ದೀರ್ಘ‌ ಕಾಲದ ಬಳಿಕ ಕರಾವಳಿಗೆ “ಸ್ಪೀಕರ್‌’ ಯೋಗ


Team Udayavani, May 24, 2023, 9:56 AM IST

ದೀರ್ಘ‌ ಕಾಲದ ಬಳಿಕ ಕರಾವಳಿಗೆ “ಸ್ಪೀಕರ್‌’ ಯೋಗ

ಮಂಗಳೂರು: ಶಾಸಕ ಯು.ಟಿ. ಖಾದರ್‌ ಹೆಸರು ವಿಧಾನಸಭೆಯ “ಸ್ಪೀಕರ್‌’ ಸ್ಥಾನದ ಸ್ಪರ್ಧೆಗೆ ಖಚಿತವಾಗುತ್ತಿದ್ದಂತೆ ಸುದೀರ್ಘ‌ ವರ್ಷಗಳ ಬಳಿಕ ವಿಧಾನಸಭೆಯ ಮಹತ್ವದ “ಸ್ಪೀಕರ್‌’ ಸ್ಥಾನ ಕರಾವಳಿಗೆ ಒಲಿಯುವ ನಿರೀಕ್ಷೆಯಿದೆ.

ಕಾಂಗ್ರೆಸ್‌ ಮುಖಂಡ ಬಿ. ವೈಕುಂಠ ಬಾಳಿಗಾ 1962ರಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಅಂದಿನ ಮೈಸೂರು ವಿಧಾನಸಭೆಯ ಸ್ಪೀಕರ್‌ ಆಗಿದ್ದರು. 1967ರಲ್ಲಿ ಮತ್ತೆ ಚುನಾಯಿತರಾಗಿ ಸ್ಪೀಕರ್‌ ಹುದ್ದೆಯಲ್ಲಿ ಮುಂದುವರಿದಿದ್ದರು. ಬಳಿಕ ಈ ಬಾರಿ ಸ್ಪೀಕರ್‌ ಸ್ಥಾನ ಕರಾವಳಿಗೆ ಒಲಿದಿದೆ.

ಮಂಗಳೂರು ಕ್ಷೇತ್ರದಲ್ಲಿ ಸತತ 4 ಬಾರಿ ಗೆದ್ದಿದ್ದ ಬಿಜೆಪಿಯ ಎನ್‌. ಯೋಗೀಶ್‌ ಭಟ್‌ 2009ರಿಂದ 2013ರ ವರೆಗೆ ವಿಧಾನಸಭೆಯ ಉಪ ಸ್ಪೀಕರ್‌ ಹುದ್ದೆ ಅಲಂಕರಿಸಿದ್ದರು. ಉಡುಪಿ ಮೂಲದ ಡಾ| ಯು. ಕೃಷ್ಣ ರಾವ್‌ 1957ರಲ್ಲಿ ಮದ್ರಾಸ್‌ ವಿಧಾನಸಭೆಯ ಸ್ಪೀಕರ್‌ ಆಗಿದ್ದರು.

ವಿಧಾನ ಪರಿಷತ್‌ನಲ್ಲಿ
ಕರಾವಳಿಗೆ ಸಭಾಪತಿ
ಕಾಂಗ್ರೆಸ್‌ ನಾಯಕ ಕೆ.ಕೆ. ಶೆಟ್ಟಿ 1957ರಿಂದ 1958ರ ವರೆಗೆ ಮೈಸೂರು ವಿಧಾನ ಪರಿಷತ್‌ನ ಉಪ ಸಭಾಪತಿಯಾಗಿದ್ದರು. 1968ರಿಂದ 1970ರ ವರೆಗೆ ಸಭಾಪತಿಯಾಗಿದ್ದರು. ವಿಧಾನ ಪರಿಷತ್‌ ಸದಸ್ಯರಾದ ಪ್ರತಾಪ್‌ಚಂದ್ರ ಶೆಟ್ಟಿ ಅವರು 2018ರಿಂದ 2021ರವರೆಗೆ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು.

ಕೆ.ಎಸ್‌. ಹೆಗ್ಡೆ
ಲೋಕಸಭೆ ಸ್ಪೀಕರ್‌
1977ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಜನತಾ ಪಾರ್ಟಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಕೆ.ಎಸ್‌. ಹೆಗ್ಡೆ ಅವರು ಲೋಕಸಭೆಯ ಸ್ಪೀಕರ್‌ ಆಗಿದ್ದರು.

ಸಚಿವಾಕಾಂಕ್ಷಿಗಳಲ್ಲಿ ಗರಿಗೆದರಿದ ನಿರೀಕ್ಷೆ
ಶಾಸಕ ಯು.ಟಿ. ಖಾದರ್‌ ಸಚಿವರಾಗುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ ಕೊನೆ ಕ್ಷಣದ ಬದಲಾವಣೆಯಿಂದಾಗಿ ಸಚಿವ ಹುದ್ದೆ ಕೈ ತಪ್ಪಿ “ಸ್ಪೀಕರ್‌’ ಸ್ಥಾನಕ್ಕೆ ಖಾದರ್‌ ಸಮಾಧಾನ ಪಡುವಂತಾಗಿದೆ. ಇದರಿಂದಾಗಿ ಕರಾವಳಿಯಲ್ಲಿ ಯಾರಿಗೆ ಸಚಿವ ಗಿರಿ ಸಿಗಬಹುದು? ಎಂಬ ಬಗ್ಗೆ ಲೆಕ್ಕಾಚಾರ ಆರಂಭವಾಗಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಮೊದಲ ಬಾರಿಗೆ ಶಾಸಕ ಸ್ಥಾನ ಪಡೆದಿದ್ದು, ಸಚಿವ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ. ಮೂಲತಃ ಕರಾವಳಿಯವರಾದ ವಿಧಾನ ಪರಿಷತ್‌ನ ಬಿ.ಕೆ. ಹರಿಪ್ರಸಾದ್‌, ಮಂಜುನಾಥ ಭಂಡಾರಿ, ಹರೀಶ್‌ ಕುಮಾರ್‌ ಅವರು ಸಚಿವ ಸ್ಥಾನದ ರೇಸ್‌ನಲ್ಲಿದ್ದಾರೆ. ಇದರ ಜತೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ವಿ. ಪರಿಷತ್‌ ಮೂಲಕ ಕರೆತಂದು ಸಚಿವ ಸ್ಥಾನ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಜತೆಗೆ ಇತರರ ಹೆಸರು ಕೂಡ ಪ್ರಸ್ತಾವದಲ್ಲಿದೆ.

ಖಾದರ್‌ ನಡೆದು ಬಂದ ಹಾದಿ
ಮಂಗಳೂರು: ವಿಧಾನಸಭೆಯ ಸ್ಪೀಕರ್‌ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿರುವ ಯು.ಟಿ. ಖಾದರ್‌ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ 5ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದವರು.

ಅಂದಿನ “ಉಳ್ಳಾಲ’ ಅರ್ಥಾತ್‌ ಇಂದಿನ “ಮಂಗಳೂರು ವಿಧಾನಸಭಾ ಕ್ಷೇತ್ರ’ದಲ್ಲಿ ಯು.ಟಿ. ಫರೀದ್‌ ಅವರು 1972-1978- 1999-2004ರಲ್ಲಿ ಜಯಿಸಿದ್ದರು. ಅವರ ನಿಧನಾನಂತರ ಪುತ್ರ ಯು.ಟಿ. ಖಾದರ್‌ ಈ ಕ್ಷೇತ್ರವನ್ನು 2007, 2008, 2013, 2018 ಹಾಗೂ 2023ರಲ್ಲಿ ಜಯಿಸಿದ್ದಾರೆ. ಖಾದರ್‌ ಅವರು ಬಿಎ ಎಲ್‌ಎಲ್‌ಬಿ ಪದವೀಧರ.
2008ರಿಂದ 2013ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ “ಸದನ ವೀರ’ ಹಾಗೂ “ಶೈನಿಂಗ್‌ ಇಂಡಿಯಾ’ ಅವಾರ್ಡ್‌ ಪ್ರಶಸ್ತಿ ಗಳಿಸಿದ್ದರು. 2021ರಲ್ಲಿ ಕರ್ನಾಟಕ ವಿಧಾನಸಭೆಯ ವಿಪಕ್ಷದ ಉಪ ನಾಯಕನಾಗಿ ಆಯ್ಕೆಯಾಗಿ 2023ರ ವರೆಗೆ ಕಾರ್ಯ ನಿರ್ವಹಿಸಿದ್ದರು.

2013ರಲ್ಲಿ ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಸಚಿವರಾಗಿ 2016ರ ತನಕ ಕಾರ್ಯನಿರ್ವಹಿಸಿದರು. ಬೈಕ್‌ ಆ್ಯಂಬುಲೆನ್ಸ್‌, 108, ಆರೋಗ್ಯಶ್ರೀ, ದಂತ ಭಾಗ್ಯ, ಸರಕಾರೀ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಘಟಕ, ಹರೀಶ್‌ ಸಾಂತ್ವನ ಯೋಜನೆ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದ್ದರು. ಕೇಂದ್ರ ಸರಕಾರ ನೀಡುವ “ಉತ್ತಮ ಆರೋಗ್ಯ ಸಚಿವ’ ಪ್ರಶಸ್ತಿ ಕೂಡ ತನ್ನದಾಗಿಸಿಕೊಂಡಿದ್ದರು.

2016ರಿಂದ 2018ರ ತನಕ ಆಹಾರ ಸಚಿವರಾಗಿ ಪಡಿತರ ಚೀಟಿಗಾಗಿ ಸಲ್ಲಿಸಬೇಕಾಗಿದ್ದ 10ರಿಂದ 13 ದಾಖಲೆಗಳನ್ನು ಕಡಿತಗೊಳಿಸಿ ಕೇವಲ ಆಧಾರ್‌ ಕಾರ್ಡ್‌ ಮೂಲಕ ಅರ್ಜಿ ಸಲ್ಲಿಸಿ ಮನೆ ಬಾಗಿಲಿಗೆ ರೇಷನ್‌ ಕಾರ್ಡ್‌ ತಲುಪಿಸಲು ಶ್ರಮಿಸಿದ್ದರು. 2018ರಲ್ಲಿ ಮೈತ್ರಿ ಸರಕಾರದಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿ ಮಂಗಳೂರು ಸ್ಮಾರ್ಟ್‌ಸಿಟಿ ಸಹಿತ ಹಲವು ಯೋಜನೆಗೆ ವೇಗ ನೀಡಿದ್ದರು.

ಜನಪರ ಕೆಲಸ ಕಾರ್ಯಗಳ ಜತೆಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಿದ್ದು, ಜಾತಿ-ಧರ್ಮ ಹೊರತಾಗಿ ಎಲ್ಲರೊಂದಿಗೆ ನಿಕಟ ಜನಸಂಪರ್ಕ ಪಡೆದಿರುವುದು ಹಾಗೂ ಜಾತ್ಯತೀತ ನಿಲುವು ಪ್ರದರ್ಶಿಸಿ ಅದರಂತೆ ನಡೆದುಕೊಳ್ಳುತ್ತಿರುವುದು ಖಾದರ್‌ ಹೆಗ್ಗಳಿಕೆ.

ಟಾಪ್ ನ್ಯೂಸ್

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

robbers

Suratkal: ಮಹಿಳೆಯರಿಗೆ ನಿಂದನೆ: ಬಾಲಕರ ಸೆರೆ

1-MRPL

MRPL: ನಾಲ್ಕು ಪ್ರತಿಷ್ಠಿತ ಪಿಆರ್‌ಎಸ್‌ಐ ಶ್ರೇಷ್ಠ ಪ್ರಶಸ್ತಿ

1-k-u

Karavali Utsav: ಶ್ವಾನ ಪ್ರದರ್ಶನ, ಚಲನಚಿತ್ರೋತ್ಸವ, ಯುವಮನ

Consumer-Court

Mangaluru: ಖಾಸಗಿ ಬಸ್‌ನಲ್ಲಿ ತಿಗಣೆ ಕಡಿತ: ಮಹಿಳೆಗೆ 1.29 ಲಕ್ಷ ರೂ. ಪರಿಹಾರ ನೀಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.