ನೋಟು ವಿನಿಮಯಕ್ಕೆ ದಾಖಲೆ ಅಗತ್ಯವಿಲ್ಲ: SBI ಸ್ಪಷ್ಟನೆ
ಅರ್ಜಿ ತುಂಬಬೇಕಾಗಿಲ್ಲ, ಗುರುತಿನ ಚೀಟಿಯೂ ಬೇಕಾಗಿಲ್ಲ: ನಾಳೆಯಿಂದ ದೇಶಾದ್ಯಂತ ಶುರುವಾಗಲಿದೆ ಪ್ರಕ್ರಿಯೆ
Team Udayavani, May 22, 2023, 7:12 AM IST
ನವದೆಹಲಿ: ಎರಡು ಸಾವಿರ ರೂ. ನೋಟುಗಳನ್ನು ವಾಪಸ್ ಪಡೆಯುವ ಪ್ರಕ್ರಿಯೆ ಬ್ಯಾಂಕ್ ಶಾಖೆಗಳಲ್ಲಿ ಮಂಗಳವಾರ (ಮೇ 23)ದಿಂದ ಶುರುವಾಗಲಿದೆ. ಅದಕ್ಕಾಗಿ ಯಾವುದೇ ಫಾರಂಗಳನ್ನು ಭರ್ತಿ ಮಾಡುವುದು ಅಥವಾ ಗುರುತಿನ ಚೀಟಿ ನೀಡುವ ಅಗತ್ಯವಿಲ್ಲವೆಂದು ಎಸ್‌ಬಿಐ ಭಾನುವಾರ ಪ್ರಕಟಿಸಿದೆ.
2 ಸಾವಿರ ರೂ. ನೋಟು ವಿನಿಮಯ ಮಾಡಲು ಕೋರಿಕೆ ರಸೀತಿ (ರಿಕ್ವಿಸಿಷನ್ ಸ್ಲಿಪ್), ಗುರುತಿನ ಚೀಟಿ ನೀಡಬೇಕು, ಫಾರಂ ಭರ್ತಿ ಮಾಡಿಕೊಡಬೇಕು ಎಂದು ಹಲವು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದವು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವಂತೆ, “ನೋಟು ವಿನಿಮಯ ಕೌಂಟರ್‌ಗಳಲ್ಲಿ ಒಂದು ಬಾರಿಗೆ ಒಬ್ಬರಿಂದ 20 ಸಾವಿರ ರೂ.ವರೆಗೆ ಕೋರಿಕೆ ರಸೀತಿ ಇಲ್ಲದೆ ಸ್ವೀಕರಿಸಬೇಕು’ ಎಂದು ಸ್ಥಳೀಯ ಪ್ರಧಾನ ಕಚೇರಿಗಳಿಗೆ ಕಳುಹಿಸಲಾಗಿರುವ ಸೂಚನೆಯಲ್ಲಿ ಎಸ್‌ಬಿಐ ಮುಖ್ಯ ಜನರಲ್ ಮ್ಯಾನೇಜರ್ ಸ್ಪಷ್ಟಪಡಿಸಿದ್ದಾರೆ.
ವಿನಿಮಯ ಸಂದರ್ಭದಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ಗುರುತಿನ ಚೀಟಿ ಸಲ್ಲಿಸಬೇಕಾಗಿಲ್ಲ. ಸ್ವಂತ ಖಾತೆಗೆ 2 ಸಾವಿರ ರೂ. ನೋಟುಗಳನ್ನು ಠೇವಣಿ ಇರಿಸಲು ಆರ್‌ಬಿಐ ಮಿತಿ ಹೇರಿಲ್ಲ. ಆದರೆ, ಅಗತ್ಯಕ್ಕೆ ತಕ್ಕಂತೆ “ನಿಮ್ಮ ಗ್ರಾಹಕರನ್ನು ಅರಿಯಿರಿ’ (ಕೆವೈಸಿ) ಪ್ರಕ್ರಿಯೆಗಳನ್ನು ಕೇಳಿದಲ್ಲಿ ನೀಡಬೇಕಾಗುತ್ತದೆ ಎಂದಿದ್ದಾರೆ.
ಶನಿವಾರದಿಂದಲೇ ಶುರು:
ಅಧಿಕೃತವಾಗಿ ಮಂಗಳವಾರದಿಂದ ನೋಟು ವಿನಿಮಯ ಪ್ರಕ್ರಿಯೆ ಆರಂಭವಾಗುವುದಿದ್ದರೂ, ಶನಿವಾರವೇ ದೇಶದ ಕೆಲವು ಭಾಗಗಳಲ್ಲಿ ಬ್ಯಾಂಕ್‌ಗಳ ಶಾಖೆಗಳಿಗೆ ಗ್ರಾಹಕರು ವಿನಿಮಯಕ್ಕಾಗಿ ಆಗಮಿಸಿದ್ದರು. ಕೆಲವು ಮಂದಿ ಕ್ಯಾಶ್ ಡೆಪಾಸಿಟ್ ಮಷಿನ್‌ಗಳನ್ನು ಬಳಕೆ ಮಾಡಿಕೊಂಡದ್ದೂ ಬೆಳಕಿಗೆ ಬಂದಿದೆ. ಇತರ ಪ್ರಕರಣಗಳಲ್ಲಿ ಸಾರ್ವಜನಿಕರು ಚಿನ್ನಾಭರಣಗಳನ್ನು 2 ಸಾವಿರ ರೂ. ನೋಟುಗಳ ಮೂಲಕ ಖರೀದಿ ಮಾಡಲು ಪ್ರಯತ್ನ ಮಾಡಿದ್ದರು. ಕೆಲವು ಚಿನ್ನಾಭರಣ ಮಳಿಗೆಗಳಲ್ಲಿ 2 ಸಾವಿರ ರೂ. ನೋಟುಗಳನ್ನು ಸ್ವೀಕರಿಸಲು ಒಪ್ಪಿಕೊಳ್ಳಲಿಲ್ಲ ಎಂದು ಹೇಳಲಾಗಿದೆ.
ಮತ್ತೂಮ್ಮೆ ಬರಬಹುದು?
ಒಂದು ಬಾರಿ ವ್ಯಕ್ತಿ 20 ಸಾವಿರ ರೂ.ಗಳನ್ನು ವಿನಿಮಯ ಮಾಡಿಕೊಂಡ ಬಳಿಕ ಅದೇ ವ್ಯಕ್ತಿ ಮತ್ತೂಂದು ಬಾರಿ ಸರತಿಯಲ್ಲಿ ನಿಂತು ನೋಟುಗಳ ವಿನಿಮಯ ಮಾಡಿಕೊಳ್ಳಲು ಅವಕಾಶ ಇದೆ ಎಂದು ಮೂಲಗಳು ತಿಳಿಸಿವೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.