ಸಿದ್ದರಾಮಯ್ಯನವರ ಪ್ರಮಾಣ ವಚನಕ್ಕೆ ತಮಿಳುನಾಡು ಸಿಎಂಗೆ ಆಹ್ವಾನ
Team Udayavani, May 18, 2023, 5:17 PM IST
ಬೆಂಗಳೂರು: ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಆಹ್ವಾನಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ ಸ್ಟಾಲಿನ್ ಅವರಿಗೆ ಕರೆ ಮಾಡಿ ಮೇ 20 ರಂದು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮೇ 20ರಂದು ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮಿತ್ರಪಕ್ಷಗಳ ನಾಯಕರನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾಅನಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 135+1 ಸ್ಥಾನಗಳನ್ನು ಗಳಿಸುವ ಮೂಲಕ ಪ್ರಚಂಡ ಗೆಲುವು ಸಾಧಿಸಿದರೆ, ಆಡಳಿತಾರೂಢ ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.