Karnataka: 28ರ ಪಟ್ಟಿ 8ಕ್ಕೆ ಇಳಿದಿದ್ದು ಹೇಗೆ?
ದಿಲ್ಲಿಯಲ್ಲಿ ಮಧ್ಯರಾತ್ರಿ ಪ್ರಹಸನ 20 ಮಂದಿ ಹೆಸರು ಮುಂದಕ್ಕೆ
Team Udayavani, May 21, 2023, 7:13 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಮೊದಲ ಹಂತದಲ್ಲೇ 28 ಮಂದಿ ಸೇರ್ಪಡೆ ನಿರೀಕ್ಷೆಯಿತ್ತಾದರೂ ಮಧ್ಯರಾತ್ರಿ ನಡೆದ “ಪ್ರಹಸನದಲ್ಲಿ’ ಎಂಟಕ್ಕೆ ಇಳಿದಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಸಂಪುಟಕ್ಕೆ ಯಾರು ಸೇರ್ಪಡೆಯಾಗಬೇಕು, ಯಾರಾಗಬಾರದು ಎಂಬ ವಿಚಾರದಲ್ಲಿ ನಡೆದ ಜಟಾಪಟಿಯಿಂದ ಇಪ್ಪತ್ತು ಮಂದಿ ಔಟ್ ಆದರು ಎಂದು ಮೂಲಗಳು ತಿಳಿಸಿವೆ.
ಸಂಪುಟಕ್ಕೆ ಸೇರ್ಪಡೆ ಸಂಬಂಧ ಸಿದ್ದರಾಮಯ್ಯ ಒಂದು ಪಟ್ಟಿ, ಡಿ.ಕೆ.ಶಿವಕುಮಾರ್ ಒಂದು ಪಟ್ಟಿ, ಇದರ ನಡುವೆ ಮಲ್ಲಿಕಾರ್ಜುನ ಖರ್ಗೆ, ಸುಜೇìವಾಲಾ- ಕೆ.ಸಿ.ವೇಣುಗೋಪಾಲ್ ಅವರ ಬಳಿ ಮತ್ತೂಂದು ಪಟ್ಟಿ ರೆಡಿ ಇತ್ತು. ಆದರೆ ಸಹಮತ ಮೂಡದ ಕಾರಣ ಮೂರೂ ಪಟ್ಟಿಯಲ್ಲಿದ್ದ ಎಂಟು ಮಂದಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ ದೊರೆಯಿತು ಎಂದು ತಿಳಿದು ಬಂದಿದೆ.
ಮೊದಲ ಪಟ್ಟಿಯಲ್ಲೇ ಸೇರ್ಪಡೆ ಆಸೆ ಹೊಂದಿದ್ದ ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್, ಟಿ.ಬಿ.ಜಯಚಂದ್ರ, ಲಕ್ಷ್ಮಣ ಸವದಿ, ಎಚ್.ಸಿ.ಮಹದೇವಪ್ಪ, ಯು.ಟಿ.ಖಾದರ್, ಲಕ್ಷ್ಮೀ ಹೆಬ್ಟಾಳ್ಕರ್, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಶಿವಲಿಂಗೇಗೌಡ , ಮಧು ಬಂಗಾರಪ್ಪ, ಬಸವರಾಯ ರಾಯರೆಡ್ಡಿ ಸೇರಿ ಹಲವರಿಗೆ ಇದೀಗ ನಿರಾಸೆಯಾಗುವಂತಾಗಿದೆ. ಜತೆಗೆ ಕೆಲವು ಹಿರಿಯರು ಬೇಸರವನ್ನೂ ಆಪ್ತರ ಮುಂದೆ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಇವೆಲ್ಲದರ ನಡುವೆ ವಿಧಾನಷರಿಷತ್ ವಿಪಕ್ಷ ನಾಯಕರಾಗಿದ್ದ ಬಿ.ಕೆ.ಹರಿಪ್ರಸಾದ್ ಅವರ ಹೆಸರು ಮೊದಲ ಪಟ್ಟಿಯಲ್ಲಿ ಇಲ್ಲದಿರುವುದು ಅಚ್ಚರಿ ಮೂಡಿಸಿದೆ. ಪರಿಷತ್‌ನಿಂದ ಬಿ.ಕೆ.ಹರಿಪ್ರಸಾದ್, ಸಲೀಂ ಅಹಮದ್ ಹೆಸರು ಸೇರ್ಪಡೆಯ ನಿರೀಕ್ಷೆಯಿತ್ತು ಎನ್ನಲಾಗಿದೆ.
ಸಂಪುಟ ರಚನೆಗೆ ಸಂಬಂಧಿಸಿದಂತೆ ರಾತ್ರಿ 11 ಗಂಟೆವರೆಗೂ 28 ಮಂದಿ ಸೇರ್ಪಡೆಯ ಪಟ್ಟಿ ಸಿದ್ಧವಾಗಿತ್ತು. ಆ ಅನಂತರ ಅದು ಬದಲಾಯಿತು ಎಂದು ಹೇಳಲಾಗಿದೆ.
ಬೋಸರಾಜ್‌ಗೆ ವಿರೋಧ: ಇದರ ಜತೆಗೆ ಯಾವುದೇ ಸದನದ ಸದಸ್ಯರಲ್ಲದ ವಿಧಾನಪರಿಷತ್‌ನ ಮಾಜಿ ಸದಸ್ಯ ಎನ್.ಎಸ್.ಬೋಸರಾಜ್ ಹೆಸರು ಮೊದಲ ಪಟ್ಟಿಯಲ್ಲೇ ಸೇರಲು ಒತ್ತಡ ಇತ್ತಾದರೂ, ಬೇರೆ ರೀತಿಯ ಸಂದೇಶ ಹೋಗಬಹುದು ಎಂದು ಕೈ ಬಿಡಲಾಯಿತು ಎಂದು ಹೇಳಲಾಯಿತು.
ಜಮೀರ್‌ಗೆ ಡಿ.ಕೆ. ವಿರೋಧ: ಜಮೀರ್ ಅಹಮದ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಸೇರಿಸಲು ಡಿ.ಕೆ.ಶಿವಕುಮಾರ್ ಅವರ ವಿರೋಧವಿತ್ತು ಎನ್ನಲಾಗುತ್ತಿದೆ. ಆದರೆ ಸಿದ್ದರಾಮಯ್ಯ ಅವ ರು ಪಟ್ಟು ಬಿಡದೆ ಸೇರಿಸಿದರು. ಡಿ.ಕೆ.ಶಿವಕುಮಾರ್ ಪ್ರಸ್ತಾವಿಸಿದ ಮುಸ್ಲಿಂ ಶಾಸಕರ ಬಗ್ಗೆ ಸಿದ್ದರಾಮಯ್ಯ, ತಮ್ಮ ಕ್ಷೇತ್ರ ಹೊರತು ಪಡಿಸಿ ಇನ್ನೊಂದು ಕ್ಷೇತ್ರದಲ್ಲಿ ಮತ ತರದವರಿಗೆ ಅವಕಾಶ ಕೊಡಲು ಆಗದು. ಸ್ಟಾರ್ ಪ್ರಚಾರಕರಾಗಿ 100ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ ಪಕ್ಷಕ್ಕೆ ಶಕ್ತಿ ತುಂಬಿದ ಜಮೀರ್ ಅಹಮದ್ ಬಿಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹಠ ಹಿಡಿದರು ಎಂದು ಮೂಲಗಳು ಹೇಳಿವೆ. ಆಗ ಇದಕ್ಕೆ ರಾಜ್ಯ ಉಸ್ತುವಾರಿ ರಣದೀಪ್ ಸುಜೇìವಾಲಾ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಹ ಸಮ್ಮತಿಸಿದರು ಎಂದು ಹೇಳಲಾಗಿದೆ.
ಸಾಮಾಜಿಕ ನ್ಯಾಯ
ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದ ಹತ್ತು ಮಂದಿಯ ಪೈಕಿ ಒಕ್ಕಲಿಗ, ಲಿಂಗಾಯತ ಹಾಗೂ ಹಿಂದುಳಿದ ವರ್ಗದಿಂದ ಒಬ್ಬಬ್ಬರೇ ಪ್ರತಿನಿಧಿ. ಉಳಿದಂತೆ ಎಸ್‌ಸಿ-ಎಸ್‌ಟಿ ಕೋಟಾದ ಬಲಗೈನ ಇಬ್ಬರು, ಎಡಗೈನ ಒಬ್ಬರು, ಪರಿಶಿಷ್ಟ ಪಂಗಡದ ಒಬ್ಬರಿಗೆ ಅವಕಾಶ ಮಾಡಿಕೊಡಲಾಗಿದೆ. ಅಲ್ಪಸಂಖ್ಯಾಕ ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಕ್ಕೆ ಒಂದೊಂದು ಸ್ಥಾನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.