GTvsMI ; ಅಮೋಘ ಶತಕ ಸಿಡಿಸಿದ ಗಿಲ್; ಮುಂಬೈಗೆ 234 ರನ್ ಗಳ ಸವಾಲ್
Team Udayavani, May 26, 2023, 9:54 PM IST
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುತ್ತಿರುವ ನಿರ್ಣಾಯಕ ಕ್ವಾಲಿಫಯರ್ 2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅಮೋಘ ಶತಕ ಸಿಡಿಸಿದ್ದಾರೆ. ಮುಂಬೈ ಇಂಡಿಯನ್ಸ್ ಗೆ ಗೆಲ್ಲಲು 234ರನ್ ಗಳ ಸವಾಲು ಮುಂದಿಟ್ಟಿದೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. 3 ವಿಕೆಟ್ ಗಳ ನಷ್ಟಕ್ಕೆ 233ರನ್ ಗಳ ಭರ್ಜರಿ ಮೊತ್ತ ಕಲೆ ಹಾಕಿತು.
ಆರಂಭದಿಂದಲೂ ಭರ್ಜರಿ ಆಟವಾಡಿದ ಶುಭ್ ಮನ್ ಗಿಲ್ 129 ರನ್ ಗಳಿಸಿ ಔಟಾದರು. 60 ಎಸೆತಗಳಲ್ಲಿ ಬರೋಬ್ಬರಿ 10 ಸಿಕ್ಸರ್ ಮತ್ತು 7 ಬೌಂಡರಿಗಳನ್ನು ಬಾರಿಸಿದರು. ಆಕಾಶ್ ಮಧ್ವಲ್ ಎಸೆದ ಚೆಂಡನ್ನು ಟಿಮ್ ಡೇವಿಡ್ ಕೈಗಿತ್ತು ನಿರ್ಗಮಿಸಿದರು.
ಐಪಿಎಲ್ ಋತುವಿನಲ್ಲಿ ಅತಿ ಹೆಚ್ಚು ಶತಕಗಳನ್ನು ದಾಖಲಿಸಿದ ಪಟ್ಟಿಯಲ್ಲಿ ಗಿಲ್ ಸೇರಿಕೊಂಡರು. ವಿರಾಟ್ ಕೊಹ್ಲಿ (RCB) 2016 ರಲ್ಲಿ 4 ಶತಕಗಳನ್ನು ಸಿಡಿಸಿದ್ದರು. 2022 ರಲ್ಲಿ ಜೋಸ್ ಬಟ್ಲರ್ (RR) 4 ಶತಕಗಳನ್ನು ಸಿಡಿಸಿದ್ದರು. ಈ ಬಾರಿ ಶುಭಮನ್ ಗಿಲ್ 3 ನೇ ಶತಕವನ್ನು ದಾಖಲಿಸಿದರು.
ವೃದ್ಧಿಮಾನ್ ಸಹಾ 18 ರನ್ ಗಳಿಸಿ ಔಟಾದರು. ಸಾಯಿ ಸುದರ್ಶನ್ 43 ಗಳಿಸಿದ್ದ ವೇಳೆ ನೋವಿನಿಂದ ನಿವೃತ್ತಿ ಹೊಂದಿದರು. ನಾಯಕ ಹಾರ್ದಿಕ್ ಪಾಂಡ್ಯ 28ರನ್ ಮತ್ತು ರಶೀದ್ ಖಾನ್ 5 ರನ್ ಗಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.