ಕಟಪಾಡಿ – ಕಾಪು: ಮಟ್ಕಾ ಅಡ್ಡೆಗೆ ದಾಳಿ
Team Udayavani, May 28, 2023, 9:39 PM IST
ಕಾಪು: ಕಟಪಾಡಿ ಹಳೆ ಮೀನು ಮಾರುಕಟ್ಟೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಡುತ್ತಿದ್ದ ರವಿ ಪೂಜಾರಿ ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯ ಕ್ರೈಂ ಎಸ್ಐ ಭರತೇಶ್ ಕಂಕಣವಾಡಿ ಮತ್ತು ಸಿಬಂದಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ್ದು ದಾಳಿಯ ವೇಳೆ ಮಟ್ಕಾ ಚೀಟಿ ಬರೆಯುತ್ತಿದ್ದ ರವಿ ಪೂಜಾರಿ ಓಡಲು ಪ್ರಯತ್ನಿಸಿದ್ದು ಆತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತನಿಂದ ಮಟ್ಕಾ ಚೀಟಿ ಬರೆಯಲು ಬಳಸಿದ ವಸ್ತುಗಳು, 990 ರೂ. ನಗದು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣ
ಕಾಪು ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಡುತ್ತಿದ್ದ ಪಡುಬಿದ್ರಿ ನಿವಾಸಿ ಶ್ರೀನಿವಾಸ ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯ ಎಸ್ಐ ಸುಮ ಮತ್ತು ಸಿಬಂದಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ್ದು ದಾಳಿಯ ವೇಳೆ ಮಟ್ಕಾ ಚೀಟಿ ಬರೆಯುತ್ತಿದ್ದ ಶ್ರೀನಿವಾಸ ಓಡಲು ಪ್ರಯತ್ನಿಸಿದ್ದು ಆತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತನಿಂದ ಮಟ್ಕಾ ಚೀಟಿ ಬರೆಯಲು ಬಳಸಿದ ವಸ್ತುಗಳು, 1010 ರೂ. ನಗದು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.