DCC Bank ಅಧ್ಯಕ್ಷ ಸ್ಥಾನಕ್ಕೆ ರಾಜ್ ಕುಮಾರ್ ಪಾಟೀಲ್ ತೇಲ್ಕೂರ ರಾಜೀನಾಮೆ
ಅಭಿವೃದ್ಧಿ ಮುಂದುವರೆಸಿಕೊಂಡು ಹೋಗುವರು ಅಧ್ಯಕ್ಷರಾಗಲಿ
Team Udayavani, May 19, 2023, 9:02 PM IST
ಕಲಬುರಗಿ: ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ( ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಕುಮಾರ್ ಪಾಟೀಲ್ ತೇಲ್ಕೂರ ರಾಜೀನಾಮೆ ನೀಡಿದ್ದಾರೆ.
ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿದ್ದು, ತಕ್ಷಣ ಜಾರಿಗೆ ಬರುವಂತೆ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ.ತಾವು ಅಧ್ಯಕ್ಷರಾದ ನಂತರ ಎರಡುವರೆ ವರ್ಷಗಳಿಂದ ಸ್ಥಗಿತ ವಾಗಿದ್ದ ಬಡ್ಡಿ ರಹಿತ ಸಾಲ ಪ್ರಾರಂಭಿಸಲಾಗಿರುವುದು ಎಲ್ಲರಿಗೂ ತಿಳಿದ ವಿಷಯ. ತಾವು ಅಧ್ಯಕ್ಷರಾದ ಮೇಲೆ ಬ್ಯಾಂಕ್ ಲಾಭದತ್ತ ಹೆಜ್ಜೆ ಹಾಕಿತು. ಇನ್ನಷ್ಟು ಬ್ಯಾಂಕ್ ಅಭಿವೃದ್ಧಿ ಹೊಂದಿ ಕಲಬುರಗಿ- ಯಾದಗಿರಿ ಜಿಲ್ಲೆಯ ಎಲ್ಲ ಪ್ರತಿಯೊಬ್ಬ ರೈತರಿಗೆ ಸಾಲ ಕೊಡಿಸಲು ಉದ್ದೇಶಿಸಲಾಗಿತ್ತು. ಆದರೆ ಅದು ಕೈಗೂಡಲಿಲ್ಲ. ಮುಂದೆ ಅಧ್ಯಕ್ಷರಾದವರು ಅದನ್ನು ಸಾಕಾರಗೊಳೊಸಲಿ. ತಾವು ಬ್ಯಾಂಕ್ ನ ಅಧ್ಯಕ್ಷರಾದ ಮೇಲೆ ಸೇಡಂ ತಾಲೂಕಿಗೆ 120 ಕೋ.ರೂಬಡ್ಡಿ ರಹಿತ ಸಾಲ ವಿತರಿಸಲಾಗಿದೆ. ಆದರೆ ತಾವು ಅಧ್ಯಕ್ಷರಾಗುವ ಮುಂಚೆ ಸೇಡಂ ತಾಲೂಕಿಗೆ ಕೇವಲ ಎಂಟು ಕೋ.ರೂ ಸಾಲ ಬೆಳೆಸಾಲ ವಿತರಿಸಲಾಗಿತ್ತು ಎಂದಿದ್ದಾರೆ.
ಪ್ರಮುಖವಾಗಿ ಸೇಡಂ ತಾಲೂಕಿನಲ್ಲಿ ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ 15 ಸಾವಿರಕ್ಕೂ ಅಧಿಕ ಹೆಚ್ಚು ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಕಲ್ಪಿಸಲು ಸಾಲ ನೀಡಲಾಗಿದೆ. ನೂರಾರು ಕೋಟಿ ರೂ ಠೇವಣಿ ತಂದಿರುವುದು, ಕಲಬುರಗಿಯಲ್ಲಿ ಬ್ಯಾಂಕ್ ಗೆ ನಿವೇಶನ ಖರೀದಿಸುವುದರ ಜತೆಗೇ ಹತ್ತಾರು ನಿಟ್ಟಿನ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ಹೈನೋದ್ಯಮ ಹೆಚ್ಚಳಕ್ಕೆ ಯೋಜನೆ ರೂಪಿಸಿ ಚಾಲನೆ ನೀಡಲಾಗಿರುವುದನ್ನು ಹಾಗೂ ಎಲ್ಲರಿಗೂ ಸಾಲ ದೊರಕಿಸಲು ಹೊಸ ಅಧ್ಯಕ್ಷರು ಮುಂದಾಗಬೇಕು ಎಂದು ತೇಲ್ಕೂರ ರೈತರ ಪರವಾಗಿ ಸಲಹೆ ನೀಡಿದ್ದಾರೆ.
ಬ್ಯಾಂಕ್ ನ ಅಭಿ ವೃದ್ಧಿ ಹಿತದೃಷ್ಟಿಯಿಂದ ಹಾಗೂ ಪ್ರತಿಯೊಬ್ಬ ರೈತಗೆ ಸಾಲ ದೊರಕಲು ರಾಜಕುಮಾರ ಪಾಟೀಲ್ ಅವರೇ ಅಧ್ಯಕ್ಷರಾಗಿ ಮುಂದುವರೆಯುವುದು ಅಗತ್ಯವಾಗಿದೆ ಹಾಗೂ ಸೂಕ್ತವಾಗಿದೆ ಎಂದು ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.