Kadaba; ಒಂದೇ ಸೂರಿನಡಿ ಸರಕಾರಿ ಸೇವೆ ನೀಡಲು ಜನರ ಆಗ್ರಹ
ಕಡಬ: ಉದ್ಘಾಟನೆಗೊಂಡರೂ ಸೇವೆಗೆ ತೆರೆದುಕೊಳ್ಳದ ಮಿನಿ ವಿಧಾನ ಸೌಧ
Team Udayavani, May 19, 2023, 3:18 PM IST
ಕಡಬ: ನೂತನವಾಗಿ ನಿರ್ಮಾಣಗೊಂಡ ಕಡಬದ ಮಿನಿ ವಿಧಾನಸೌಧ (ತಾಲೂಕು ಆಡಳಿತ ಸೌಧ) ಕಾಮಗಾರಿ ಪೂರ್ಣಗೊಂಡು ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳ ಮೊದಲು ಲೋಕಾರ್ಪಣೆಗೊಂಡಿತ್ತು. ಆದರೆ ಉದ್ಘಾಟನೆಯಾಗಿ 2 ತಿಂಗಳಾಗುತ್ತಾ ಬಂದರೂ ನೂತನ ಕಟ್ಟಡವು ಸಾರ್ವಜನಿಕ ಸೇವೆಗೆ ತೆರೆದುಕೊಂಡಿಲ್ಲ. ಕೂಡಲೇ ಸಂಬಂಧಪಟ್ಟ ಕಚೇರಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಒಂದೇ ಸೂರಿನಡಿ ಸರಕಾರಿ ಸೇವೆ ನೀಡಬೇಕೆನ್ನುವ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಕಡಬ ತಾಲೂಕು ಕೇಂದ್ರವಾದರೂ ಕಂದಾಯ ಇಲಾಖೆಗೆ ಸಂಬಂಧಿಸಿದ ಬೇರೆ ಬೇರೆ ಕಚೇರಿಗಳು ಒಂದೇ ಸೂರಿನಡಿ ಬಾರದೇ ಇದ್ದುದರಿಂದ ಜನರು ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ಅಲೆದಾಡಬೇಕಾದ ಅನಿವಾರ್ಯತೆ ಮಾತ್ರ ತಪ್ಪಿರಲಿಲ್ಲ. ಕೆಲ ವರ್ಷಗಳ ಹಿಂದೆ ಕಡಬ ಎಪಿಎಂಸಿ ಉಪ ಪ್ರಾಂಗಣದ ಬಳಿಯ ಸ್ವಂತ ಕಟ್ಟಡಕ್ಕೆ ತಹಶೀಲ್ದಾರ್ ಕಚೇರಿ ಸ್ಥಳಾಂತರವಾದರೂ ಭೂಮಿ ಕೇಂದ್ರ, ಕಂದಾಯ ನಿರೀಕ್ಷಕರ ಕಚೇರಿ ಹಾಗೂ ದಾಖಲೆಗಳ ಕೊಠಡಿ ಈ ಹಿಂದೆ ತಹಶೀಲ್ದಾರ್ ಕಚೇರಿ ಇದ್ದ ಪಟ್ಟಣ ಪಂಚಾಯತ್‌ನ ಬಾಡಿಗೆ ಕಟ್ಟಡದಲ್ಲಿಯೇ ಉಳಿದಿತ್ತು. ಭೂಮಾಪನಾ ಇಲಾಖಾ ಕಚೇರಿಯೂ ಕಡಬ ಪೇಟೆಯ ಬಾಡಿಗೆ ಕೊಠಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದುದರಿಂದ ಕಂದಾಯ ಇಲಾಖಾ ಕೆಲಸಕಾರ್ಯಗಳಿಗೆ ಗ್ರಾಮಗಳಿಂದ ತಾಲೂಕು ಕೇಂದ್ರಕ್ಕೆ ಬರುವ ಜನಕ್ಕೆ ಅಲೆದಾಟ ತಪ್ಪಿರಲಿಲ್ಲ. ಇದೀಗ ಸುಸಜ್ಜಿತವಾದ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧದಲ್ಲಿ ಒಂದೇ ಸೂರಿನಡಿ ವಿವಿಧ ಇಲಾಖೆಗಳ ಕಚೇರಿಗಳು ತೆರೆದುಕೊಂಡರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.
10 ಕೋಟಿ ರೂ. ವೆಚ್ಚದ
ನೂತನ ಕಟ್ಟಡ
ಜನಸಾಮಾನ್ಯರಿಗೆ ಅನುಕೂಲ ವಾಗುವಂತೆ ಒಂದೇ ಸೂರಿನಡಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳು ತೆರೆಯಲ್ಪಡಬೇಕು ಎನ್ನುವ ಸರಕಾರದ ಆಶಯದಂತೆ ಕಡಬದಲ್ಲಿ ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮಂಜೂರುಗೊಂಡು ತಹಶೀಲ್ದಾರ್‌ಕಚೇರಿ ಬಳಿ ಸರ್ವೆ ನಂಬ್ರ 130/1ಎಪಿ2 ರಲ್ಲಿ ಇರುವ 1.60 ಎಕ್ರೆ ಜಮೀನಿನಲ್ಲಿ ಕರ್ನಾಟಕ ಗೃಹ ಮಂಡಳಿಯ ಮೂಲಕ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಗೊಂಡಿದೆ. ನೂತನ ಸೌಧದಲ್ಲಿ ತಹಶೀಲ್ದಾರರ ಕಚೇರಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ಶಾಸಕರ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಸರ್ವೆ ಇಲಾಖೆ ಕಚೇರಿಗಳು ಕಾರ್ಯನಿರ್ವಹಿಸಲಿವೆ.
ಜೂನ್ ವೇಳೆಗೆ ಲಭ್ಯ
ನೂತನ ಕಟ್ಟಡದ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿ ತಾಂತ್ರಿಕ ತೊಡಕುಗಳಿದ್ದ ಕಾರಣದಿಂದಾಗಿ ಕಚೇರಿಗಳು ಸ್ಥಳಾಂತರಗೊಂಡಿಲ್ಲ. ಶೀಘ್ರ ವಿದ್ಯುತ್ ಸಂಪರ್ಕದ ಕೆಲಸ ಪೂರ್ಣಗೊಳ್ಳಲಿದೆ. ವಿದ್ಯುತ್ ಸಂಪರ್ಕದ ಕೆಲಸ ಪೂರ್ಣಗೊಂಡ ಕೂಡಲೇ ಕಟ್ಟಡ ನಮ್ಮ ಸುಪರ್ದಿಗೆ ಬರಲಿದೆ. ಮುಂದಿನ ತಿಂಗಳ (ಜೂನ್) ಪ್ರಥಮ ವಾರದಲ್ಲಿ ಸಂಬಂಧಪಟ್ಟ ಕಚೇರಿಗಳು ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಸಾರ್ವಜನಿಕರಿಗೆ ಸೇವೆ ನೀಡಲಿದೆ.
-ರಮೇಶ್ ಬಾಬು, ತಹಶೀಲ್ದಾರರು, ಕಡಬ ತಾಲೂಕು
-ನಾಗರಾಜ್ ಎನ್.ಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.