ಖ್ಯಾತ ನೇತ್ರ ತಜ್ಞ ಡಾ.ಕೆ. ಭುಜಂಗ ಶೆಟ್ಟಿ ವಿಧಿವಶ
Team Udayavani, May 19, 2023, 10:52 PM IST
ಬೆಂಗಳೂರು : ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ. ಭುಜಂಗ ಶೆಟ್ಟಿ (69) ಅವರು ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಇಂದು ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ ಮನೆಯಲ್ಲಿ ತೀವ್ರ ಹೃದಯಾಘಾತವಾಗಿದೆ. ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಡಾ.ಭುಜಂಗ ಶೆಟ್ಟಿ ನಿಪುಣ ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿದ್ದರು. 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ ಅವರು 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದ್ದರು. ಅವರು ಎಂಬತ್ತರ ದಶಕದಲ್ಲಿ ಸಣ್ಣ ಕ್ಲಿನಿಕ್ನಲ್ಲಿ ನೇತ್ರಶಾಸ್ತ್ರವನ್ನು ಪ್ರಾರಂಭಿಸಿದರು. ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಿ ದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.