Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ


Team Udayavani, Jun 2, 2023, 10:35 PM IST

1-dsad

ಬಾಲಸೋರ್‌: ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ 7 ಗಂಟೆಯ ವೇಳೆಗೆ ಹಳಿತಪ್ಪಿದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್ ರೈಲು ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, 350  ಕ್ಕೂ ಹೆಚ್ಚು ಮಂದಿ ಮಂದಿ ಗಾಯಗೊಂಡಿದ್ದಾರೆ. ಹಲವರು ಸಿಕ್ಕಿಬಿದ್ದಿರುವ ಶಂಕೆ ಇದ್ದು, ಸಾವು ನೋವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂರನೇ ಸರಕು ಸಾಗಣೆ ರೈಲು ಕೂಡ ಅಪಘಾತದಲ್ಲಿ ಸಿಲುಕಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ತಿಳಿಸಿದ್ದಾರೆ. ಹೌರಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಬೆಂಗಳೂರಿನಿಂದ ಕೋಲ್ಕತಾಗೆ ಹೋಗುತ್ತಿದ್ದ ಮತ್ತೊಂದು ರೈಲಿನ ಹಳಿತಪ್ಪಿದ ಬೋಗಿಗಳಿಗೆ ಢಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ಎರಡು ರೈಲುಗಳ ವಿವರಗಳು 12841 ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು 12864 ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್.ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹದಿನೈದು ಬೋಗಿಗಳು ಹಳಿಯಿಂದ ಹೊರಬಂದವು, ಇತರ ಎರಡು ರೈಲು ಹಳಿತಪ್ಪಿದೆ ಎಂಬ ವಿವರಗಳು ಲಭ್ಯವಾಗಿದೆ.

ಒಡಿಶಾ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಸುಧಾಂಶು ಸಾರಂಗಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಬಾಲಸೋರ್ ಮತ್ತು ಸುತ್ತಮುತ್ತಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಲಾಗಿದೆ ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಸಜ್ಜುಗೊಳಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಳಸಿಕೊಳ್ಳಲಾಗಿದೆ.

ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (NDRF) ನ ನೂರಕ್ಕೂ ಹೆಚ್ಚು ಸಿಬಂದಿ ಸಿಕ್ಕಿಬಿದ್ದ ಪ್ರಯಾಣಿಕರನ್ನು ಹುಡುಕುತ್ತಿದ್ದಾರೆ.

ಪ್ರಧಾನಿ ತೀವ್ರ ಸಂತಾಪ

ದುರಂತದ ಕುರಿತು ಪ್ರಧಾನಿ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಕಂಗಾಲಾಗಿದ್ದೇನೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜತೆ ಮಾತನಾಡಿದ್ದೇನೆ. ಪರಿಸ್ಥಿತಿಯ ಕುರಿತು ವಿವರ ತೆಗೆದುಕೊಂಡಿದ್ದೇನೆ. ದುರಂತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತ ಸ್ಥಳಕ್ಕೆ ತೆರಳುತ್ತಿದ್ದಾರೆ. ಸಂತ್ರಸ್ತರಿಗೆ ಪರಿಹಾರವನ್ನೂ ಘೋಷಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂ.ಪರಿಹಾರ ಘೋಷಿಸಿದ್ದಾರೆ.

ರಾಷ್ಟ್ರಪತಿ ಸಂತಾಪ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ”ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ದುರದೃಷ್ಟಕರ ರೈಲು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ನನ್ನ ಹೃದಯವು ದುಃಖಿತ ಕುಟುಂಬಗಳಿಗೆ ಮಿಡಿಯುತ್ತದೆ. ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.”ಎಂದು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಸಂತಾಪ
ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರೈಲ್ವೆ ಇಲಾಖೆ ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದೆ
Howrah Helpline Number: 033-26382217

Kharagpur Helpline Number: 8972073925 & 9332392339

Balasore Helpline Number: 8249591559 & 7978418322

Shalimar Helpline Number: 9903370746

ಟಾಪ್ ನ್ಯೂಸ್

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.