ಒಂಟಿ ನೆಲೆಸಿದ್ದ ವೃದ್ಧೆ ಮನೆಗೆ ದುಷ್ಕರ್ಮಿಗಳು ನುಗ್ಗಿ ಹತ್ಯೆಗೈದು ಚಿನ್ನಾಭರಣ ದರೋಡೆ
Team Udayavani, May 28, 2023, 2:38 PM IST
ಬೆಂಗಳೂರು: ಹಾಡುಹಗಲೇ ಒಂಟಿ ಯಾಗಿ ನೆಲೆಸಿದ್ದ ವೃದ್ಧೆಯ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಆಕೆಯ ಕೈ-ಕಾಲು ಕಟ್ಟಿ ಹಾಕಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದು ಚಿನ್ನ ದೋಚಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ.
ಮಹಾಲಕ್ಷ್ಮೀ ಲೇಔಟ್ ನಿವಾಸಿ ಕಮಲ (82) ಕೊಲೆಯಾದ ವೃದ್ಧೆ. ಕೊಲೆಯಾದ ಕಮಲ ಅವರ ಪತಿ 6 ತಿಂಗಳ ಹಿಂದೆ ಸಾವನ್ನಪ್ಪಿದ್ದರು. ಇವರ ಮಕ್ಕಳು ನಗರದ ಬೇರೆಡೆ ಪ್ರತ್ಯೇಕವಾಗಿ ವಾಸವಿದ್ದಾರೆ. ಆದ್ದರಿಂದ ಮನೆಯಲ್ಲಿ ಕಮಲ ಒಂಟಿಯಾಗಿ ವಾಸವಿದ್ದರು. ಶನಿವಾರ ಈ ದುಷ್ಕೃತ್ಯ ನಡೆದಿದೆ.
ಸಂಜೆ 7 ಗಂಟೆ ಸುಯ ವೇಳೆ ಪಕ್ಕದ ಮನೆಯವರು ಕಮಲ ಅವರನ್ನು ಮಾತನಾಡಿಸಲು ಮನೆ ಬಳಿ ಬಂದಾಗ ಬಾಗಿಲು ತೆರೆದಿರುವುದು ಕಂಡು ಬಂದಿದೆ. ಈ ವೇಳೆ ಒಳ ಹೋಗಿ ನೋಡಿದಾಗ ಕೈ-ಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಹಾಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಮಲ ಪತ್ತೆಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಕಮಲ ಅವರು ಮೃತಪಟ್ಟಿರುವುದು ಖಚಿತವಾಗಿದೆ. ಶನಿವಾರ ಸಂಜೆ 4 ಗಂಟೆಯಿಂದ 7ಗಂಟೆಯ ಅವಧಿಯೊಳಗೆ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುಷ್ಕರ್ಮಿಗಳು ಕಮಲ ಅವರ ಕೈ-ಕಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಸುತ್ತಿ ಉಸಿರುಗಟ್ಟಿಸಿ ಕೊಲೆಗೈದಿದ್ದಾರೆ. ಬಳಿಕ ಕಮಲ ಮೈ ಮೇಲಿದ್ದ ಒಡವೆಗಳು ಸೇರಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿದ್ದಾರೆ. ಮನೆಯಲ್ಲಿ ಏನೆಲ್ಲಾ ಕಳುವಾಗಿದೆ ಎಂಬುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಈ ಕೃತ್ಯದ ಹಿಂದೆ ವೃದ್ಧೆಯ ಪರಿಚಿತರ ಕೈವಾಡವಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.
ಘಟನೆ ಸಂಬಂಧ ಕೊಲೆಯಾದ ಕಮಲ ಅವರ ಮನೆಯ ನೆರಮನೆಯ ನಿವಾಸಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದ್ದಾರೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.