ಸಿದ್ದರಾಮಯ್ಯ 2ನೇ ಬಾರಿಗೆ ಸಿಎಂ ಆಗಿ ಆಯ್ಕೆ; ಕೊಪ್ಪಳ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮ
Team Udayavani, May 18, 2023, 6:44 PM IST
ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದ ಕನಕದಾಸ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಸಿದ್ದರಾಮಯ್ಯ ಎರಡನೇ ಅವಧಿಗೆ ಸಿಎಂ ಆಗಿ ಮತ್ತು ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಆಯ್ಕೆಯಾಗಿ ಉತ್ತಮ ಆಡಳಿತ ನೀಡುವ ಭರವಸೆಯೊಂದಿಗೆ ಕೈ ಅಧಿಕಾರಕ್ಕೆ ಬರುತ್ತಿರುವುದು ಹೆಮ್ಮೆ ತಂದಿದೆ ಎಂದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ಪಕ್ಷಕ್ಕೆ ಎರಡು ಕಣ್ಣು ಇದ್ದಂತೆ. ಇಬ್ಬರೂ ಸೇರಿ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಲಿದ್ದಾರೆ. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಪಕ್ಷ ಜಯಭೇರಿ ಭಾರಿಸುವ ಮೂಲಕ ದೇಶದಲ್ಲಿ ಹೊಸ ಮನ್ವಂತರ ಸೃಷ್ಟಿಸಲಿದೆ. ಅದಕ್ಕೆ ಪಕ್ಷ ಮೊದಲು ಎಂದು ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಈಗಿನಿಂದಲೇ ಶ್ರಮವಹಿಸಿ ಕೆಲಸ ಮಾಡಬೇಕು. ಬರುವ ಸೋಮವಾರದಿಂದಲೇ ಪಕ್ಷ ಸಂಘಟನೆಯ ಕೆಲಸ ಆರಂಭವಾಗುತ್ತದೆ, ವಿಶೇಷವಾಗಿ ಮಹಿಳಾ ಸಂಘಟನೆ ಬಲಿಷ್ಠಗೊಳಿಸುವ ನಿಟ್ಟಲ್ಲಿ ಕೆಲಸ ಮಾಡುವುದಾಗಿ ಇಬ್ಬರೂ ನಾಯಕರಿಗೆ ಶುಭ ಹಾರೈಸಿದರು.
ಈ ವೇಳೆ ಜಿಲ್ಲಾ ಅಲ್ಪಸಂಖ್ಯಾತರ ಕಾಂಗ್ರೆಸ್ ಅಧ್ಯಕ್ಷ ಸಲೀಂ ಅಳವಂಡಿ, ಎಸ್. ಟಿ. ಘಟಕ ಅಧ್ಯಕ್ಷ ಮಂಜುನಾಥ ಗೊಂಡಬಾಳ, ಮುಖಂಡರಾದ ಕುಬೇರ ಮಜ್ಜಿಗಿ, ಹನುಮಂತಪ್ಪ ಕೌದಿ, ದ್ಯಾಮಣ್ಣ ಕರಿಗಾರ, ಸೌಭಾಗ್ಯ ಗೊರವರ್, ಅಂಬಿಕಾ ನಾಗರಾಳ, ಪದ್ಮಾವತಿ ಕಂಬಳಿ, ಶಿಲ್ಪಾ ಗುಡ್ಲಾನೂರ, ರೇಖಾ ಬಿಜಾಪೂರ, ಸಂತೋಷ ಕುರಿ, ಪರಶುರಾಮ ಅಣ್ಣಿಗೇರಿ, ಗ್ಯಾನಪ್ಪ, ವಿರುಪಾಕ್ಷಿ, ಬೆಳ್ಳೆಪ್ಪ ಬೇವಿನಹಳ್ಳಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.