Dandeli: ವಸತಿ ಗೃಹದಲ್ಲೇ ನೇಣಿಗೆ ಶರಣಾದ ಕಾಗದ ಕಾರ್ಖಾನೆಯ ಕಾರ್ಮಿಕ
Team Udayavani, May 24, 2023, 6:17 PM IST
ದಾಂಡೇಲಿ: ನಗರದ ಬಂಗೂರನಗರದ ಹಳೆ ಡಿ.ಆರ್.ಟಿಯಲ್ಲಿ ಕಾಗದ ಕಾರ್ಖಾನೆಯ ಕಾರ್ಮಿಕರೊಬ್ಬರು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ.
ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಪೇಪರ್ ಮೇಷಿನ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಕಾರ್ಮಿಕ 54 ವರ್ಷ ವಯಸ್ಸಿನ ದಯಾನಂದ ಕೊಟ್ಟಾರಕರ ಎಂಬವರೇ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾರೆ.
ನಿನ್ನೆ ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಬಂದಿದ್ದ ದಯಾನಂದ ಕೊಟ್ಟಾರಕರ ಅವರು ಇಂದು ಬಂಗೂರನಗರದ ಹಳೆ ಡಿ.ಆರ್.ಟಿ ಬ್ಲಾಕ್ ನಂ:22 ರಲ್ಲಿರುವ ಕಾಗದ ಕಾರ್ಖಾನೆಯ ತನ್ನ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ದಾಂಡೇಲಿ ನಗರ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಶವಗಾರದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ: Punjab ಕುಖ್ಯಾತ ಗ್ಯಾಂಗ್ಸ್ಟರ್ ಜರ್ನೈಲ್ ಸಿಂಗ್ ಹತ್ಯೆ; ಮುಸುಕುಧಾರಿಗಳಿಂದ ಗುಂಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.