![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 3, 2023, 11:19 AM IST
ವಿಟ್ಲ: ಹಳೆಯ ದ್ವೇಷವನ್ನಿಟ್ಟುಕೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಕಂಬಳಬೆಟ್ಟುವಿನಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.
ಮಣಿನಾಲ್ಕೂರು ಗ್ರಾಮದ ಅಜಲುಮೊಗರು ನಿವಾಸಿ ಮಹಮ್ಮದ್ ಸರ್ವನ್ (27) ಹಾಗೂ ಜತೆಗೆ ಕೆಲಸ ಮಾಡುವ ಫಾರೂಕ್ ಹಲ್ಲೆಗೊಳಗಾದ ವ್ಯಕ್ತಿಗಳು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಇಸುಬು, ಜಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರೆ ಮೂರು ಜನರು ಹಲ್ಲೆಮಾಡಿದ ಆರೋಪಿಗಳಾಗಿದ್ದಾರೆ.
ಕಂಬಳಬೆಟ್ಟುವಿನಲ್ಲಿ ಅಕ್ರಮ ಕೂಟ ಸೇರಿಕೊಂಡು ಮಹಮ್ಮದ್ ಸರ್ವನ್ ಅವರನ್ನು ಕಾರಿನಿಂದ ಕೆಳಗೆ ಎಳೆದು ಕೈಯಿಂದ ಮುಖಕ್ಕೆ, ಬೆನ್ನಿಗೆ, ಹೊಟ್ಟೆಗೆ ಕೈಯಿಂದ ಹೊಡೆದು ಕಾಲುಗಳಿಂದ ತುಳಿದಿದ್ದಾರೆ. ಸರ್ವನ್ ಜತೆ ಕೆಲಸ ಮಾಡುವ ಫಾರೂಕ್ ತಡೆಯಲು ಬಂದಾಗ ಮರದ ದೊಣ್ಣೆಯಿಂದ ಆತನ ತಲೆಗೆ, ಬೆನ್ನಿಗೆ ಹೊಡೆದಿದ್ದಾರೆ. ಬಳಿಕ ನಮ್ಮ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿ ದೊಣ್ಣೆಯನ್ನು ಅಲ್ಲೇ ಎಸೆದು ಹೋಗಿರುವ ಬಗ್ಗೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಗಾಯಾಳು ಮಹಮ್ಮದ್ ಸರ್ವನ್ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದರೆ, ಫಾರೂಕ್ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.