ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಕುಸಿತ; ನಗರವಾಸಿಗಳಿಗೆ ಆತಂಕ

ಮೇಯರ್‌, ಆಯುಕ್ತರಿಂದ ತುಂಬೆ ಡ್ಯಾಂ ಭೇಟಿ-ಪರಿಶೀಲನೆ

Team Udayavani, May 19, 2023, 3:30 PM IST

ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಕುಸಿತ; ನಗರವಾಸಿಗಳಿಗೆ ಆತಂಕ

ಮಹಾನಗರ: ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್‌ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಉತ್ತಮ ಮಳೆ ಶೀಘ್ರ ಸುರಿಯದಿದ್ದರೆ ನಗರವಾಸಿಗಳ ಕುಡಿಯುವ ನೀರಿಗೆ ಆತಂಕ ಎದುರಾಗುವ ಎಲ್ಲ ಸಾಧ್ಯತೆಗಳಿವೆ.

ಮಂಗಳೂರು ಮೇಯರ್‌ ಜಯಾನಂದ ಅಂಚನ್‌ ಹಾಗೂ ಆಯುಕ್ತ ಚನ್ನಬಸಪ್ಪ ಅವರು ಗುರುವಾರ ತುಂಬೆ ಡ್ಯಾಂಗೆ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಸದಸ್ಯ ರಾಧಾಕೃಷ್ಣ ಜತೆಗಿದ್ದರು.

ಲಭ್ಯ ಇರುವ ನೀರಿನ ಪ್ರಮಾಣ ಹಾಗೂ ಅದರ ಸರಬರಾಜು ವಿಚಾರದ ಬಗ್ಗೆ ಅವರು ಅಧಿಕಾರಿಗಳ ಜತೆಗೆ ವಿವರವಾಗಿ ಚರ್ಚಿಸಿದರು. ಈಗಿನ ರೇಷನಿಂಗ್‌ ನಿಯಮವನ್ನೇ ಯಥಾಸ್ಥಿತಿಯಲ್ಲಿ ಮುಂದುವರಿಸುವುದು ಅಥವಾ ರೇಷನಿಂಗ್‌ ನಿಯಮದಲ್ಲಿ ಬದಲಾವಣೆ ತಂದರೆ ಆಗಬಹುದೇ? ಎಂಬ ವಿಚಾರದಲ್ಲಿ ಮಾತುಕತೆ ನಡೆಸಿದರು.

ಆಯುಕ್ತ ಚನ್ನಬಸಪ್ಪ ಅವರು “ಉದಯವಾಣಿ’ ಜತೆಗೆ ಮಾತನಾಡಿ, “ತುಂಬೆ ಡ್ಯಾಂನಲ್ಲಿ ಸದ್ಯ 3.41 ಮೀ. ನೀರು ಸಂಗ್ರಹವಿದೆ. ದಿನ ಬಿಟ್ಟು ದಿನ ಎಂಬಂತೆ ರೇಷನಿಂಗ್‌ ನಿಯಮ ಈಗಾಗಲೇ ಮಂಗಳೂರಿನಲ್ಲಿ ಜಾರಿಯಲ್ಲಿದೆ. ಮಳೆ ಬರುವ ನಿರೀಕ್ಷೆಯೂ ಇದೆ. ಹೀಗಾಗಿ ಸದ್ಯಕ್ಕೆ ರೇಷನಿಂಗ್‌ ನಿಯಮ ಪರಿಷ್ಕರಣೆ ಬಗ್ಗೆ ಯಾವುದೇ ಚಿಂತನೆಯಿಲ್ಲ. ಈಗಿನ ರೇಷನಿಂಗ್‌ ಕ್ರಮವನ್ನೇ ಸದ್ಯಕ್ಕೆ ಮುಂದುವರಿಸಲಾಗುವುದು’ ಎಂದರು.

ಡ್ಯಾಂನ ಕೆಳಭಾಗದಿಂದ 60 ಎಂಎಲ್‌ಡಿ ನೀರು
ಹೊಸ ಡ್ಯಾಂ ನಿರ್ಮಾಣದ ಬಳಿಕ ನೀರು ಹರಿಯುವ ರಭಸಕ್ಕೆ ಡ್ಯಾಂನ ಕೆಳಭಾಗದಲ್ಲಿ ಬೃಹತ್‌ ಹೊಂಡಗಳಾಗಿದ್ದು, ಇದರಲ್ಲಿ ಸುಮಾರು 4 ಮೀ.ನಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಿದೆ ಎಂದು ಅಂದಾಜಿಸಲಾಗಿದೆ. ಹರೇಕಳ ಡ್ಯಾಂ ನಿರ್ಮಾಣವಾದ ಕಾರಣದಿಂದ ಈ ವರ್ಷ ತುಂಬೆ ಡ್ಯಾಂನ ಕೆಳ ಭಾಗದಲ್ಲಿ ಉಪ್ಪು ನೀರಿನ ಸಮಸ್ಯೆ ಇಲ್ಲ. ಹೀಗಾಗಿ ಬೃಹತ್‌ ಪಂಪ್‌ ಸಹಾಯದಿಂದ ಕೆಳಭಾಗದಿಂದ ನೀರು ಮೇಲಕ್ಕೆತ್ತುವ ಕಾರ್ಯ ಇಲ್ಲಿ ನಿರಂತರವಾಗಿ ನಡೆಯುತ್ತಿದೆ. ಪ್ರತೀದಿನ 50ರಿಂದ 60 ಎಂಎಲ್‌ಡಿ ನೀರು ಈ ರೀತಿ ಡ್ಯಾಂಗೆ ಪಂಪ್‌ ಮಾಡಲಾಗುತ್ತಿದೆ.

ಮಂಗಳೂರಿಗೆ ನಿತ್ಯ 160 ಎಂಎಲ್‌ಡಿ ನೀರು ಸರಬರಾಜು ಮಾಡುವ ಕಾರಣದಿಂದ ಶೇ.40ರಷ್ಟು ನೀರು ಡ್ಯಾಂನ ಕೆಳಭಾಗದಿಂದ ಪಡೆಯಲಾಗುತ್ತಿದೆ. ಸಾಮಾನ್ಯವಾಗಿ 1 ದಿನದಲ್ಲಿ 10 ಸೆಂ.ಮೀ. ನೀರು ತುಂಬೆ ಡ್ಯಾಂನಲ್ಲಿ ಕಡಿಮೆಯಾಗುತ್ತದೆ. ಆದರೆ ಈಗ ಡ್ಯಾಂನ ಕೆಳಭಾಗದ ನೀರು ಪಂಪಿಂಗ್‌ ಮಾಡುವ ಕಾರಣ ಸದ್ಯ 7 ಸೆಂ.ಮೀ.ನಷ್ಟು ನೀರು ಕಡಿಮೆಯಾಗುತ್ತಿದೆ. ಮಂಗಳೂರು ಪಾಲಿಕೆ ಅಧಿಕಾರಿಗಳ ತಂಡ, ಸಿಬಂದಿ ಇದಕ್ಕಾಗಿ ಹಗಲೂ-ರಾತ್ರಿ ಶ್ರಮಿಸುತ್ತಿದ್ದಾರೆ. ಎಂಆರ್‌ಪಿಎಲ್‌ ಸಂಸ್ಥೆ ಕೂಡ ಇದಕ್ಕಾಗಿ ನೆರವು ನೀಡಿದೆ.

ಸಾರ್ವಜನಿಕರ ಸಹಕಾರ ಮುಖ್ಯ
ತುಂಬೆ ಡ್ಯಾಂನಲ್ಲಿ ಸದ್ಯಕ್ಕೆ ಇರುವ ನೀರನ್ನು ಈಗಿನ ರೇಷನಿಂಗ್‌ ನಿಯಮದ ಪ್ರಕಾರವೇ ಸರಬರಾಜು ಮಾಡಲು ತೀರ್ಮಾನಿಸಲಾಗಿದೆ. ನೀರಿನ ಸಮರ್ಪಕ ಸರಬರಾಜಿಗಾಗಿ ವಿಶೇಷ ಪ್ರಯತ್ನ ನಡೆಸಲಾಗುತ್ತಿದೆ. ನೀರಿನ ಮಿತವಾದ ಬಳಕೆಗಾಗಿ ಸಾರ್ವಜನಿಕರು ಪಾಲಿಕೆಯ ಜತೆಗೆ ಕೈ ಜೋಡಿಸಿದರೆ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.
– ಜಯಾನಂದ ಅಂಚನ್‌, ಮೇಯರ್‌, ಪಾಲಿಕೆ

ಟಾಪ್ ನ್ಯೂಸ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

5

Mangaluru: ಪ್ಲಾಸ್ಟಿಕ್‌ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ

4

Mangaluru: ಕಾರಿಗೆ ಬೆಂಕಿ; ನಿರ್ವಹಣ ನಿರ್ಲಕ್ಷ್ಯ ಕಾರಣ?

3

Ullal: ಬಡವರ ಬಿಪಿಎಲ್‌ ಕಿತ್ತುಕೊಳ್ಳಬೇಡಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.