಟಣಕ್ಕೆ ಆಗಮಿಸಿದ ಗಣೇಶಪ್ರಸಾದ್‌ ಅವರಿಗೆ ಕೋಡಹಳ್ಳಿ ಸರ್ಕಲ್‌ ಬಳಿ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ಬೃಹತ್‌ ಹೂವಿನ ಹಾರ ಹಾಕಿ ಪಟಾಕಿ ಸಿಡಿಸಿ ಸ್ವಾಗತಿಸಿದರು.

ತದ ನಂತರ ತೆರೆದ ವಾಹನದಲ್ಲಿ ಗಣೇಶಪ್ರಸಾದ್‌ ತಮ್ಮ ಅಪಾರ ಬೆಂಬಲಿಗರೊಂದಿಗೆ ರಾಷ್ಟ್ರೀಯ ಹೆದ್ದಾರಿ, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಹಾಗು ಹಳೇ ಬಸ್‌ ನಿಲ್ದಾಣದ ಮೂಲಕ ಮೆರವಣಿಗೆ ನಡೆಸಿ ಕಾಂಗ್ರೆಸ್‌ ಕಚೇರಿಗೆ ಧಾವಿಸಿದರು.

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gundlupete

Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.