ನೀರಿನ ಆಳ ನೋಡಲು ಹೋಗಿ ಕೊಚ್ಚಿ ಹೋದ ಯುವಕ!

Team Udayavani, May 23, 2023, 2:01 PM IST

tdy-8

ಬೆಂಗಳೂರು: ನಗರದಲ್ಲಿ ಭಾನುವಾರ ಸುರಿದ ಭಾರೀ ಮಳೆಗೆ ಎರಡನೇ ಬಲಿಯಾಗಿದೆ. ರಾಜಕಾಲುವೆಗೆ ಇಳಿದು ಕೊಚ್ಚಿಕೊಂಡು ಹೋಗಿದ್ದ ಯುವಕನ ಮೃತದೇಹ ನಾಯಂಡಹಳ್ಳಿ ಜಂಕ್ಷನ್‌ ಬಳಿಯ ರಾಜಕಾಲುವೆಯಲ್ಲಿ ಸೋಮವಾರ ಪತ್ತೆಯಾಗಿದೆ.

ಕೆ.ಪಿ.ಅಗ್ರಹಾರ ನಿವಾಸಿ ಲೋಕೇಶ್‌ (31) ಮೃತ ದುರ್ದೈವಿ.

ರಾಜಧಾನಿಯಲ್ಲಿ ಭಾನುವಾರ ಸಂಜೆ ಮಳೆ ಸುರಿದ ಸಂದರ್ಭದಲ್ಲಿ ಕಾಲುವೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿತ್ತು. ಈ ವೇಳೆ ಸಾರ್ವಜನಿಕರ ವಿರೋಧದ ನಡುವೆಯೂ ಲೋಕೇಶ್‌ ನೀರಿನ ಆಳ ನೋಡುವುದಾಗಿ ರಾಜಕಾಲುವೆಗೆ ಇಳಿದಿದ್ದ. ಇಳಿಯುತ್ತಿದ್ದಂತೆ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ. ಸೋಮವಾರ ಲೋಕೇಶ್‌ನ ಮೃತದೇಹ ಮೈಸೂರು ರಸ್ತೆ, ನಾಯಂಡಹಳ್ಳಿ ಜಂಕ್ಷನ್‌ ಬಳಿಯ ರಾಜಕಾಲುವೆಯಲ್ಲಿ ಪತ್ತೆಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ. ಈ ಸಂಬಂಧ ಕೆ.ಪಿ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಏನಿದು ಘಟನೆ?: ಜಿ.ಟಿ. ಮಾಲ್‌ನಲ್ಲಿ ಹೌಸ್‌ ಕೀಪಿಂಗ್‌ ಕೆಲಸ ಮಾಡುತ್ತಿದ್ದ ಲೋಕೇಶ್‌ ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದರು. ಸಂಜೆ 4 ಗಂಟೆಯಲ್ಲಿ ಭಾರೀ ಮಳೆ ಸುರಿದಿದ್ದು, ಪರಿಣಾಮ ಎಲ್ಲಾ ರಾಜಕಾಲುವೆಗಳು ಹೊಳೆಯಂತೆ ಹರಿದಿವೆ. ಆಗ ಭುವನೇಶ್ವರಿನಗರ 15 ನೇ ಕ್ರಾಸ್‌, ಕೆಇಬಿ ಕಚೇರಿ ಮುಂದೆ ರಾಜಕಾಲುವೆಗೆ ಲೋಕೇಶ್‌ ನೀರಿನ ಆಳ ಪರೀಕ್ಷೆ ಮಾಡಲು ಇಳಿದಿದ್ದರು. ಈ ವೇಳೆ ಸ್ಥಳದಲ್ಲಿದ್ದವರು ಇಳಿಯಬೇಡ ಎಂದು ಎಚ್ಚರಿಕೆ ನೀಡಿದರೂ ಕೇಳದೆ ಇಳಿದಿದ್ದರು ಎಂದು ಹೇಳಲಾಗಿದೆ.

ಇಳಿಯುತ್ತಿದ್ದಂತೆ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದರು. ಬಳಿಕ ಆತನ ಮೃತದೇಹ ಸೋಮವಾರ ಬೆಳಗ್ಗೆ ನಾಯಂಡಹಳ್ಳಿ ಜಂಕ್ಷನ್‌ ಹತ್ತಿರದ ರಾಜಕಾಲುವೆಯಲ್ಲಿ ಸಿಕ್ಕಿದೆ. ಪೊಲೀಸರು ಈ ಬಗ್ಗೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಕುಟುಂಬ ಸದಸ್ಯರು ಮೃತದೇಹವನ್ನು ಗುರುತಿಸಿದ್ದು, ಬಳಿಕ ಪೊಲೀಸರು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಶವ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದ್ದಾರೆ. ಆದರೆ, ಲೋಕೇಶ್‌ ಗೊತ್ತಿಲ್ಲದೇ ಕಾಲು ಜಾರಿ ರಾಜಕಾಲುವೆಗೆ ಬಿದ್ದು ಮೃತಪಟ್ಟಿರುವುದಾಗಿ ಆತನ ಪೋಷಕರು ಹೇಳಿದ್ದಾರೆ.

ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ವರದಿ ನಂತರ ಕ್ರಮ: ಕೆ.ಪಿ.ಆಗ್ರಹಾರದಲ್ಲಿ ಯುವಕ ರಾಜಕಾಲುವೆಗೆ ಕೊಚ್ಚಿ ಹೋಗಿದ್ದಾನೆ ಎಂಬ ಮಾಹಿತಿ ಇದೆ. ಯುವಕ ಮರಣೋತ್ತರ ವರದಿ ಬಂದ ನಂತರ ಪರಿಹಾರ ಧನ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು ಘಟನೆ ಬಗ್ಗೆ ಮಾಹಿತಿ ಇದೆ. ಮರಣೋತ್ತರ ಪರೀಕ್ಷೆ ಬಂದ ನಂತರ ಮುಂದುವರಿಯಲಾಗುವುದು. ಅಕೌಂಟ್‌ ಮೂಲಕ ಪರಿಹಾರ ಧನ ಮೊತ್ತ ತಲುಪಿಸಲಾಗುವುದು ಎಂದರು.

ಟಾಪ್ ನ್ಯೂಸ್

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Mollywood: ಚಿತ್ರದ ಬಗ್ಗೆ ನೆಗೆಟಿವ್‌ ರಿವ್ಯೂ ಕೊಟ್ಟ ಯುವಕನಿಗೆ ಖ್ಯಾತ ನಟನಿಂದ ಬೆದರಿಕೆ

Mollywood: ಚಿತ್ರದ ಬಗ್ಗೆ ನೆಗೆಟಿವ್‌ ರಿವ್ಯೂ ಕೊಟ್ಟ ಯುವಕನಿಗೆ ಖ್ಯಾತ ನಟನಿಂದ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.