ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
Team Udayavani, May 16, 2023, 12:43 PM IST
ಬೆಂಗಳೂರು: ಭರ್ಜರಿ ಸಂಖ್ಯಾಬಲದ ಜೊತೆಗೆ ರಾಜ್ಯ ವಿಧಾನಸಭೆ ಚುನಾವಣೆ ಗೆದ್ದ ಕಾಂಗ್ರೆಸ್ ಗೆ ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಪ್ರಬಲ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸ್ಪರ್ಧೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ಹಂಚಿಕೆ ಸೂತ್ರದೊಂದಿಗೆ ಇಬ್ಬರಿಗೂ ಸಮಾಧಾನ ಮಾಡಲು ಮುಂದಾಗಿತ್ತು. ಆದರೆ ಡಿಕೆ ಶಿವಕುಮಾರ್ ಇದಕ್ಕೆ ಒಪ್ಪುತ್ತಿಲ್ಲ. ಒಂದು ವರ್ಷವೋ, 5 ವರ್ಷವೋ ನಾನೇ ಮೊದಲು ಸಿಎಂ ಆಗಬೇಕೆಂದು ಡಿಕೆಶಿ ಪಟ್ಟು ಹಿಡಿದಿರುವುದೇ ತೀರ್ಮಾನ ವಿಳಂಬಕ್ಕೆ ಕಾರಣವಾಗಿದೆ. ಅಲ್ಲದೆ ಸಿಎಂ ಪಟ್ಟವಲ್ಲದೆ ಬೇರೆ ಯಾವುದೂ ನನಗೆ ಬೇಡ. ಸಿಎಂ ಸ್ಥಾನ ನೀಡದಿದ್ದರೆ ಸರ್ಕಾರದ ಭಾಗವೂ ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಇದನ್ನೂ ಓದಿ:IPL 2023 ಅರ್ಜುನ್ ತೆಂಡೂಲ್ಕರ್ ಗೆ ನಾಯಿ ಕಚ್ಚಿದೆಯಂತೆ…: ವಿಡಿಯೋ ನೋಡಿ
ಕಷ್ಟ ಕಾಲದಲ್ಲಿ ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದು, ತಮ್ಮ ಕುಟುಂಬ ಕ್ಕಾಗಿ ಜೈಲು ಸೇರಿದ ಅಂಶಗಳ ಹಿನ್ನೆಲೆಯಲ್ಲಿ ಸೋನಿಯಾಗಾಂಧಿಯ ವರು ಸಹಜವಾಗಿ ಡಿ.ಕೆ.ಶಿವಕುಮಾರ್ ಪರ ಇದ್ದಾರೆ. ಆದರೆ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅಹಿಂದ ಮತ ಕ್ರೋಡೀಕರಣ, ಪ್ರಧಾನಿ ನರೇಂದ್ರ ಮೋದಿ ಎದುರಿಸಲು ಗಟ್ಟಿತನ ತೋರುವವರು ಬೇಕು ಎಂಬ ಕಾರಣಕ್ಕೆ ರಾಹುಲ್ ಗಾಂಧಿಯವರು ಸಿದ್ದರಾಮಯ್ಯ ಪರ ನಿಂತಿದ್ದಾರೆ ಎಂದು ಹೇಳಲಾಗಿದೆ.
ಮತ್ತೊಂದು ಮೂಲಗಳ ಪ್ರಕಾರ, ವಿಧಾನಸಭೆ ಚುನಾವಣೆಗೆ ಮುನ್ನ ದೆಹಲಿಯಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಹೀಗಾಗಿ, ಆ ಮಾತು ಈಡೇರಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಕಗ್ಗಂಟಾಗಿರುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUST WATCH
ಹೊಸ ಸೇರ್ಪಡೆ
Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.