ಪೋಸ್ಟ್ ಪ್ರೊಡಕ್ಷನ್ ನಲ್ಲಿ ಶಿವಣ್ಣನ ‘ಘೋಸ್ಟ್’

Team Udayavani, May 15, 2023, 1:07 PM IST

ghost

ಶಿವರಾಜ್‌ ಕುಮಾರ್‌ ನಾಯಕರಾಗಿರುವ “ಘೋಸ್ಟ್‌’ ಸಿನಿಮಾ ಪೋಸ್ಟ್‌ ಪ್ರೊಡಕ್ಷನ್‌ ನಲ್ಲಿ ತೊಡಗಿದೆ. ಚಿತ್ರವನ್ನು ಶ್ರೀನಿ ನಿರ್ದೇಶಿಸಿದ್ದಾರೆ. ಇನ್ನು, ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌-ಥ್ರಿಲ್ಲರ್‌ ಕಥಾಹಂದರದ ಸಿನಿಮಾ. ಈಗಾಗಲೇ ಬಿಡುಗಡೆಯಾಗಿರುವ “ಘೋಸ್ಟ್‌’ ಸಿನಿಮಾದ ಪೋಸ್ಟರ್‌ಗಳಲ್ಲೂ ಶಿವಣ್ಣ ಅವರ ಕೆಲವು ಗೆಟಪ್‌ ಗಳು ಗಮನ ಸೆಳೆಯುವಂತಿದೆ. ಹಾಗಾದರೆ, “ಘೋಸ್ಟ್‌’ ಸಿನಿಮಾದಲ್ಲಿ ನಿಜಕ್ಕೂ ಶಿವಣ್ಣ ಎಷ್ಟು ಶೇಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲೂ ಇದೆ.

ಇದಕ್ಕೆ ಈಗ ಶಿವಣ್ಣ ಅವರೇ ಉತ್ತರಿಸಿದ್ದಾರೆ. “ಈ ಸಿನಿಮಾದಲ್ಲಿ ನಾನು 3 ಶೇಡ್‌ನ‌ಲ್ಲಿ ಕಾಣಿಸಿಕೊಳ್ತೀನಿ. ಕಥೆ ಮತ್ತು ಪಾತ್ರಕ್ಕೆ ತಕ್ಕಂತೆ ಸಿನಿಮಾದಲ್ಲಿ 3 ಲುಕ್‌ನಲ್ಲಿ ಕಾಣಿಸಿಕೊಳ್ಳುವ ಪ್ರಯತ್ನ ಮಾಡಿದ್ದೇನೆ. ಅದು ಎಲ್ಲರಿಗೂ ಖುಷಿ ಕೊಡಲಿದೆ ಅಂತ ಭಾವಿಸಿದ್ದೇನೆ. ಇದಕ್ಕಿಂತ ಹೆಚ್ಚಾಗಿ ಈಗಲೇ ನನ್ನ ಪಾತ್ರದ ಬಗ್ಗೆ ಹೆಚ್ಚೇನೂ ಮಾತನಾಡಲಾರೆ. ಆಡಿಯನ್ಸ್‌ ಥಿಯೇಟರ್‌ ನಲ್ಲಿ ನೋಡುವಾಗಲೂ ಒಂದಷ್ಟು ಸಸ್ಪೆನ್ಸ್‌-ಥ್ರಿಲ್ಲಿಂಗ್‌ ಇರಲಿ’ ಎನ್ನುವುದು ಶಿವಣ್ಣ ಮಾತು.

ಇದನ್ನೂ ಓದಿ:Kerala: ಪಾಕಿಸ್ತಾನದಿಂದ ರವಾನೆ…25,000 ಕೋಟಿ ರೂ.ಮೌಲ್ಯದ ಡ್ರಗ್ಸ್‌ ವಶಕ್ಕೆ, ಓರ್ವನ ಬಂಧನ

“ಘೋಸ್ಟ್‌’ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಮತ್ತು ಮಲೆಯಾಳಂ ಭಾಷೆಗಳಲ್ಲೂ ಏಕಕಾಲದಲ್ಲೆ ನಿರ್ಮಾಣವಾಗುತ್ತಿದೆ. ಸಿನಿಮಾದಲ್ಲಿ ನಟ ಶಿವರಾಜ ಕುಮಾರ್‌ ಅವರೊಂದಿಗೆ ಬಹುಭಾಷಾ ನಟರಾದ ಅನುಪಮ್‌ ಖೇರ್‌, ಜಯರಾಮ್‌ ಇನ್ನಿತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಮೊದಲ ಬಾರಿಗೆ ಇಂಥ ದಿಗ್ಗಜರ ಜೊತೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಶಿವಣ್ಣ ಕೂಡ ಫ‌ುಲ್‌ ಖುಷಿಯಾಗಿದ್ದಾರೆ.

“ಅನುಪಮ್‌ ಖೇರ್‌ ಅವರು ದೇಶದಲ್ಲಿ ಒಂದೇ ಅಲ್ಲ, ವಿಶ್ವದಲ್ಲಿ ಒಳ್ಳೆಯ ನಟ. ಅವರಿಂದ ಕಲಿಯುವುದು ಸಾಕಷ್ಟಿದೆ. ಸಿನಿಮಾದಲ್ಲಿ ಅವರಿಗೊಂದು ವಿಶೇಷ ಪಾತ್ರವಿದೆ. ಖಂಡಿತ ಅವರ ಪಾತ್ರ ಎಲ್ಲರಿಗೂ ಇಷ್ಟವಾಗುತ್ತದೆ. ಇನ್ನು ಜಯರಾಮ್‌ ಅವರೊಂದಿಗೆ ಅಭಿನಯಿಸಲು ಕಾಲ ಕೂಡಿ ಬಂದಿರಲಿಲ್ಲ. ಈ ಸಿನಿಮಾದಲ್ಲಿ ಅವರೊಂದಿಗೂ ಅಭಿನಯಿಸುವ ಅವಕಾಶ ಬಂದಿದೆ. ಈ ಸಿನಿಮಾದಲ್ಲಿ ಜಯರಾಮ್‌ ಅವರಿಂದ ಒಂದು ಪಾತ್ರ ಮಾಡಿಸೋಣ ಅಂತ ನಾನು ಹೇಳಿದ್ದೆ. ಟೀಮ್‌ ಕೂಡ ಈ ಪಾತ್ರಕ್ಕೆ ಅವರೇ ಸೂಕ್ತ ಎನಿಸಿತು’ ಎನ್ನುವುದು ಶಿವರಾಜ ಕುಮಾರ್‌.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.