ದಕ್ಷಿಣ ಒಳನಾಡು, ಕರಾವಳಿಯಲ್ಲಿ 5 ದಿನ ಮಳೆ ಸಾಧ್ಯತೆ
Team Udayavani, Jun 1, 2023, 7:10 AM IST
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಸಮುದ್ರ ಮಟ್ಟದಿಂದ 900 ಮೀಟರ್ ಎತ್ತರದಲ್ಲಿ ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣದ ತಮಿಳುನಾಡಿನವರೆಗೂ ಟ್ರಫ್ ಮುಂದುವರೆಯಲಿದೆ. ಪರಿಣಾಮ ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ 5 ದಿನ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆ 2 ರಿಂದ 3 ಸೆಂ.ಮೀ. ಮಳೆಯಾಗುವ ಸಾಧ್ಯತೆಗಳಿವೆ. ವಿಜಯನಗರ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆಗಳಿವೆ. ರಾಜ್ಯದ ಕೆಲವೆಡೆ 3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದ ವಿವಿಧೆಡೆ ಮಳೆ: ಮಂಗಳವಾರ ರಾಮನಗರದಲ್ಲಿ 8 ಸೆಂ.ಮೀ., ಬೆಂಗಳೂರು ನಗರದಲ್ಲಿ 7 ಸೆಂ.ಮೀ. ಮಳೆಯಾಗಿದೆ. ಕೊಡಗಿನಲ್ಲಿ 5, ರಾಮನಗರದಲ್ಲಿ 4 ಸೆಂ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.