Karnataka Govt: ಯಾರಾಗಲಿದ್ದಾರೆ ಸಿದ್ದರಾಮಯ್ಯ ಸಂಪುಟದ ಸಚಿವರು?

ಮುಖ್ಯಮಂತ್ರಿ ಬಿಕ್ಕಟ್ಟು ಶಮನ ಬೆನ್ನಿಗೆ ಸಂಪುಟ ಸವಾಲು: ಮೂರು ಡಜನ್‌ಗೂ ಅಧಿಕ ಪ್ರಬಲ ಸಚಿವಾಕಾಂಕ್ಷಿಗಳು

Team Udayavani, May 19, 2023, 8:16 AM IST

CONGRESS FLAG IMP

ಬೆಂಗಳೂರು: ಮುಖ್ಯ ಮಂತ್ರಿ-ಉಪ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಈಗ ಹೈಕಮಾಂಡ್‌ಗೆ ಸಂಪುಟ ರಚನೆ ಸವಾಲು ಎದುರಾಗಿದೆ.

ಬಹುತೇಕ ಘಟಾನುಘಟಿ ನಾಯಕರು ಗೆಲುವು ಸಾಧಿಸಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ಪ್ರಾರಂಭಿಸಿದ್ದಾರೆ. ಹೀಗಾಗಿ ಮತ್ತೂಂದು ಬಿಕ್ಕಟ್ಟು ಎದುರಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಸಂಪುಟದ ಗಾತ್ರ 34ಕ್ಕೆ ಸೀಮಿತವಾಗಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ನೇಮಕಗೊಂಡಿರುವುದರಿಂದ ಉಳಿದ 32 ಸ್ಥಾನಗಳಿಗೆ ಭಾರೀ ಪೈಪೋಟಿ ನಡೆದಿದೆ.

ಹಿರಿಯರಾದ ಆರ್‌.ವಿ.ದೇಶಪಾಂಡೆ, ಕೆ.ಎಚ್‌. ಮುನಿಯಪ್ಪ, ಡಾ| ಜಿ.ಪರಮೇಶ್ವರ್‌, ಎಚ್‌.ಸಿ. ಮಹದೇವಪ್ಪ, ಬಿ.ಕೆ.ಹರಿಪ್ರಸಾದ್‌, ಎಂ.ಬಿ.ಪಾಟೀಲ್‌, ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್‌, ಎಚ್‌.ಕೆ.ಪಾಟೀಲ್‌, ಟಿ.ಬಿ.ಜಯಚಂದ್ರ, ಸತೀಶ್‌ ಜಾರಕಿಹೊಳಿ, ಬಸವರಾಜ ರಾಯರೆಡ್ಡಿ, ಕೃಷ್ಣಬೈರೇಗೌಡ, ಎನ್‌.ವೈ.ಗೋಪಾಲಕೃಷ್ಣ, ಯು.ಟಿ.ಖಾದರ್‌, ಜಮೀರ್‌ ಅಹಮದ್‌, ನಸೀರ್‌ ಅಹ್ಮದ್‌, ರಹೀಂ ಖಾನ್‌, ಸಲೀಂ ಅಹಮದ್‌, ಮಧು ಬಂಗಾರಪ್ಪ, ಎಸ್‌.ಎಸ್‌.ಮಲ್ಲಿಕಾರ್ಜುನ, ಈಶ್ವರ್‌ ಖಂಡ್ರೆ, ಕೆ.ಎನ್‌.ರಾಜಣ್ಣ, ಸುಬ್ಟಾರೆಡ್ಡಿ, ಡಾ| ಶರಣಪ್ರಕಾಶ್‌ ಪಾಟೀಲ್‌, ನಾಗೇಂದ್ರ, ಗವಿಯಪ್ಪ, ಲಕ್ಷ್ಮಣ ಸವದಿ, ಲಕ್ಷ್ಮಿ ಹೆಬ್ಟಾಳ್ಕರ್‌, ಪ್ರಿಯಾಂಕ್‌ ಖರ್ಗೆ, ಡಾ| ಅಜಯ್‌ ಸಿಂಗ್‌, ನರೇಂದ್ರ ಸ್ವಾಮಿ, ಶಿವರಾಜ್‌ ತಂಗಡಗಿ, ಶಿವಲಿಂಗೇಗೌಡ, ಚಲುವರಾಯಸ್ವಾಮಿ ಹೀಗೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಈ ಪೈಕಿ ಮೊದಲ ಕಂತಿನಲ್ಲಿ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಷ್ಟೆ.

ಶನಿವಾರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಜತೆಗೆ ಹತ್ತು ಅಥವಾ ಹನ್ನೆರಡು ಸಚಿವರು ಪ್ರಮಾಣ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲೆ, ಜಾತಿ, ಪ್ರಾದೇಶಿಕತೆ ಆಧಾರದ ಮೇಲೆ ಮೊದಲಿಗೆ ಪ್ರಮುಖರ ಸೇರ್ಪಡೆಗೆ ಚಿಂತನೆ ನಡೆದಿದೆ.

ಬೆಂಗಳೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಕರಾವಳಿ-ಮಲೆನಾಡು ಭಾಗ ಹೀಗೆ ಎಲ್ಲ ಭಾಗಗಳಿಗೂ ಪ್ರಾತಿನಿಧ್ಯ ಕೊಡಬೇಕಾಗಿದೆ. ಒಕ್ಕಲಿಗ, ಲಿಂಗಾಯತ, ಪರಿಶಿಷ್ಟ ಜಾತಿ ಎಡಗೈ, ಬಲಗೈ, ಬೋವಿ, ಲಂಬಾಣಿ, ಕುರುಬ, ಮುಸ್ಲಿಂ, ಕ್ರೈಸ್ತ , ಬ್ರಾಹ್ಮಣ ಹೀಗೆ ಎಲ್ಲ ಸಮುದಾಯಗಳಿಗೂ ಅವಕಾಶ ನೀಡಲು ಚರ್ಚೆಗಳು ನಡೆದಿವೆ.

ಒಂದು ಡಜನ್‌ ಶಾಸಕರು ಸಚಿವರಾಗುತ್ತಾರೋ ಅಥವಾ 2 ಡಜನ್‌ ಶಾಸಕರಿಗೆ ಅವಕಾಶ ಸಿಗು ತ್ತದೋ ಎಂಬುದು ಶುಕ್ರವಾರ ರಾತ್ರಿ ತಿಳಿಯಲಿದೆ.
ಶುಕ್ರವಾರ ಬೆಳಗ್ಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ತೆರಳಲಿದ್ದು, ಸಂಪುಟಕ್ಕೆ ಸೇರಿಸಿಕೊಳ್ಳುವವರ ಪಟ್ಟಿಗೆ ವರಿಷ್ಠರ ಒಪ್ಪಿಗೆ ಪಡೆದು ಬರಲಿದ್ದಾರೆ. ಬೆಂಗಳೂರಿಗೆ ತೆರಳಿದ ಬಳಿಕ ಎಐಸಿಸಿ ಅನುಮೋದಿತ ಸಂಭವನೀಯ ಸಚಿವರ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗುವುದು. ಹೀಗಾಗಿ ಮೊದಲ ಕಂತಿನಲ್ಲೇ ಸಂಪುಟ ಸೇರ್ಪಡೆಗೆ ಹಿರಿಯ ತಲೆಗಳು ಭಗೀರಥ ಪ್ರಯತ್ನ ನಡೆಸಿವೆ.

ಸ್ಪೀಕರ್‌ ಯಾರು?
ಆರ್‌.ವಿ.ದೇಶಪಾಂಡೆ, ಎಚ್‌.ಕೆ.ಪಾಟೀಲ್‌, ಟಿ.ಬಿ.ಜಯಚಂದ್ರ, ಬಸವರಾಜ ರಾಯರೆಡ್ಡಿ , ಕೆ.ಎಚ್‌.ಮುನಿಯಪ್ಪ ಹೆಸರುಗಳು ಸ್ಪೀಕರ್‌ ಸ್ಥಾನಕ್ಕೆ ಕೇಳಿಬರುತ್ತಿದೆ. ಇವರೆಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಗಳೂ ಆಗಿದ್ದಾರೆ. ಈ ಹಿಂದೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಕೆಲಸ ಮಾಡಿದ ಅನುಭವವುಳ್ಳ ಟಿ.ಬಿ.ಜಯಚಂದ್ರ, ಎಚ್‌.ಕೆ.ಪಾಟೀಲ್‌ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ.

ಒಂದೇ ವಿಮಾನದಲ್ಲಿ ಬಂದಿಳಿದ ಜೋಡೆತ್ತುಗಳು
ಬೆಂಗಳೂರು: ನಗರದ ಎಚ್‌ಎಎಲ್‌ ವಿಮಾನ ನಿಲ್ದಾಣ ಗೇಟ್‌ ಹೊರಗೆ ಗುರುವಾರ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಹಬ್ಬದ ವಾತಾವರಣ ಮೇಳೈಸಿತ್ತು. ಕುಮಾರ ಕೃಪಾ ರಸ್ತೆಯಲ್ಲಿರುವ ಸಿದ್ದರಾಮಯ್ಯ ಅವರ ಸರಕಾರಿ ನಿವಾಸ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸದಾಶಿವ ನಗರದ ಖಾಸಗಿ ನಿವಾಸದಲ್ಲಿ ಹಬ್ಬದ ಸಂಭ್ರಮ ಸೃಷ್ಟಿಯಾಗಿತ್ತು.

ಅಭಿಮಾನಿಗಳು ಹಾಗೂ ಕಾರ್ಯಕರ್ತರು ಇಬ್ಬರು ನಾಯಕ ರಿಗೂ ಹೂಮಳೆಗೈದು ಸ್ವಾಗತ ಕೋರಿದರು. ಇದಕ್ಕೂ ಮೊದಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಸ್ವಾಗತಿಸಲು ಕಾರ್ಯಕರ್ತರ ದೊಡ್ಡ ದಂಡು ವಿಮಾನ ನಿಲ್ದಾಣದ ರಸ್ತೆ ಇಕ್ಕೆಲಗಳಲ್ಲಿ ನೆರೆದಿತ್ತು. ಇವರ ಸಂಭ್ರಮಕ್ಕೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ಮೆರಗು ಮತ್ತಷ್ಟು ಕಳೆ ತಂದಿತು. ಇಬ್ಬರು ನಾಯಕರೂ ಒಂದೇ ವಿಮಾನದಲ್ಲಿ ದಿಲ್ಲಿಯಿಂದ ಬಂದಿಳಿದಾಗ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಬಳಿಕ ಅವರಿಬ್ಬರೂ ಪ್ರತ್ಯೇಕ ಕಾರುಗಳಲ್ಲಿ ತಮ್ಮ ನಿವಾಸದತ್ತ ತೆರಳಿದರು.

ಸಿದ್ದರಾಮಯ್ಯ ನಿವಾಸದಲ್ಲೂ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಶಾಸಕ ಶಿವಲಿಂಗೇಗೌಡ, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ಬೈರತಿ ಸುರೇಶ್‌ ಮುಂತಾದ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ಉಪಸ್ಥಿತರಿದ್ದರು. ಇದಾದ ಸ್ವಲ್ಪ ಹೊತ್ತಿನಲ್ಲೇ ಸಿದ್ದು ತಮ್ಮ ಬೆಂಬಲಿಗರೊಂದಿಗೆ ಕೆಪಿಸಿಸಿ ಕಚೇರಿಯತ್ತ ನಡೆದರು.

ಡಿಕೆಶಿ ನಿವಾಸದಲ್ಲೂ ಬೆಂಬಲಿಗರ ದಂಡು
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸದಾಶಿವನಗರ ನಿವಾಸದಲ್ಲೂ ಕಾರ್ಯಕರ್ತರು ಮತ್ತು ಅಭಿಮಾನಿಗಳು ನೆರೆದಿದ್ದರು. ಶಿವಕುಮಾರ್‌ ಅವರ ಬೆಂಬಲಿಗ ಶಾಸಕರೂ ಇದ್ದರು. ಅಭಿಮಾನಿಗಳಿಂದ ಸ್ವಾಗತ ಸ್ವೀಕರಿಸಿದ ಬಳಿಕ ಡಿಕೆಶಿ ಅವರು ಕೆಪಿಸಿಸಿ ಕಚೇರಿಯತ್ತ ತೆರಳಿದರು.

ಕಾರು ಚಲಾಯಿಸಿದ ಬೈರತಿ ಸುರೇಶ್‌
ಸಿದ್ದರಾಮಯ್ಯ ಅವರು ಕಪ್ಪು ಬಣ್ಣದ ಮರ್ಸಿಡಿಸ್‌ ಜಿ ವ್ಯಾಗನ್‌ (ಎಸ್‌ಯುವಿ) ಕಾರಿನಲ್ಲಿ ವಿಮಾನ ನಿಲ್ದಾಣದಿಂದ ಮನೆಯತ್ತ ಸಾಗಿದ್ದು, ಈ ಕಾರನ್ನು ಸಿದ್ದರಾಮಯ್ಯ ಅವರ ಆಪ್ತ ಶಾಸಕ ಬೈರತಿ ಸುರೇಶ್‌ ಚಲಾಯಿಸಿದ್ದು ವಿಶೇಷವಾಗಿತ್ತು. ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಕೂಡ ಜತೆಗಿದ್ದರು. ಎಚ್‌ಎಎಲ್‌ ರಸ್ತೆ ಇಕ್ಕೆಲಗಳಲ್ಲಿ ನೆರೆದಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಿದ್ದರಾಮಯ್ಯ ಕಾರಿಗೆ ಹೂವಿನ ಮಳೆಗೆರೆದರು. ಅವರ ಪರ ಘೋಷಣೆ ಮೊಳಗಿಸಿದರು. ಪ್ರತ್ಯೇಕ ಕಾರಿನಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್‌ ತೆರಳಿದರು.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.