ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ರಿಯಾಯಿತಿ ಮರು ಜಾರಿ
Team Udayavani, Jun 2, 2023, 6:50 AM IST
ಬೆಂಗಳೂರು: ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ನೀಡಲಾಗುತ್ತಿದ್ದ ರಿಯಾಯಿತಿಯನ್ನು ಮರುಜಾರಿಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಈ ವಿಚಾರವಾಗಿ ಚುನಾಯಿತ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ಸಲಹೆ ನೀಡಿದೆ.
ಈ ಕುರಿತು ಹುಬ್ಬಳ್ಳಿಯ ವೈದ್ಯ, ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಡಾ.ವಿನೋದ್ ಜಿ. ಕುಲಕರ್ಣಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಹಾಗೂ ನ್ಯಾ.ಎಂ.ಜಿ.ಎಸ್.ಕಮಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರ ವಿನೋದ್ ಜಿ. ಕುಲಕರ್ಣಿ ವಾದ ಆಲಿಸಿದ ನ್ಯಾಯಪೀಠ, ಪ್ರಯಾಣ ದರದಲ್ಲಿ ರಿಯಾಯಿತಿ ಅಥವಾ ವಿನಾಯಿತಿ ನೀಡುವುದು ಸರ್ಕಾರದ ನೀತಿ ನಿರ್ಧಾರಕ ವಿಷಯವಾಗಿದೆ. ಈ ವಿಚಾರದಲ್ಲಿ ಸರ್ಕಾರಕ್ಕೆ ನಿರ್ದೇಶಿಸುವುದು ಅಥವಾ ಮಧ್ಯಪ್ರವೇಶಿಸಲು ಬರುವುದಿಲ್ಲ. ಅರ್ಜಿದಾರರ ಕಾಳಜಿ ಮತ್ತು ಬದ್ಧತೆ ಬಗ್ಗೆ ಅನುಮಾನವಿಲ್ಲ. ಅರ್ಜಿದಾರರ ಬೇಡಿಕೆ ನ್ಯಾಯೋಚಿತವಾಗಿರಬಹುದು. ಆದರೆ, ಅದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ರೂಪದಲ್ಲಿ ಪರಿಗಣಿಸಲು ಆಗುವುದಿಲ್ಲ ಎಂದು ಹೇಳಿತು.
ಅಲ್ಲದೇ ಅರ್ಜಿದಾರರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲಭ್ಯವಿರುವ ಬೇರೆ ಮಾರ್ಗ ಅಥವಾ ಅಸ್ತ್ರಗಳನ್ನು ಬಳಸಿಕೊಳ್ಳಬಹುದು. ಅದರಂತೆ ಚುನಾಯಿತ ಜನಪ್ರತಿನಿಧಿಗಳಾದ ಸಂಸದರು ಮತ್ತು ಶಾಸಕರನ್ನು ಅರ್ಜಿದಾರರು ಮನವಿ ಸಲ್ಲಿಸಲಿ, ಅವರ ಮೇಲೆ ಒತ್ತಡ ತರಲಿ. ಅವರು ಆ ಬಗ್ಗೆ ಶಾಸನಸಭೆಗಳಲ್ಲಿ ಧ್ವನಿ ಎತ್ತುತ್ತಾರೆ. ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸುವುದರ ಬದಲು ಅರ್ಜಿದಾರರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮಗೆ ಲಭ್ಯವಿರುವ ಅಸ್ತ್ರಗಳನ್ನು ಪರಿಣಾಮಕಾರಿಯಾಗಿ ಮತ್ತು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಪಡಿಸಿತು.
ಹಿರಿಯ ನಾಗರಿಕರು ಅಂದರೆ, 58 ವರ್ಷ ದಾಟಿದ ಮಹಿಳೆಯರಿಗೆ ಶೇ.50ರಷ್ಟು ಹಾಗೂ 60 ವರ್ಷ ದಾಟಿದ ಪುರುಷರಿಗೆ ಶೇ.40ರಷ್ಟು ರೈಲ್ವೆ ಪ್ರಯಾಣ ದರದಲ್ಲಿ ರಿಯಾಯಿತಿ ನೀಡಲಾಗುತ್ತಿತ್ತು. ಇದರಿಂದ ಬದುಕಿನ ಸಂಧ್ಯಾ ಕಾಲದಲ್ಲಿರುವ ಹಿರಿಯ ನಾಗರಿಕರು ತಮ್ಮಿಷ್ಟದ ಧಾರ್ಮಿಕ ಕೇಂದ್ರಗಳಿಗೆ ತೀರ್ಥಯಾತ್ರೆ ಕೈಗೊಳ್ಳಲು ಮತ್ತು ತಮ್ಮ ದೂರದ ಸಂಬಂಧಿಗಳನ್ನು ಭೇಟಿ ಮಾಡಲು ಬಹಳ ಅನುಕೂಲವಾಗಿತ್ತು. ಕೋವಿಡ್-19 ನಂತರ ಕಳೆದು ಎರಡು ವರ್ಷಗಳಿಂದ ರೈಲ್ವೆ ಇಲಾಖೆ ಈ ರಿಯಾಯಿತಿಯನ್ನು ಸ್ಥಗಿತಗೊಳಿಸಿದೆ. ಇದು ನಾಗರಿಕರ ಪ್ರಯಾಣದ ಹಕ್ಕನ್ನು ಮೊಟಕುಗೊಳಿಸಿದಂತಾಗಿದೆ. ಈ ವಿಚಾರವನ್ನು ಜನಪ್ರತಿನಿಧಿಗಳ ಗಮನಕ್ಕೆ ಸಾಕಷ್ಟು ಬಾರಿ ತಂದರೂ ಯಾವುದೇ ಪ್ರಯೋಜನ ಆಗಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.