ಸೋಲಿಗೆ ಎದೆಗುಂದಬೇಡಿ: H D ದೇವೇಗೌಡ

ಫ‌ಲಿತಾಂಶದ ಪರಾಮರ್ಶೆಗೆ ಮುಂದಿನ ವಾರ ಅಭ್ಯರ್ಥಿಗಳ ಸಭೆ

Team Udayavani, May 18, 2023, 7:08 AM IST

devegouda

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಎದೆಗುಂದದೆ ಎಲ್ಲರೂ ಸೇರಿ ಪಕ್ಷ ಸಂಘಟನೆ ಮಾಡಿ ಬಲ ತುಂಬುವ ಕೆಲಸ ಮಾಡೋಣ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಈ ಕುರಿತು ಭಾವನಾತ್ಮಕವಾಗಿ ಪಕ್ಷದ ಮುಖಂಡರಿಗೆ ಪತ್ರ ಬರೆದಿರುವ ಅವರು, ಪ್ರಜಾಪ್ರಭುತ್ವದ ಚುನಾವಣೆ ವ್ಯವಸ್ಥೆಯಲ್ಲಿ ಏಳು-ಬೀಳು ಸಹಜ. ಆದರೆ, ಪಕ್ಷಕ್ಕೆ ದೊರೆತಿರುವ ಫ‌ಲಿತಾಂಶದಿಂದ ಯಾರೂ ಎದೆಗುಂದಬಾರದು ಎಂದು ಮನವಿ ಮಾಡಿದ್ದಾರೆ.

ಪಕ್ಷದ ಶಾಸಕರು, ಸಂಸದರು, ಮಾಜಿ ಶಾಸಕರು, ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಫ‌ಲಿತಾಂಶದ ಬಗ್ಗೆ ಪರಾಮರ್ಶೆ ಮಾಡಲು ಸ್ಪರ್ಧೆ ಮಾಡಿದ್ದ ಎಲ್ಲ ಅಭ್ಯರ್ಥಿಗಳ ಸಭೆಯನ್ನು ಮುಂದಿನ ವಾರ ಆಯೋಜಿಸಲು ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಪತ್ರದಲ್ಲಿ ಏನಿದೆ?:
ಈ ಬಾರಿಯ ಚುನಾವಣೆ ಫ‌ಲಿತಾಂಶ ನಿರೀಕ್ಷಿತ ಮಟ್ಟಕ್ಕೆ ಬಂದಿಲ್ಲ. ಇದು ನಮ್ಮೆಲ್ಲರಿಗೂ ಅಚ್ಚರಿ ಮತ್ತು ನಿರಾಶೆ ಮೂಡಿಸಿದೆ. ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದವರು ಶಕ್ತಿಮೀರಿ ಶ್ರಮಿಸಿದ್ದಾರೆ. ಎಲ್ಲರೂ ಕೈ ಜೋಡಿಸಿ ಕೆಲಸ ಮಾಡಿದ್ದಾರೆ. ಆದರೂ ದುಡಿಮೆಗೆ ನಿರೀಕ್ಷಿತ ಯಶಸ್ಸು ದೊರೆತಿಲ್ಲ. ಎಚ್‌.ಡಿ.ಕುಮಾರಸ್ವಾಮಿ ಅವರು ಎರಡು ವರ್ಷಗಳಿಂದ ಜನತಾಪರ್ವ ಹಾಗೂ ಪಂಚರತ್ನ ಕಾರ್ಯಕ್ರಮ ಜನರ ಮುಂದಿಟ್ಟು ರಾಜ್ಯ ಪ್ರವಾಸ ಮಾಡಿದಾಗ ಸಾವಿರಾರು ಜನರು ಸೇರಿ ಬೆಂಬಲ ಸೂಚಿಸಿದರು. ಆದರೆ, ಚುನಾವಣೆಯಲ್ಲಿ ಯಶಸ್ಸು ಸಿಗಲಿಲ್ಲ.

ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, 90ರ ವಯಸ್ಸಿನಲ್ಲಿ ಆರೋಗ್ಯ ಸ್ಥಿತಿ ಅಷ್ಟು ಸಹಜವಾಗಿ ಇಲ್ಲದಿದ್ದರೂ ನಾನೂ ಸಹ ಹಲವಾರು ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡರೂ ಮತದಾರರು ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕಹಿ ಅನುಭವಿಸಿ, ಸಾಕಷ್ಟು ಕಷ್ಟ-ನಷ್ಟ ಹೊಂದಿದ್ದೀರಿ. ಆದರೆ, ಪಕ್ಷ, ರಾಜ್ಯಾಧ್ಯಕ್ಷರು, ನಾನೂ ಒಳಗೊಂಡಂತೆ ಎಲ್ಲರೂ ಸದಾ ಕಾಲ ನಿಮ್ಮ ನೆರವಿಗೆ ಮತ್ತು ಬೆಂಬಲಕ್ಕೆ ನಿಲ್ಲುತ್ತೇವೆ ಎಂಬ ಆಶ್ವಾಸನೆ ನೀಡುತ್ತೇನೆ.

ಆರು ದಶಕಗಳ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದೇನೆ. 1989 ರಲ್ಲಿ 2 ಸ್ಥಾನ ಗಳಿಸಿದ್ದ ಪಕ್ಷ 1994ರಲ್ಲಿ ಅಧಿಕಾರಕ್ಕೆ ಬಂದಿದ್ದೂ ಇದೆ. ಹೀಗಾಗಿ, ಯಾರೂ ಸೋಲಿಗೆ ಎದೆಗುಂದಬಾರದು. ಪಂಚಾಯತ್‌ ಹಾಗೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ್ತೆ ಪಕ್ಷ ಸಂಘಟಿಸಿ ಬಲ ತುಂಬೋಣ ಎಂದು ಹೇಳಿದ್ದಾರೆ.

ಗುರುವಾರ ದೇವೇಗೌಡರ ಹುಟ್ಟುಹಬ್ಬ ಸರಳ ರೀತಿಯಲ್ಲಿ ಆಚರಿಸಬೇಕು. ಹುಟ್ಟುಹಬ್ಬದ ಪ್ರಯುಕ್ತ ಅನಾಥಾಶ್ರಮ, ವೃದ್ಧಾಶ್ರಮ, ಆಸ್ಪತ್ರೆಗಳಲ್ಲಿ ಹಣ್ಣು-ಹಂಪಲು ವಿತರಣೆ, ರಕ್ತದಾನದ ಮೂಲಕ ಆಚರಿಸಬೇಕು. ದೇವೇಗೌಡರ ಆರೋಗ್ಯ ವೃದ್ಧಿಗೆ ಪ್ರಾರ್ಥಿಸಬೇಕು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.