ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ
ಮುನ್ನೆಲೆಗೆ ಬಾರದ ಅಧ್ಯಯನ ಸಮಿತಿ ವರದಿ
Team Udayavani, May 31, 2023, 7:10 AM IST
ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದಕ್ಕೆ ಪೂರಕವಾಗಿ ರಾಜ್ಯ ಭಾಷೆಯನ್ನಾಗಿ ಘೋಷಿಸಬೇಕು ಎಂಬ ತುಳುನಾಡಿಗರ ಬೇಡಿಕೆ ಇನ್ನೂ ಈಡೇರಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ರಚಿಸಿದ ಸಮಿತಿಯ ವರದಿಯೇ ಬಹಿರಂಗಗೊಂಡಿಲ್ಲ.
ಬಿಜೆಪಿ ಸರಕಾರದ ಅವಧಿಯಲ್ಲಿ ಕರಾವಳಿಗರೇ ಆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮೇಲೆ ತುಳುನಾಡಿಗರಿಗೆ ಅಪಾರ ನಿರೀಕ್ಷೆ ಇತ್ತು. ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸುವ ಭರವಸೆಯನ್ನೂ ನೀಡಿದ್ದರು. ಆದರೆ ಈಡೇರಲಿಲ್ಲ. ಇದೀಗ ಕಾಂಗ್ರೆಸ್ ನೂತನ ಸರಕಾರ ರಚನೆಯಾಗಿದ್ದು, ಮಂತ್ರಿಮಂಡಲವೂ ಅಸ್ತಿತ್ವಕ್ಕೆ ಬಂದಿದೆ. ಈಗ ಮತ್ತೆ ತುಳುನಾಡಿಗರ ಕೂಗು ಮುನ್ನೆಲೆಗೆ ಬಂದಿದೆ.
ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವುದಕ್ಕೆ ಸಂಬಂಧಿಸಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಬಿಜೆಪಿ ಸರಕಾರವು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ಅಧ್ಯಯನ ನಡೆಸಿ ವಿಸ್ಕೃತ ವರದಿಯನ್ನು ಕೆಲವು ತಿಂಗಳ ಹಿಂದೆಯೇ ಸಲ್ಲಿಸಿತ್ತು. ಬಳಿಕ ಚುನಾವಣೆ ವಿಚಾರ ಮುನ್ನೆಲೆಗೆ ಬಂದ ಕಾರಣ ಆ ವರದಿ ಮೂಲೆಗೆ ಸೇರಿದೆ. ಇದೀಗ ನೂತನ ಸರಕಾರ ಅಧಿಕಾರ ವಹಿಸಿಕೊಂಡಿದ್ದು, ಈ ವರದಿ ಮುನ್ನೆಲೆಗೆ ಬರುತ್ತದೆಯೇ ಎಂದು ಕಾದು ನೋಡಬೇಕಾಗಿದೆ.
ಸ್ಪೀಕರ್ ಖಾದರ್ ಮೇಲೆ ನಿರೀಕ್ಷೆ
ತುಳು ರಾಜ್ಯ ಭಾಷೆಯಾಗಬೇಕು ಎಂಬ ಆಗ್ರಹಿಸಿದವರಲ್ಲಿ ಈಗ ಸ್ಪೀಕರ್ ಆಗಿರುವ ಯು.ಟಿ. ಖಾದರ್ ಕೂಡ ಒಬ್ಬರು. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ತುಳು ಭಾಷೆ ಸ್ಥಾನಮಾನಕ್ಕೆ ಒತ್ತಾಯ ಮಾಡಿ “ತುಳು ಭಾಷೆ ಜಿಲ್ಲೆಯ ದೈವ ದೇವರು ಮಾತನಾಡುವ ಭಾಷೆಯಾಗಿದೆ. ಈ ಭಾಷೆಗೆ ಅದರದ್ದೇ ಆದ ಇತಿಹಾಸವಿದೆ, ಸಾಂಸ್ಕೃತಿಕ ನೆಲೆಗಟ್ಟು, ಸ್ವಂತ ಅಕಾಡೆಮಿ ಇದೆ. ರಾಜ್ಯ ಸರಕಾರ ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಣೆ ಮಾಡಬೇಕು. ಅನೇಕ ವರ್ಷಗಳ ಇತಿಹಾಸ, ಸಾಹಿತ್ಯ, ಲಿಪಿ ಇರುವ ತುಳು ಭಾಷೆ ಅಧ್ಯಯನಕ್ಕೆ ಸಮಿತಿ ರಚಿಸಿ ಬಳಿಕ ಘೋಷಣೆ ಸರಿಯಲ್ಲ’ ಎಂದಿದ್ದರು.
ರಾಜ್ಯ ಭಾಷೆಯಾಗಿ ಬೇಡಿಕೆ
ದೇಶದ 22 ಭಾಷೆಗಳು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಂಡಿದ್ದು, ಇನ್ನೂ 44 ಭಾಷೆಗಳಿಂದ ಬೇಡಿಕೆ ಇದೆ. ಅದರಲ್ಲಿ ರಾಜ್ಯದ ತುಳು, ಕೊಡವ ಭಾಷೆಯೂ ಸೇರಿವೆ. ಅದಕ್ಕೂ ಮುನ್ನ ತುಳು ರಾಜ್ಯ ಭಾಷೆಯಾಗಲಿ ಎಂಬ ಅಭಿಯಾನ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ 5 ವರ್ಷಗಳ ಹಿಂದೆಯೇ ತುಳು ಸಾಹಿತ್ಯ ಅಕಾಡೆಮಿಯಿಂದ ಕರಾವಳಿ ಭಾಗದ ಶಾಸಕರಿಗೆ ಪತ್ರ ಬರೆಯಲಾಗಿತ್ತು. ಬಳಿಕ ಅನೇಕ ಸಂಘಟನೆಗಳು ಮನವಿ ಮಾಡಿದ್ದು, ಟ್ವೀಟ್ ಅಭಿಯಾನಗಳು ನಡೆದಿವೆ. ಕೆಲವು ಜನಪ್ರತಿನಿಧಿಗಳು ಈ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ.
ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯೆಂದು ಘೋಷಿಸುವ ಸಲುವಾಗಿ ಸಮಿತಿಯು ಈಗಾಗಲೇ ವರದಿ ಸಲ್ಲಿಸಿದ್ದು, ಕಾನೂನು ಇಲಾಖೆಗೆ ಕಳುಹಿಸಲಾಗಿದೆ. ಅವರ ಕಡೆಯಿಂದ ಅಭಿಪ್ರಾಯ ಬಂದ ಬಳಿಕ ವರದಿ ಕ್ಯಾಬಿನೆಟ್‌ಗೆ ಬರಬೇಕಿದೆ. ಹೊಸ ಸರಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸುತ್ತೇನೆ.
– ಸುನಿಲ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.