Congress ಗ್ಯಾರಂಟಿ; 200 ಯೂನಿಟ್ ವಿದ್ಯುತ್ ಫ್ರೀ ,ಗೃಹ ಲಕ್ಷ್ಮೀ ಜಾರಿ; ವಿವರ ಇಲ್ಲಿದೆ

APL ನವರಿಗೂ ಲಕ್ಷ್ಮೀ ಭಾಗ್ಯ

Team Udayavani, Jun 2, 2023, 3:02 PM IST

Siddu-DKSHI

ಬೆಂಗಳೂರು: ಚುನಾವಣ ಪೂರ್ವದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಲು ತೀರ್ಮಾನಿಸಿದ್ದು, ಎಲ್ಲ ಜಾತಿ, ಧರ್ಮ ದವರಿಗೆ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿ ಶುಕ್ರವಾರ ನಡೆದ ಅತ್ಯಂತ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತನಾಡಿದರು. ಸಂಪುಟ ಸಚಿವರು ಈ ವೇಳೆ ಹಾಜರಿದ್ದರು.

ಮೊದಲನೆಯ ಗೃಹ ಜ್ಯೋತಿ ಯೋಜನೆಯಲ್ಲಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ನೀಡಲು ತೀರ್ಮಾನಿಸಿದ್ದೇವೆ.12 ತಿಂಗಳಲ್ಲಿ ಎಷ್ಟು ವಿದ್ಯುತ್ ಉಪಯೋಗಿಸಿದ್ದಾರೆ ಅದರ ಸರಾಸರಿ ಪಡೆಯುತ್ತೇವೆ, ಎಷ್ಟು ಬಳಸಿದ್ದಾರೆ ಆ ವಿದ್ಯುತ್ ಗೆ ಇನ್ನು ಮುಂದೆ ಬಿಲ್ ಕೊಡಬೇಕಾಗಿಲ್ಲ. 12 ತಿಂಗಳ ಆಧಾರದಲ್ಲಿ ಬಿಲ್ ನೀಡಲಾಗುತ್ತದೆ. ಜುಲೈ 1 ರಿಂದ ಎಲ್ಲರಿಗೂ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಎಂದರು.

ಗೃಹ ಲಕ್ಷ್ಮೀ ಯೋಜನೆ ಫಲಾನುಭವಿ ಮನೆಯ ಯಜಮಾನಿ ಆಗಿದ್ದು ಬ್ಯಾಂಕ್ ಮತ್ತು ಆಧಾರ್ ದಾಖಲೆ ನೀಡಬೇಕಾಗುತ್ತದೆ. ಅರ್ಜಿ ಕೊಡಬೇಕು. ಜೂನ್ 15 ರಿಂದ ಜುಲೈ 15 ರ ವರೆಗೆ ಆನ್ಲೈನ್ ಅರ್ಜಿ ಸಲ್ಲಿಸಬೇಕು. ಪರಿಶೀಲನೆ ಮಾಡಿ ಆಗಸ್ಟ್ 15  ರಂದು ಖಾತೆಗೆ ಹಣ ಹಾಕುತ್ತೇವೆ. ಎಪಿಎಲ್ ಮತ್ತು ಬಿಪಿಎಲ್ ನವರಿಗೂ ಯೋಜನೆಯ ಲಾಭ ಸಿಗಲಿದೆ. ವೃದ್ದಾಪ್ಯ ವೇತನ, ಇತರ ಪಿಂಚಣಿ ಫಲಾನುಭವಿಗಳಿಗೂ ಯೋಜನೆ ಅನ್ವಯವಾಗಲಿದೆ ಎಂದು ಸಿಎಂ ಸ್ಪಷ್ಟ ಪಡಿಸಿದರು.

ಅನ್ನಭಾಗ್ಯ ಯೋಜನೆ

ಜುಲೈ 01 ರಿಂದ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡು ದಾರರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದರು. ಈಗ ನಮ್ಮಲ್ಲಿ ಎಲ್ಲರಿಗೂ 10 ಕೆಜಿ ಕೊಡುವಷ್ಟು ದಾಸ್ತಾನು ಇಲ್ಲ ಎಂದು ಸಿಎಂ ಹೇಳಿದರು.

ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರನ್ನೊಳಗೊಂಡಂತೆ ಬಸ್ ನಲ್ಲಿ ಉಚಿತ ಪ್ರಯಾಣ ಜೂನ್ 11  ರಿಂದ ಜಾರಿ ಮಾಡುತ್ತೇವೆ. ಕರ್ನಾಟಕದೊಳಗೆ ಪ್ರಯಾಣಿಸಲು ಅನ್ವಯ. ರಾಜ್ಯದ ಒಳಗಡೆ ಎಸಿ, ರಾಜಹಂಸ ಬಸ್ ಹೊರತುಪಡಿಸಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ನಲ್ಲೂ ಫ್ರೀ ಆಗಿ ಪ್ರಯಾಣ ಮಾಡಬಹುದು. ಬೆಂಗಳೂರಿನಿಂದ ತಿರುಪತಿಯಾಗಲಿ, ಹೊರ ರಾಜ್ಯಕ್ಕಾಗಲಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದರು. ಕೆಎಸ್ ಆರ್ ಟಿಸಿ ಯಲ್ಲಿ ಪುರುಷರಿಗೆ 50% ಮೀಸಲಿಡುತ್ತೇವೆ, ಇದು ಬಿಎಂಟಿಸಿ ಬಸ್ ನಲ್ಲಿ ಅನ್ವಯವಾಗುವುದಿಲ್ಲ ಎಂದರು.

ಯುವನಿಧಿ ಯೋಜನೆಯಡಿ 2022-2023 ರಲ್ಲಿ ಉತ್ತೀರ್ಣರಾದ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ 24 ತಿಂಗಳವರೆಗೆ 3000 ರೂಪಾಯಿ ಮತ್ತು ಡಿಪ್ಲೋಮಾ ಮಾಡಿದವರಿಗೆ 1500 ರೂಪಾಯಿ ನಿರುದ್ಯೋಗ ಭತ್ಯೆ ನೀಡುತ್ತೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರ ಖಾತೆಗಳಿಗೆ 15 ಲಕ್ಷ ರೂ. ಹಾಕಿದರೆ ? ಅಚ್ಛೆದಿನ್ ತಂದರೆ? ರೈತರ ಆದಾಯ ದುಪ್ಪಟ್ಟು ಮಾಡಿದರೇ? ೨ ಕೋಟಿ ಮಂದಿಗೆ ಉದ್ಯೋಗ ಸೃಷ್ಟಿ ಮಾಡಿದರೇ? ನಾವು ಮಾಡಿದ್ದೇವೆ ಮತ್ತು ಮಾಡುತ್ತೇವೆ ಎಂದು ಬಿಜೆಪಿ ಟೀಕೆಗಳಿಗೆ ತಿರುಗೇಟು ನೀಡಿದರು.

ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮಹತ್ವದ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಮಹತ್ವದ ನಿರ್ಧಾರವನ್ನು ಇಂದು ಪ್ರಕಟಿಸುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.