ಶಿರಸಿ: ನಗೆಪಾಟಲಿಗೆ ಈಡಾದ ಪುರಾತತ್ವ ಇಲಾಖೆ ಉತ್ತರ

ಕೇಂದ್ರ ಸರಕಾರದ ಅಧೀನ ಇಲಾಖೆಯ ಧಾರವಾಡ ವಿಭಾಗದಿಂದ ಬಂದಂಥ ಉತ್ತರವೇ ವಿಶಿಷ್ಟವಾಗಿದೆ.

Team Udayavani, May 27, 2023, 3:25 PM IST

ಶಿರಸಿ: ನಗೆಪಾಟಲಿಗೆ ಈಡಾದ ಪುರಾತತ್ವ ಇಲಾಖೆ ಉತ್ತರ

ಶಿರಸಿ: ಕದಂಬರ ರಾಜಧಾನಿ, ಬನವಾಸಿಯ ಪುರಾತನ ಮಧುಕೇಶ್ವರ ದೇವಸ್ಥಾನ ಸೋರುತ್ತಿದೆ ಎಂದು ಭಕ್ತರೋರ್ವರು ಸಾಮಾಜಿಕ ಕಳಕಳಿಯಿಂದ ಧಾರವಾಡದ ಪುರಾತತ್ವ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದರೆ, ಪಾರ್ವತಿ ದೇವಸ್ಥಾನದ ಸೋರಿಕೆ ದುರಸ್ತಿ ಮಾಡಿದ್ದೇವೆ ಎಂದು ಪ್ರತ್ಯುತ್ತರ ಬರೆದು ನಗೆಪಾಟಿಲಿಗೆ ಈಡಾದ ಘಟನೆ ನಡೆದಿದೆ.

ಬನವಾಸಿ ಮಧುಕೇಶ್ವರ ದೇವಸ್ಥಾನದ ನಂದಿ ಹಾಗೂ ಆನೆಯ ವಿಗ್ರಹದ ಜೊತೆಗೆ ಮಳೆಗಾಲದಲ್ಲಿ ಮಧುಕೇಶ್ವರ ದೇವಸ್ಥಾನ ಸೋರುತ್ತಿದೆ ಎಂದೂ, ಅದರ ತುರ್ತು ರಿಪೇರಿ ಸಲುವಾಗಿ ಶಿರಸಿಯ ಪ್ರಸಿದ್ಧ ವೈದ್ಯ ಡಾ| ರವಿಕಿರಣ ಪಟವರ್ಧನ್‌ ಧಾರವಾಡದ ಪುರಾತತ್ವ ಇಲಾಖೆಗೆ ಮನವಿ ಮಾಡಿ ಪತ್ರ ಬರೆದಿದ್ದರು. ಬನವಾಸಿ ಮಧುಕೇಶ್ವರ ದೇವಸ್ಥಾನ ಎಂದರೆ ಅತ್ಯಂತ ಪ್ರಾಚೀನ ಹಾಗೂ ಕದಂಬರ ಕಾಲದ, ರಾಜ್ಯದ, ದೇಶದ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದು. ಅದರ ಸೋರುವಿಕೆ ತಡೆ ಕುರಿತು ಮನವಿಗೆ ಸ್ಪಂದಿಸುವ ಇಲಾಖೆಯ ಜವಬ್ದಾರಿ ಆಗಿತ್ತು. ಆದರೆ, ಅದರ ಬದಲಿಗೆ ಕೇಂದ್ರ ಸರಕಾರದ ಅಧೀನ ಇಲಾಖೆಯ ಧಾರವಾಡ ವಿಭಾಗದಿಂದ ಬಂದಂಥ ಉತ್ತರವೇ ವಿಶಿಷ್ಟವಾಗಿದೆ.

2023ರಲ್ಲಿ ಮಧುಕೇಶ್ವರ ದೇವಸ್ಥಾನ ಸೋರುತ್ತಿದೆ ಎಂದರೆ 2017-18ರಲ್ಲಿ ಪಾರ್ವತಿ ದೇವಸ್ಥಾನ ಸೋರಿಕೆಯನ್ನು ರಿಪೇರಿ ಮಾಡಿದ್ದೇವೆ ಎಂದು ಉತ್ತರ ನೀಡುತ್ತಿದ್ದಾರೆ!. ಈ ಉತ್ತರ ಸಮಾಜಿಕ ಜಾಲ ತಾಣದಲ್ಲೂ ಟ್ರೋಲ್‌ ಆಗಿದೆ.

ಪಾರ್ವತಿ ದೇವಸ್ಥಾನ ಸೋರಿಕೆ, ರಿಪೇರಿ ಮಾಡಿದರೆ ಮಧುಕೇಶ್ವರ ದೇವಸ್ಥಾನದ ಮಳೆಗಾಲದ ಸೋರಿಕೆ ಹೇಗೆ ನಿಲ್ಲುವುದು ಎಂಬುದು ಯಕ್ಷಪ್ರಶ್ನೆಯಾಗಿ ನನ್ನನ್ನೇ ಕಾಡುತ್ತಿದೆ ಎನ್ನುತ್ತಾರೆ ವೈದ್ಯ ಡಾ| ರವಿಕಿರಣ ಪಟವರ್ಧನ್‌. ಏಕೆಂದರೆ ಮಧುಕೇಶ್ವರ ದೇವಸ್ಥಾನದ ಪಕ್ಕದಲ್ಲಿ ಪಾರ್ವತಿ ದೇವಸ್ಥಾನ ಪ್ರತ್ಯೇಕವಾಗಿ ಇದೆ.

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.