Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ
Team Udayavani, May 30, 2023, 8:44 PM IST
ಭಟ್ಕಳ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಶೀಘ್ರದಲ್ಲಿ ಅಂತಿಮಗೊಳಿಸಿ ನೇಮಕಾತಿ ಆದೇಶ ನೀಡುವಂತೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಶಿಕ್ಷಕ ಆಕಾಂಕ್ಷಿ ಅಭ್ಯರ್ಥಿಗಳು ಮಂಗಳವಾರ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಪಟ್ಟಣದ ಆಸರಕೇರಿಯಲ್ಲಿ ಸಚಿವರನ್ನು ಭೇಟಿಯಾದ ಅಭ್ಯರ್ಥಿಗಳು ರಾಜ್ಯ ಸರ್ಕಾರ 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷ ಕಳೆಯುತ್ತಾ ಬಂದರೂ ಇನ್ನೂ ತನಕ ದಾಖಲಾತಿ ಪರಿಶೀಲನೆಗೆ ಕರೆಯಲಿಲ್ಲ. ಹೈದ್ರಾಬಾದ್ ಕರ್ನಾಟಕ ವಲಯದ ಅಭ್ಯರ್ಥಿಗಳು ಮೀಸಲಾತಿ ಕೋರಿ ತಂದಿರುವ ನ್ಯಾಯಾಲಯ ತಡೆಯಾಜ್ಞೆ ನೆಪ ಹೂಡಿ ಸರ್ಕಾರ ವಿನಾಃ ಕಾರಣ ನೇಮಕಾತಿ ವಿಳಂಭ ಮಾಡುತ್ತಿದೆ. ಅದು ಅಲ್ಲದೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲು 20 ಸಾವಿರ ತಾತ್ಕಾಲಿಕ ಶಿಕ್ಷಕರ ನೇಮಕಾತಿಗೆ ಪ್ರಕಟಣೆ ಹೋರಡಿಸಿದೆ. ಒಂದೊಮ್ಮೆ ತಾತ್ಕಾಲಿಕ ಶಿಕ್ಷಕರು ನೇಮಕವಾದರೆ ಸರ್ಕಾರ ನಮ್ಮ ನೇಮಕಾತಿಯನ್ನು ಇನ್ನಷ್ಟು ದಿನಗಳು ಮುಂದೂಡುವ ಭಯ ನಮಗೆ ಕಾಡುತ್ತಿದೆ. ಸಚಿವರು ಶೀಘ್ರ ನೇಮಕಾತಿಗೆ ಸರ್ಕಾರವನ್ನು ಒತ್ತಾಯಿಸುವಂತೆ ಅವರು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರೀಯಿಸಿದ ಸಚಿವರು ಈ ಬಗ್ಗೆ ಶಿಕ್ಷಣ ಸಚಿವರ ಜೊತೆ ಮಾತನಾಡುವುದಾಗಿ ಭರವಸೆ ನೀಡಿದರು. ಶಿಕ್ಷಕ ಆಕಾಂಕ್ಷಿಗಳಾದ ಸುನೀಲಕುಮಾರ ನಾಯ್ಕ, ಗಣಪತಿ ಸಭಾಹಿತ, ಮಾರುತಿ ನಾಯ್ಕ, ಸ್ವಾತಿ ಶೆಟ್ಟಿ, ಟೆರೆನ್ಸ ಗೊನ್ಸಾಲ್ವಿಸ್, ಕಾಜಲ ನಾಯ್ಕ, ದೀಪಾ ನಾಯ್ಕ, ಪಲ್ಲವಿ ನಾಯ್ಕ ಮತ್ತು ಅಭಿಲಾಷ ನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.