ಬೆಳಗಾವಿ: ಶುರುವಾಯ್ತು ಮತ್ತದೇ ದುರಸ್ತಿ-ಶಿಕ್ಷಕರ ಸಮಸ್ಯೆ


Team Udayavani, May 29, 2023, 11:33 AM IST

ಬೆಳಗಾವಿ: ಶುರುವಾಯ್ತು ಮತ್ತದೇ ದುರಸ್ತಿ-ಶಿಕ್ಷಕರ ಸಮಸ್ಯೆ

ಬೆಳಗಾವಿ: ಸರಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚುತ್ತಿದ್ದರೂ ಶಾಲೆಗಳ ಸ್ಥಿತಿ ಮಾತ್ರ ಇನ್ನೂ ಬದಲಾಗಿಲ್ಲ. ವರ್ಷಗಳ ಮೇಲೆ ವರ್ಷಗಳು ಉರುಳಿದರೂ ಶಾಲೆಗಳ ದುರಸ್ತಿಯಾಗಬೇಕು ಎಂಬ ಕೂಗು ಇನ್ನೂ ಕೇಳಿಸುತ್ತಲೇ ಇದೆ. ಹೊಸ ಶೆ„ಕ್ಷಣಿಕ ವರ್ಷದಲ್ಲಿ ಈ ಕೂಗು ಮತ್ತಷ್ಟು ಹೆಚ್ಚಾಗಿದೆ.

ಈ ಸಮಸ್ಯೆಗಳಿಂದ ಗಡಿ ಜಿಲ್ಲೆ ಬೆಳಗಾವಿ ಹೊರತಾಗಿಲ್ಲ. ಜಿಲ್ಲೆಯಲ್ಲಿ ಉಂಟಾದ ಸತತ ಪ್ರವಾಹ ಹಾಗೂ ಅತಿಯಾದ ಮಳೆಯಿಂದ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಶಾಲೆಗಳ ದುರಸ್ತಿ ಮತ್ತು ಮರು ನಿರ್ಮಾಣ ಕಾರ್ಯ ನಿರಂತರವಾಗಿ ನಡೆದಿರುವದೇ ಇದಕ್ಕೆ ನಿದರ್ಶನ. ಶಿಕ್ಷಣಕ್ಕೆ ನಮ್ಮ ಮೊದಲ ಆದ್ಯತೆ ಎಂದು ಹೇಳುವ ಸರಕಾರ ಕೊಠಡಿಗಳ ನಿರ್ಮಾಣ ಮತ್ತು ಶಿಕ್ಷಕರ ನೇಮಕಾತಿ ವಿಷಯದಲ್ಲಿ ಮಾತ್ರ ಮೀನಾಮೇಷ ಎಣಿಸುತ್ತಿರುವದು ಅಚ್ಚರಿ ಎನಿಸಿದರೂ ಸತ್ಯ.

ಬೇಸಿಗೆ ರಜೆ ಮುಗಿದು ಮಕ್ಕಳು ಸಂತೋಷದಿಂದ ಶಾಲೆಗೆ ಮರಳಿದರೆ ಶಿಥಿಲಾವಸ್ಥೆಯಲ್ಲಿರುವ ಸರಕಾರಿ ಶಾಲೆಗಳ ಕೊಠಡಿಗಳು ಆತಂಕದಿಂದ ನೋಡುವಂತೆ ಮಾಡಿವೆ. ಶಾಲೆಯ ಆರಂಭದ ಖುಷಿ, ಸೌಲಭ್ಯಗಳ ವಿಷಯದಲ್ಲಿ ಕಾಣುತ್ತಿಲ್ಲ. ಸಣ್ಣಪುಟ್ಟ ದುರಸ್ತಿ ಇದ್ದರೂ ಸಕಾಲಕ್ಕೆ ಸರಕಾರದಿಂದ ಅನುದಾನ ಬರದೇ ಇರುವದು ನಿರಾತಂಕ ಶಿಕ್ಷಣಕ್ಕೆ ಸಮಸ್ಯೆ ತಂದೊಡ್ಡಿದೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಜಿಲ್ಲೆಯಲ್ಲಿ ಒಟ್ಟು 1617 ಶಾಲಾ ಕೊಠಡಿಗಳ ದುರಸ್ತಿಯಾಗಬೇಕಾಗಿದೆ. ಕೆಲ ಕೊಠಡಿಗಳಲ್ಲಿ ಚಾವಣಿ ಹಾಳಾಗಿದ್ದರೆ, ಇನ್ನೂ ಕೆಲವೆಡೆ ನೆಲಹಾಸು, ಕಿಟಕಿ, ಬಾಗಿಲು ಮೊದಲಾದವು ಸರಿ ಇಲ್ಲ. ಸ್ವಲ್ಪ ಮಳೆಯಾದರೂ ಸಾಕು ಸೋರುತ್ತವೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಕಲಿಸುವುದು ಬೇಡ ಎಂಬ ನಿರ್ಧಾರಕ್ಕೆ ಶಿಕ್ಷಣ ಇಲಾಖೆ ಬಂದಿದೆ.

ಅಂಕಿ ಅಂಶಗಳ ಪ್ರಕಾರ ದುರಸ್ತಿಯಾಗಬೇಕಿರುವ ಶಾಲಾ ಕೊಠಡಿಗಳ ಸಂಖ್ಯೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹೆಚ್ಚಿದೆ. ಅತಿಯಾದ ಮಳೆ ಹಾಗೂ ಕೃಷ್ಣಾ,, ಘಟಪ್ರಭಾ, ಹಿರಣ್ಯಕೇಶಿ ನದಿಗಳ ಪ್ರವಾಹದಿಂದ ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ, ರಾಯಬಾಗ, ಹುಕ್ಕೇರಿ, ಗೋಕಾಕ ಮತ್ತು ಮೂಡಲಗಿ ಈ ಎಂಟು ವಲಯಗಳಲ್ಲಿ ಅತೀ ಹೆಚ್ಚು ಹಾನಿಯಾಗಿದ್ದು 1200 ಕ್ಕೂ ಹೆಚ್ಚು ಕೊಠಡಿಗಳ ದುರಸ್ತಿ ಮತ್ತು ಮರು ನಿರ್ಮಾಣ ಕಾರ್ಯ ನಡೆಯಬೇಕಿದೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಮಾರು 417 ಶಾಲಾ ಕೊಠಡಿಗಳು ದುರಸ್ತಿಯ ನಿರೀಕ್ಷೆಯಲ್ಲಿವೆ. ಜಿಲ್ಲೆಯಲ್ಲಿ 2019-20 ರಲ್ಲಿ ಶಾಲಾ ಕಟ್ಟಡಗಳ ದುರಸ್ತಿಗೆ 152 ಲಕ್ಷ ರೂ ಮತ್ತು ಮರು ನಿರ್ಮಾಣಕ್ಕೆ 633 ಲಕ್ಷ ರೂ ಅನುದಾನ ಬಿಡುಗಡೆಯಾಗಿತ್ತು. ಎನ್‌ ಡಿ ಆರ್‌ ಎಫ್‌ ದಲ್ಲಿ ದುರಸ್ತಿಗೆ 2496.87 ಲಕ್ಷ ರೂ ಅನುದಾನ ಬಂದಿತ್ತು. 2022-23 ರಲ್ಲಿ ದುರಸ್ತಿಗೆ 200 ಲಕ್ಷ ರೂ., ವಿವೇಕ ಶಾಲಾ ಯೋಜನೆಯಡಿ ದುರಸ್ತಿಗೆ 127.50 ಲಕ್ಷ ಮತ್ತು ಮರು ನಿರ್ಮಾಣಕ್ಕೆ 1761.60 ಲಕ್ಷ ರೂ. ಅನುದಾನ ಬಿಡುಗಡೆಯಾಗಿತ್ತು.

ಬಿಡುಗಡೆಯಾದ ಅನುದಾನದಲ್ಲಿ 2019 ರಲ್ಲಿ 39 ಕಟ್ಟಡಗಳ ದುರಸ್ತಿ, 58 ಕಟ್ಟಡಗಳ ಮರು ನಿರ್ಮಾಣ, ಎಸ್‌ ಡಿ ಆರ್‌ ಎಫ್‌ ಅಡಿಯಲ್ಲಿ 807 ಕಟ್ಟಡಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. 2022-23 ರಲ್ಲಿ 11 ಕಟ್ಟಡಗಳ ದುರಸ್ತಿ ಕಾರ್ಯ ಮತ್ತು ಆರು ಕಟ್ಟಡಗಳ ಮರು ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿವೆ. 211 ಕಟ್ಟಡಗಳ ದುರಸ್ತಿ ಮತ್ತು 254 ಕಟ್ಟಡಗಳ ಮರು
ನಿರ್ಮಾಣ ಕಾರ್ಯ ಪ್ರಾರಂಭದ ಹಂತದಲ್ಲಿವೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಶಾಲೆಗಳ ದುರಸ್ತಿ ಮತ್ತು ಮರು ನಿರ್ಮಾಣಕ್ಕಾಗಿ ಮೂರು ಕೋಟಿ ರೂ ಗಳ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿದ್ದು ಅದರಲ್ಲಿ 30 ಲಕ್ಷ ರೂ. ಬಿಡುಗಡೆಯಾಗಿದೆ.

ಇದಲ್ಲದೆ ಮೂರು ಕೋಟಿ ರೂ ಗಳ ಮತ್ತೂಂದು ಪ್ರಸ್ತಾವನೆಯನ್ನು ಸಹ ಸರಕಾರಕ್ಕೆ ಸಲ್ಲಿಸ ಲಾಗಿದೆ. ಇದರ ಹೊರತಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ನ 15 ನೇ ಹಣಕಾಸು ಯೋಜನೆಯಡಿ ಮೂರು ಕೋಟಿ ರೂ ಗಳನ್ನು ಕೊಠಡಿಗಳ ದುರಸ್ತಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸರಕಾರಿಂದ 300 ಕೊಠಡಿಗಳ ದುರಸ್ತಿ ಮತ್ತು ಮರು ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು ಇದರ ಕಾಮಗಾರಿ ಪ್ರಗತಿಯಲ್ಲಿದೆ ಎಂಬುದು ಶಿಕ್ಷಣ ಇಲಾಖೆ ಉಪನಿರ್ದೇಶಕರ ಹೇಳಿಕೆ.

ಬಗೆಹರಿಯದ ಶಿಕ್ಷಕರ ಕೊರತೆ: ಮುಖ್ಯವಾಗಿ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಬಹಳವಾಗಿ ಕಾಡುತ್ತಿದೆ. ಚಿಕ್ಕೋಡಿ ವಿಭಾಗದಲ್ಲಿ ಈಗ 6500 ಕ್ಕೂ ಹೆಚ್ಚು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು ಇನ್ನೂ 3000 ಶಿಕ್ಷಕರ ಕೊರತೆ ಇದೆ. ಕೊರತೆ ಇದ್ದರೂ ಮಕ್ಕಳಿಗೆ ತೊಂದರೆಯಾಗದಂತೆ 1670 ಪ್ರಾಥಮಿಕ ಮತ್ತು 350 ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಸರಕಾರ ಅನುಮತಿ ನೀಡಿದೆ ಎಂಬುದು ಶಿಕ್ಷಣ ಇಲಾಖೆ ಅಧಿಕಾರಿಗಳ ಹೇಳಿಕೆ.

ಅದೇ ರೀತಿ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 6200 ಕ್ಕೂ ಹೆಚ್ಚು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು 2279 ಹುದ್ದೆಗಳು ಖಾಲಿ ಇವೆ. ಸುಮಾರು 1046 ಅತಿಥಿ ಶಿಕ್ಷಕರ ಸೇವೆ ಪಡೆಯಲು ಮಂಜೂರಾತಿ ದೊರೆತಿದೆ. ಸೌಲಭ್ಯಗಳ ಕೊರತೆಯ ನಡುವೆಯೂ ಸರಕಾರಿ ಶಾಲೆಗಳ ಬೇಡಿಕೆ ಮಾತ್ರ ಕಡಿಮೆಯಾಗಿಲ್ಲ. ಬದಲಾಗಿ ಮಕ್ಕಳ ಪ್ರವೇಶಾತಿಯಲ್ಲಿ ಸುಧಾರಣೆ ಕಾಣುತ್ತಿದೆ.

ಪ್ರತಿ ವರ್ಷ ಎದುರಾಗುವ ಸಮಸ್ಯೆಗಳಿಗೆ ಶಾಶ್ವತ ಮುಕ್ತಿ ಕೊಟ್ಟರೆ ಸರಕಾರಿ ಶಾಲೆಗಳ ಗುಣಮಟ್ಟ ಯಾರಿಗೂ ಕಡಿಮೆ ಇಲ್ಲ ಎನ್ನುವಂತೆ ಬದಲಾವಣೆ ಕಾಣಲಿದೆ. ಹೊಸ ಸರಕಾರದಲ್ಲಿ ಜಿಲ್ಲೆಯ ಸಾರಥ್ಯ ವಹಿಸಿರುವ ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಟಾಳಕರ ಅವರ ಮುಂದೆ ಈ ಸವಾಲಿದೆ. ಸಚಿವದ್ವಯರು ಶೈಕ್ಷಣಿಕ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಬೇಕು ಎಂಬುದು ಎಲ್ಲರ ಆಶಯ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಂಟು ವಲಯಗಳಲ್ಲಿ ಶಾಲಾ ಕೊಠಡಿಗಳ ದುರಸ್ತಿಗೆ ಕ್ರಮವಹಿಸಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಯಾವುದೇ ಕಾರಣಕ್ಕೂ ಮಕ್ಕಳನ್ನು ಕೂಡಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕೊಠಡಿಗಳ ದುರಸ್ತಿಗೆ ಬೇಕಾದ ಅನುದಾನದ ಕ್ರಿಯಾಯೋಜನೆ ರೂಪಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತಿದೆ.
ಮೋಹನಕುಮಾರ ಹಂಚಾಟೆ,
ಡಿಡಿಪಿಐ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊಠಡಿಗಳ ದುರಸ್ತಿ ಅಷ್ಟೊಂದು ಗಂಭೀರವಾಗಿಲ್ಲ. ಆದರೆ ಅಗತ್ಯವಿರುವ ಕಡೆಗಳಲ್ಲಿ ಈಗಾಗಲೇ
ದುರಸ್ತಿ ಮತ್ತು ಮರುನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೊಠಡಿಗಳ ದುರಸ್ತಿಗೆ ಬೇಕಾಗಿರುವ ಅನುದಾನಕ್ಕೆ ಸರಕಾರಕ್ಕೆ ಹೊಸ
ಪ್ರಸ್ತಾವನೆ ಸಲ್ಲಿಸಲಾಗಿದೆ. ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನಹರಿಸಲಾಗಿದೆ.
ಬಸವರಾಜ ನಾಲ್ವತವಾಡ,
ಬೆಳಗಾವಿ ಜಿಲ್ಲೆ ಉಪನಿರ್ದೇಶಕರು

*ಕೇಶವ ಆದಿ

ಟಾಪ್ ನ್ಯೂಸ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.