Actor Aditya Singh Rajput: ಮನೆಯ ವಾಶ್ ರೂಮ್ ನಲ್ಲಿ ಶವವಾಗಿ ಪತ್ತೆಯಾದ ಬಾಲಿವುಡ್ ನಟ
ಕಳೆದ ರಾತ್ರಿ ಸ್ನೇಹಿತರೊಂದಿಗಿದ್ದ ನಟ ಇಂದು ಶವವಾಗಿ ಪತ್ತೆ
Team Udayavani, May 22, 2023, 5:43 PM IST
ಮುಂಬಯಿ: ನಟ,ಮಾಡೆಲ್ ಆಗಿ ಬಾಲಿವುಡ್ ನಲ್ಲಿ ಗುರುತಿಸಿಕೊಂಡಿದ್ದ ಆದಿತ್ಯ ಸಿಂಗ್ ರಜಪೂತ್ ತಮ್ಮ ಮನೆಯ ವಾಶ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಮಧ್ಯಾಹ್ನ(ಮೇ.22 ರಂದು) ಜನಪ್ರಿಯ ನಟ, ಮಾಡೆಲ್ ಮತ್ತು ಕಾಸ್ಟಿಂಗ್ ಸಂಯೋಜಕರಾಗಿದ್ದ ಆದಿತ್ಯ ಸಿಂಗ್ ರಜಪೂತ್ ಅಂಧೇರಿಯಲ್ಲಿರುವ ತಮ್ಮ ನಿವಾಸದ ವಾಶ್ ರೂಮ್ ಶವವಾಗಿ ಪತ್ತೆಯಾಗಿದ್ದಾರೆ.
ನಟನ ಸ್ನೇಹಿತ ಹಾಗೂ ಕಟ್ಟಡದ ಸೆಕ್ಯೂರಿಟಿ ಗಾರ್ಡ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಅಧಿಕ ಪ್ರಮಾಣದಲ್ಲಿ ಡ್ರಗ್ ಸೇವಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಕಳೆದ ರಾತ್ರಿ ಸ್ನೇಹಿತರೊಂದಿಗೆ ಇರುವ ಬಗ್ಗೆ ನಟ ಇನ್ಸ್ಟಾಗ್ರಾಮ್ ನಲ್ಲಿ ಸ್ಟೋರಿಯನ್ನು ಹಾಕಿದ್ದರು.
ಆದಿತ್ಯ ಸಿಂಗ್ ರಜಪೂತ್ ಮಾಡೆಲ್, ನಟನಾಗಿ ಗುರುತಿಸಿಕೊಂಡಿದ್ದರು. ನಟರೊಂದಿಗೆ ಅನೇಕ ಬ್ರ್ಯಾಂಡ್‌ಗಳಿಗೆ ಕೆಲಸ ಮಾಡಿದ್ದರು.
ʼಕ್ರಾಂತಿವೀರ್ ʼ, ʼಮೈನೆ ಗಾಂಧಿ ಕೋ ನಹಿಂ ಮಾರಾʼ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಅವರು, 300 ಕ್ಕೂ ಹೆಚ್ಚಿನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಶೋ ʼ Splitsvilla-9ʼ ರಲ್ಲಿ ಭಾಗವಹಿಸಿದ್ದರು. ʼಲವ್ʼ, ʼಆಶಿಕಿʼ, ʼಕೋಡ್ ರೆಡ್ʼ, ʼಆವಾಜ್ ಸೀಸನ್ 9ʼ, ʼಬ್ಯಾಡ್ ಬಾಯ್ ಸೀಸನ್ 4ʼ ಮತ್ತು ಇತರ ಟಿವಿ ಶೋಗಳಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.