Monsoon: ಜೂ.1ರಿಂದಲೇ ಮುಂಗಾರು ಶುರು?
Team Udayavani, May 20, 2023, 7:55 AM IST
ಹೊಸದಿಲ್ಲಿ/ತಿರುವನಂತಪುರ: ಪ್ರಸಕ್ತ ಸಾಲಿನ ಮುಂಗಾರು ಜೂ.4ರಿಂದ ಶುರುವಾಗಲಿದೆ ಎಂದು ಹೇಳಿದ್ದ ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೊಸ ಮುನ್ನೆಚ್ಚರಿಕೆ ನೀಡಿದೆ. ಅದರ ಪ್ರಕಾರ ಮುಂಗಾರು ಮಳೆಗೆ ಕಾರಣವಾಗುವ ನೈಋತ್ಯ ಮಾರುತಗಳು ಬಂಗಾಲ ಕೊಲ್ಲಿಯ ಆಗ್ನೇಯ ಭಾಗ, ದಕ್ಷಿಣ ಅಂಡಮಾನ್ ಸಮುದ್ರದ ಭಾಗದಲ್ಲಿ ಏಳಲು ಶುರುವಾಗಿವೆ. ಇದರಿಂದಾಗಿ ನಿರೀಕ್ಷೆಯಂತೆಯೇ ಜೂ.1ರಿಂದಲೇ ಮಳೆಗಾಲ ಶುರುವಾಗುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಮುಂದಿನ ಐದು ದಿನಗಳಲ್ಲಿ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರರಿಂದ ನಾಲ್ಕು ದಿನಗಳ ಒಳಗಾಗಿ ಹಾಲಿ ಉಂಟಾಗಿರುವ ಮುಂಗಾರು ಮಳೆಯ ಸೂಚನೆಗಳು ಮತ್ತಷ್ಟು ಪ್ರಬಲವಾಗುವ ಸಾಧ್ಯತೆಗಳು ಇವೆ ಎಂದು ಐಎಂಡಿ ಹೇಳಿದೆ. ಕಳೆದ ವರ್ಷ ಮೇ 29ರಂದು ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿತ್ತು. 2021ರಲ್ಲಿ ಜೂ.3, 2020ರಲ್ಲಿ ಜೂ.1, 2019ರಲ್ಲಿ ಜೂ.8, 2018ರಲ್ಲಿ ಮೇ 29ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-3 ಬರುವುದು ಕನ್ಫರ್ಮ್.. ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.