ಬೇಸಿಗೆಯಲ್ಲಿ ಅಕ್ರಮವಾಗಿ ಕೆರೆಕಟ್ಟೆ ನೀರು ಬಳಕೆ 


Team Udayavani, May 18, 2023, 3:26 PM IST

ಬೇಸಿಗೆಯಲ್ಲಿ ಅಕ್ರಮವಾಗಿ ಕೆರೆಕಟ್ಟೆ ನೀರು ಬಳಕೆ 

ಕಿಕ್ಕೇರಿ: ಬೇಸಿಗೆ ಬಂತೆಂದರೆ ಜೀವ ಸಂಕುಲಕ್ಕೆ ಬೇಕಾದ ಕೆರೆಕಟ್ಟೆಯ ನೀರನ್ನು, ಕೆರೆಕಟ್ಟೆ ಪಾತ್ರದ ಜಮೀನಿನವರು ಅಕ್ರಮವಾಗಿ ಬಳಸಿಕೊಳ್ಳುತ್ತಿದ್ದಾರೆ. ಕೆರೆ ಬತ್ತಲು ಆರಂಭಿಸುತ್ತಿದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾಣಿಪಕ್ಷಿಗಳು ಆಹಾರಕ್ಕಿಂತ ನೀರಿಗಾಗಿ ಹುಡುಕಾಟ ದೊಡ್ಡ ಸಮಸ್ಯೆವಾಗಿದೆ. ತಾಲೂಕಿನ ದೊಡ್ಡಕೆರೆಯಾದ ಅಮಾನಿಕೆರೆಯಲ್ಲಿ ಹೂಳು ಹೆಚ್ಚಾದ ಕಾರಣ ನೀರಿನ ಸಂಗ್ರಹದ ಸಾಮರ್ಥ್ಯ ಕುಸಿದಿದೆ. ಒತ್ತುವರಿ ಕಾಟದಿಂದ ಈಗಾಗಲೇ ಸಾಕಷ್ಟು ಕೆರೆ ಪಾತ್ರ ಕಿರಿದಾಗಿದೆ. ಹಿಂದಿದ್ದ ದಕ್ಷ ಅಧಿಕಾರಿ ಡಾ.ಎಚ್‌.ಎಲ್‌. ನಾಗರಾಜು ತಹಶೀಲ್ದಾರ್‌ ಆಗಿದ್ದಾಗ ಕೆರೆ ಒತ್ತುವರಿಗಾಗಿ ಶ್ರಮಿಸಿದ್ದರು. ವರ್ಗಾವಣೆ ನಂತರ ಕೆರೆ ಒತ್ತುವರಿ ತೆರವಾಗಿಲ್ಲ. ಹೀಗಾಗಿ ನೀರಿನ ಸಾಂದ್ರತೆ ಕಳೆದುಕೊಂಡಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಬಿಸಿಲಿಗೆ ಜೀವಿಗಳು ತತ್ತರ: ಕೆರೆಯಲ್ಲಿ ನೀರು ತುಂಬಿದ್ದರೆ ಮಾತ್ರ, ಇಲ್ಲಿನ ರೈತರ ಬದುಕು ಹಸನು ಕಾಣಬಹುದಾಗಿದೆ. ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಬಿಸಿಲಿಗೆ ಪ್ರಾಣಿಪಕ್ಷಿಗಳು ತತ್ತರಿಸುತ್ತಿವೆ. ನೀರಿನ ಜೋಪಾನ ಮಾಡಿಕೊಳ್ಳಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಗಮನಹರಿಸದಿದ್ದರೆ, ಬೇಸಿಗೆ ಮುಗಿಯುವು ದರೊಳಗೆ ಸಂಪೂರ್ಣ ಕೆರೆ ಬರಿದಾಗುವ ಜೊತೆಗೆ ಪ್ರಾಣಿಪಕ್ಷಿಗಳ ಜೀವಕ್ಕೆ ಕುತ್ತು ಕಾಡಲಿದೆ. ಅಕ್ರಮವಾಗಿ ಕೆರೆ ನೀರಿನ ಬಳಕೆ ವರ್ಷಪೂರ್ಣ ಕೆರೆದಂಡೆಯ ಪ್ರದೇಶಗಳಲ್ಲಿ ನಡೆಯುತ್ತಿದೆ. ಅಧಿಕಾರಿಗಳು ಕಂಡು ಕಾಣದಂತೆ ಕಣ್ಣುಮುಚ್ಚಿಕೊಂಡಿರುವುದೇ ಇಂತಹ ಅಕ್ರಮ ಕಾರಣ ಎನ್ನುವುದು ನಾಗರಿಕರ ನಿವೇದನೆಯಾಗಿದೆ.

ಅಧಿಕಾರಿಗಳು ಮೌನ: ಕಿಕ್ಕೇರಮ್ಮನ ಗುಡಿಯ ರಸ್ತೆಯಿಂದ ಶ್ರವಣಬೆಳಗೂಳಕ್ಕೆ ಹೋಗುವ ರಸ್ತೆಯ ಬೂನಹಳ್ಳಿ ತಿರುವು, ಮಾದಿಹಳ್ಳಿ, ಸೊಳ್ಳೇಪುರ, ಬ್ರಹ್ಮೇಶ್ವರ ದೇಗುಲ ಕೆರೆ ದಂಡೆಯಲ್ಲಿ ಅಕ್ರಮವಾಗಿ ಪಂಪ್‌ ಮೂಲಕ ನೀರಿನ ಬಳಕೆ ಎಗ್ಗಿಲ್ಲದೆ ಸಾಗುತ್ತಿದೆ. ಪ್ರಭಾವಿ ವ್ಯಕ್ತಿಗಳ ಕೃತ್ಯಕ್ಕೆ ಅಧಿಕಾರಿಗಳು ಮೌನವಾಗಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಕಳೆದ ಎರಡು ವರ್ಷದಿಂದ ನಾಮಕಾವಸ್ಥೆಗೆ ಅಧಿಕಾರಿಗಳು ಅಕ್ರಮ ಮೋಟಾರ್‌ ಅಳವಡಿಸಿ ಕೊಂಡಿರುವ ರೈತರ ಪಂಪುಸೆಟ್‌ ವಶಪಡಿಸಿಕೊ ಳ್ಳುವುದು, ನಂತರ ಒಂದೆರಡು ದಿನಗಳ ನಂತರ ಎಂದಿನಂತೆ ನಡೆಯುವುದು ಯಥಾಸ್ಥಿತಿಯಂ ತಾಗಿದೆ ಎಂಬ ದೂರುಗಳು ಕೇಳಿಬರುತ್ತಿದೆ.

ಕೆರೆಯಲ್ಲಿ ಜಾನುವಾರುಗಳಿಗೂ ಕುಡಿಯಲು ನೀರು ಬಿಡದೆ ಅಕ್ರಮವಾಗಿ ಅಳವಡಿಸಿಕೊಂಡಿರುವ ಮೋಟಾರ್‌ಗಳನ್ನು ಕೂಡಲೇ ಅಧಿಕಾರಿಗಳು ವಶಪಡಿಸಿಕೊಂಡು, ಕ್ರಮ ಕೈಗೊಳ್ಳಬೇಕಿದೆ ಎಂದು ರೈತರು ಆಗ್ರಹಿಸಿದ್ದಾರೆ.

ಕೆರೆಯ ನೀರು ಬಳಸಿಕೊಳ್ಳುತ್ತಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿ, ಯಂತ್ರಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು. – ಗುರುಪ್ರಸಾದ್‌, ಎಇಇ, ಕಾವೇರಿ ನೀರಾವರಿ ನಿಗಮ

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.