ಮಡಿಕೇರಿ: ಆನೆ ದಂತದ ಆಭರಣ ಮಾರಾಟ ಯತ್ನ… ಓರ್ವನ ಸೆರೆ
Team Udayavani, May 26, 2023, 6:20 AM IST
ಮಡಿಕೇರಿ: ಅಮೂಲ್ಯ ಹರಳುಗಳನ್ನು ಒಳಗೊಂಡ ಆನೆ ದಂತದಿಂದ ಮಾಡಿರುವ 2 ಕೈ ಕಡಗಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.
ಕೊಳ್ಳೇಗಾಲ ಮೂಲದ ಪಿ. ಪ್ರದೀಪ್ ಕುಮಾರ್ (42) ಬಂಧಿತ ಆರೋಪಿ. ನಗರದ ಫೀ|ಮಾ| ಕಾರ್ಯಪ್ಪ ವೃತ್ತದಿಂದ ಸಿದ್ದಾಪುರ ಕಡೆಗೆ ತೆರಳುವ ಮಾರ್ಗದ ಬಸ್ ತಂಗುದಾಣದ ಬಳಿ ಆನೆ ದಂತದಿಂದ ಮಾಡಿರುವ ಕೈ ಬಳೆ ಮಾದರಿಯ ನೀಲಿ ಮತ್ತು ಹಸುರು ಬಣ್ಣದ ಅಮೂಲ್ಯ ಹರಳುಗಳನ್ನು ಅಳವಡಿಸಿದ್ದ ಕಡಗಗಳನ್ನು ಮಾರಾಟ ಮಾಡಲು ಆತ ಯತ್ನಿಸುತ್ತಿದ್ದ.
ಖಚಿತ ಮಾಹಿತಿ ಮೇರೆಗೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಸ್ಥಳಕ್ಕೆ ತೆರಳಿದಾಗ ಆರೋಪಿ ಮಾಲು ಸಹಿತ ಸೆರೆ ಸಿಕ್ಕಿದ್ದಾನೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕೆ.ವಿ. ಶರತ್‌ಚಂದ್ರ ನಿರ್ದೇಶನದಂತೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ. ವಿಶ್ವನಾಥ್ ಮಾರ್ಗ ದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯು. ಸವಿ, ಸಿಬಂದಿಗಳಾದ ಶೇಖರ್, ರಾಘವೇಂದ್ರ, ಯೋಗೇಶ್, ಉಮೇಶ್, ಸ್ವಾಮಿ ಹಾಗೂ ಮಂಜುನಾಥ ಕಾರ್ಯಾಚರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.