ಚೆನ್ನೈ ವಿರುದ್ಧ ಕೆಕೆಆರ್‌ಗೆ 6 ವಿಕೆಟ್‌ ಗೆಲುವು

Team Udayavani, May 15, 2023, 6:42 AM IST

CHENNAI KKR

ಚೆನ್ನೈ: ನಾಯಕ ನಿತೀಶ್‌ ರಾಣಾ ಮತ್ತು ರಿಂಕು ಸಿಂಗ್‌ ಅವರ ಅಮೋಘ ಆಟದಿಂದಾಗಿ ಕೋಲ್ಕತಾ ನೈಟ್‌ರೈಡರ್ ತಂಡವು ರವಿವಾರದ ಐಪಿಎಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದೆ.

ದೀಪಕ್‌ ಚಹರ್‌ ದಾಳಿಗೆ ಆರಂಭದಲ್ಲಿ ಕುಸಿದರೂ ನಿತೀಶ್‌ ಮತ್ತು ರಿಂಕು ಅವರು ನಾಲ್ಕನೇ ವಿಕೆಟಿಗೆ ಸೇರಿಸಿದ 99 ರನ್ನುಗಳ ಜತೆಯಾಟದಿಂದಾಗಿ ಕೆಕೆಆರ್‌ 18.3 ಓವರ್‌ಗಳಲ್ಲಿ 4 ವಿಕೆಟಿಗೆ 147 ರನ್‌ ಗಳಿಸಿ ಜಯ ಸಾಧಿಸಿತು. ಈ ಮೊದಲು ಚೆನ್ನೈ ತಂಡವು ಆರು ವಿಕೆಟಿಗೆ 144 ರನ್‌ ಗಳಿಸಿತ್ತು.
ಈ ಗೆಲುವಿನಿಂದ ಕೆಕೆಆರ್‌ಗೆ ಹೆಚ್ಚಿನ ಲಾಭವಾಗುವ ಸಾಧ್ಯತೆಯಿಲ್ಲ. ಒಟ್ಟಾರೆ 12 ಅಂಕ ಹೊಂದಿರುವ ಕೆಕೆಆರ್‌ 7ನೇ ಸ್ಥಾನದಲ್ಲಿದೆ. ಆದರೆ ದ್ವಿತೀಯ ಸ್ಥಾನದಲ್ಲಿರುವ ಚೆನ್ನೈಗೆ ಈ ಸೋಲಿನಿಂದಾಗಿ ಪ್ಲೇ ಆಫ್ಗೇರುವ ಪ್ರಯತ್ನ ಕಠಿನವಾಗುವ ಸಾಧ್ಯತೆ ಇದೆ.

ಆರಂಭಿಕರಾದ ಜೇಸನ್‌ ರಾಯ್‌, ಗುರ್ಬಜ್‌ ಮತ್ತು ವೆಂಕಟೇಶ್‌ ಅಯ್ಯರ್‌ ಅವರನ್ನು ತಂಡ 33 ರನ್‌ ಗಳಿಸುವಷ್ಟರಲ್ಲಿ ಕಳೆದುಕೊಂಡು ಆಘಾತಕ್ಕೆ ಒಳಗಾಗಿತ್ತು. ಆದರೆ ನಿತೀಶ್‌ ರಾಣಾ ಮತ್ತು ರಿಂಕು ಸಿಂಗ್‌ ಆತ್ಮವಿಶ್ವಾಸದಿಂದ ಆಡಿ ಚೆನ್ನೈ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ನಾಲ್ಕನೇ ವಿಕೆಟಿಗೆ 99 ರನ್‌ ಪೇರಿಸಿದ ಅವರು ಗೆಲ್ಲಲು 13 ರನ್‌ ಇರುವಾಗ ಬೇರ್ಪಟ್ಟರು. 43 ಎಸೆತಗಳಿಂದ 54 ರನ್‌ ಹೊಡೆದ ರಿಂಕು ಔಟಾದರೆ ನಿತೀಶ್‌ ರಾಣಾ 44 ಎಸೆತ ಎದುರಿಸಿ 57 ರನ್‌ ಗಳಿಸಿ ಅಜೆಯರಾಗಿ ಉಳಿದರು. 6 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದ್ದರು.

ಪ್ಲೇ ಆಫ್ಗೇರಲು ಚೆನ್ನೈಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿತ್ತು. ಆದರೆ ಬ್ಯಾಟಿಂಗಿಗೆ ಕಠಿನವಾಗಿರುವ ಪಿಚ್‌ನಲ್ಲಿ ಚೆನ್ನೈ ಆಟಗಾರರು ಉತ್ತಮ ನಿರ್ವಹಣೆ ನೀಡಲು ಬಹಳಷ್ಟು ಒದ್ದಾಡಿದರು. ಮೊದಲ 11 ಓವರ್‌ ಮುಗಿದಾಗ ತಂಡ 72 ರನ್‌ ಗಳಿಸಿದ್ದು 5 ವಿಕೆಟ್‌ ಉರುಳಿದ್ದವು. ಆಬಳಿಕ ಶಿವಂ ದುಬೆ ಅವರ ಜವಾಬ್ದಾರಿಯ ಆಟದಿಂದಾಗಿ ತಂಡ ಸಾಧಾರಣ ಮೊತ್ತ ಪೇರಿಸಲು ಯಶಸ್ವಿಯಾಯಿತು.

ಕೆಕೆಆರ್‌ ದಾಳಿಯನ್ನು ಸಮರ್ಥವಾಗಿ ನಿಭಾಯಿಸಿದ ದುಬೆ ಮತ್ತು ರವೀಂದ್ರ ಜಡೇಜ ಅವರು ಆರನೇ ವಿಕೆಟಿಗೆ 68 ರನ್ನುಗಳ ಜತೆಯಾಟ ನಡೆಸಿದರು. ಇದರಿಂದ ತಂಡದ ಮೊತ್ತ 150 ಗಡಿ ಹತ್ತಿರ ಬರುವಂತಾಯಿತು. ಜಡೇಜ 24 ಎಸೆತಗಳಿಂದ 20 ರನ್‌ ಗಳಿಸಿದರೆ ದುಬೆ 34 ಎಸೆತಗಳಿಂದ 48 ರನ್‌ ಗಳಿಸಿ ಅಜೇಯರಾಗಿ ಉಳಿದರು. ಒಂದು ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದರು.

ಕೆಕೆಆರ್‌ನ ಸ್ಪಿನ್‌ ಬೌಲರ್‌ಗಳು ನಿಖರ ದಾಳಿ ಸಂಘಟಿಸಿದ್ದರು. ಇದರಿಂದ ಚೆನ್ನೈಯ ರನ್‌ವೇಗಕ್ಕೆ ಕಡಿವಾಣ ಬಿತ್ತು. ಸುನಿಲ್‌ ನಾರಾಯಣ್‌ ತನ್ನ 4 ಓವರ್‌ಗಳ ದಾಳಿಯಲ್ಲಿ ಕೇವಲ 15 ರನ್‌ ನೀಡಿ 2 ವಿಕೆಟ್‌ ಹಾರಿಸಿದ್ದರೆ ಶಾದೂìಲ್‌ ಠಾಕೂರ್‌ 15 ರನ್ನಿಗೆ 1 ವಿಕೆಟ್‌ ಪಡೆದರು. ವರುಣ್‌ ಚಕ್ರವರ್ತಿ 36 ರನ್ನಿಗೆ 2 ವಿಕೆಟ್‌ ಕಿತ್ತರೆ ವೈಭವ್‌ ಅರೋರ 30 ರನ್ನಿಗೆ 1 ವಿಕೆಟ್‌ ಪಡೆದರು.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.