Mangaluru Airport 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ
ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ
Team Udayavani, May 28, 2023, 3:53 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ.
ಮೇ 25 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಭದ್ರತಾ ತಪಾಸಣೆಯ ವೇಳೆ ಸಿಐಎಸ್ಎಫ್ ಸಿಬಂದಿ ದುಬೈಗೆ ತೆರಳುತ್ತಿದ್ದ ಪ್ರಯಾಣಿಕರನ್ನು ತಡೆದಿದ್ದಾರೆ ಎಂದು ಕಸ್ಟಮ್ಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬೆಲೆಬಾಳುವ ಹರಳುಗಳಿರುವ ಶಂಕೆಯ ಮೇರೆಗೆ ಆತನ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ 2 ಪೌಚ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಸರಗೋಡು ಮೂಲದ ಪ್ರಯಾಣಿಕನನ್ನು ಹೆಚ್ಚಿನ ತನಿಖೆಗಾಗಿ ಸಿಐಎಸ್‌ಎಫ್ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಎರಡು ಪೌಚ್‌ಗಳಲ್ಲಿ ಒಟ್ಟು 306.21 ಕ್ಯಾರೆಟ್‌ಗಳಷ್ಟು ತೂಕದ ವಿವಿಧ ಗಾತ್ರದ ವಜ್ರಗಳೊಂದಿಗೆ 13 ಚಿಕ್ಕ ಪ್ಯಾಕೆಟ್‌ಗಳು ಕಂಡುಬಂದಿದ್ದು, ಇದರ ಮೌಲ್ಯ ರೂ.1.69 ಕೋಟಿಯಾಗಿದೆ. ಪ್ರಯಾಣಿಕನನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೆಚ್ಚಿನ ತನಿಖೆಗಳು ಪ್ರಗತಿಯಲ್ಲಿವೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.