ಬನಹಟ್ಟಿ ಪೊಲೀಸರ ಕಾರ್ಯಾಚರಣೆ: ಮೂವತ್ತಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ, ಮೂವರ ಬಂಧನ
Team Udayavani, May 25, 2023, 6:00 PM IST
ರಬಕವಿ-ಬನಹಟ್ಟಿ: ಸಮೀಪದ ಯಲ್ಲಟ್ಟಿ ಗ್ರಾಮದ ಮೂಲಕ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮೂವತ್ತಕ್ಕೂ ಹೆಚ್ಚು ಜಾನುವಾರುಗಳನ್ನು ಬನಹಟ್ಟಿ ಠಾಣೆಯ ಪೊಲೀಸ್ ರು ಬುಧವಾರ ವಶಪಡಿಸಿಕೊಂಡ ಘಟನೆ ನಡೆದಿದೆ.
ಒಟ್ಟು ಮೂರು ವಾಹನಗಳಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಈ ಸಂಬಂಧ ಮೂವರು ವಾಹನ ಚಾಲಕರಾದ ಅಥಣಿ ತಾಲ್ಲೂಕಿನ ಮುಸಗುಪ್ಪಿಯ ರಾವಸಾಬ ಹಾರೂಗೇರಿ, ಮಹಾರಾಷ್ಟ್ರದ ಕವಟೆಮಂಕಾಳದ ಸಾಗರ ಲೊಂಡೆ ಮತ್ತು ಕವಟೆಮಂಕಳ ತಾಲ್ಲೂಕಿನ ಇಂಗನಗಾವ್ ಗ್ರಾಮದ ಅಶೋಕ ಚೌಗಲೆಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಜಾನುವಾರುಗಳನ್ನು ಮಾಂಸದ ಉದ್ದೇಶಕ್ಕಾಗಿ ಆಕ್ರಮವಾಗಿ ಸಾಗಿಸಲಾಗುತ್ತಿತ್ತು. ಜಾನುವಾರುಗಳ ಒಟ್ಟು ಮೌಲ್ಯವು ರೂ. 4 ಲಕ್ಷದಷ್ಟು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಕ್ಷಣೆ ಮಾಡಿದ ಜಾನುವಾರುಗಳನ್ನು ರಬಕವಿ ಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಗ್ರಾಮದಲ್ಲಿರುವ ಗೋಶಾಲೆಗೆ ಬಿಡಲಾಯಿತು.
ಈ ಕುರಿತು ಸ್ಥಳೀಯ ಪಿಎಸ್‌ಐ ರಾಘವೇಂದ್ರ ಖೋತ ಕರ್ನಾಟಕ ಗೋಹತ್ಯೆ ಮತ್ತು ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ನಡೆಸಿದ್ದಾರೆ.
ಇದನ್ನೂ ಓದಿ: Nithyananda ನೊಂದಿಗೆ ನನ್ನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ: ನಟ ಅಶೋಕ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.