ಮಡಿಕೇರಿ: ವೈವಿಧ್ಯಮಯ ಕೊಡವ ಯುವ ಮೇಳ

Team Udayavani, May 21, 2023, 6:00 AM IST

ಮಡಿಕೇರಿ: ವೈವಿಧ್ಯಮಯ ಕೊಡವ ಯುವ ಮೇಳ

ಮಡಿಕೇರಿ: ಕೊಡಗಿನ ವೈಶಿಷ್ಟ್ಯಪೂರ್ಣ ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳ ಕುರಿತು ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಕೊಡವ ಯುವ ಮೇಳವು ಜಬ್ಬೂಮಿ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ನಗರದಲ್ಲಿ, ಅತ್ಯಾಕರ್ಷಕ ಮೆರವಣಿಗೆ, ಕೊಡವ ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ನಡೆಯಿತು.

ಶನಿವಾರ ಬೆಳಗ್ಗೆ ನಗರದ ನೂತನ ಖಾಸಗಿ ಬಸ್‌ ನಿಲ್ದಾಣದ ಬಳಿ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕೊಡವ ಜನಾಂಗದ ಸಾಧಕರ ಭಾವಚಿತ್ರಗಳೊಂದಿಗೆ ಕೊಡವ ಸಾಂಪ್ರದಾಯಿಕ ಉಡುಪು ಧರಿಸಿದ ಯುವಕರು, ಯುವತಿಯರು, ಕೊಡವ ಪರಂಪರೆಯ ಸಂಕೇತವಾದ ಕೋವಿಯನ್ನು ಹಿಡಿದು ಮೆರವಣಿಗೆಯಲ್ಲಿ ಗತ್ತಿನಿಂದ ಹೆಜ್ಜೆ ಹಾಕಿದರು.

ಮೆರವಣಿಗೆಯಲ್ಲಿ ಹಲವಾರು ಮಂದಿ ಬೈಕ್‌ ಜಾಥಾ ನಡೆಸಿ ಕುತೂಹಲ ಮೂಡಿಸಿದರೆ, ದುಡಿಕೊಟ್ಟ್ ಪಾಟ್‌, ಕೊಂಬು ಕೊಟ್ಟ್ ವಾಲಗಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಹಲವರು ಮೆರವಣಿಗೆಯ ಕಳೆ ಹೆಚ್ಚಿಸಿದರೆ, ಸಾಂಪ್ರದಾಯಿಕ ಒಡಿಕತ್ತಿ ಹಿಡಿದು ಶಿಸ್ತಿನಿಂದ ಹೆಜ್ಜೆ ಹಾಕಿ ಕೊಡವ ಸಂಸ್ಕೃತಿಯ ಶ್ರೀಮಂತಿಕೆ ಪಸರಿಸಿದರು.

ತೆರೆದ ವಾಹನದಲ್ಲಿ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಸಾಧಕರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆಯುದ್ದಕ್ಕೂ ಕೊಡವ ವಾಲಗಕ್ಕೆ ಯುವ ಸಮುದಾಯ ಕುಣಿದು ಕುಪ್ಪಳಿಸಿತು. ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಅಲ್ಲದೇ ಬೆಂಗಳೂರು, ಮೈಸೂರು, ಮಂಗಳೂರು ಮತ್ತಿತರರ ಕಡೆಗಳಿಂದಲೂ ಕೊಡವ ಜನಾಂಗದವರು ಪಾಲ್ಗೊಂಡದ್ದು ವಿಶೇಷ. ಮೆರವಣಿಗೆ ಸಂದರ್ಭ ಸ್ವಾಡ್ರನ್‌ಲೀಡರ್‌ ಅಜ್ಜಮಾಡ ದೇವಯ್ಯ ಪ್ರತಿಮೆ, ಮಂಗೇರಿರ ಮತ್ತಣ್ಣ ಪ್ರತಿಮೆ, ಜನರಲ್‌ ತಿಮ್ಮಯ್ಯ ಪ್ರತಿಮೆ, ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಕೊಡವ ಸಂಸ್ಕೃತಿಯ ಮರೆಯದಿರಿ
ಕ್ರಿಸ್ಟಲ್‌ ಕೋರ್ಟ್‌ ಸಭಾಂಗಣದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಜಬ್ಬೂಮಿ ಚಾರಿಟೆಬಲ್‌ ಟ್ರಸ್ಟ್‌ನ ಸಂಚಾಲಕ ಚೊಟ್ಟೆಕ್‌ ಮಾಡ ರಾಜೀವ್‌ ಬೋಪಯ್ಯ ಅವರು ಮಾತನಾಡಿ, ಕೊಡಗಿನ ಸಂಸ್ಕೃತಿ, ಪರಂಪರೆಗಳನ್ನು ಯುವ ಸಮೂಹ ಎಂದಿಗೂ ಮರೆಯಕೂಡದು. ಅದೇ ಕೊಡವ ಸಮುದಾಯದ ತಾಯಿಬೇರು ಎಂದು ಈ ನೆಲದ ಸಂಸ್ಕೃತಿಯ ಮಹತ್ವವನ್ನು ತಿಳಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.