Bihar: ಬಿಸಿಯೂಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ
Team Udayavani, May 19, 2023, 1:08 PM IST
ಪಾಟ್ನಾ: ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಗುರುವಾರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಿತು.
ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 36 ವಿದ್ಯಾರ್ಥಿಗಳು ಈಗ ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ವೈದ್ಯ ಡಾ.ಸಂತೋಷ್ ತಿಳಿಸಿದ್ದಾರೆ.
ಈ ಘಟನೆ ಕುರಿತು ಜಿಲ್ಲಾಡಳಿತ ಮಾಹಿತಿ ಕೇಳಿದೆ.ಎಸ್ಡಿಎಂ ಸಂಜಯ್ ಕುಮಾರ್ ರೈ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
40 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವಿಸಿದ್ದಾರೆ, ಅದರಲ್ಲಿ 36 ಮಂದಿ ಅಸ್ವಸ್ಥರಾಗಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ಸರಬರಾಜು ಮಾಡುವ ಎನ್ಜಿಒ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.