ದಲಿತ ದೌರ್ಜನ್ಯ ಪ್ರಕರಣದಲ್ಲಿ ರಾಜಿಗೆ ಸೂಚಿಸದಿರಿ

ಎಸ್‌.ಸಿ., ಎಸ್‌.ಟಿ. ಅಹವಾಲು ಸಭೆಯಲ್ಲಿ ಪ್ರಭಾರ ಎಸ್‌ಪಿ ರಿಷ್ಯಂತ್‌

Team Udayavani, Jun 3, 2023, 3:36 PM IST

ದಲಿತ ದೌರ್ಜನ್ಯ ಪ್ರಕರಣದಲ್ಲಿ ರಾಜಿಗೆ ಸೂಚಿಸದಿರಿ

ಮಹಾನಗರ: ದಲಿತ ದೌರ್ಜನ್ಯದ ಬಗ್ಗೆ ದೂರು ನೀಡಲು ಬಂದರೆ ಅಂತಹ ಸಂದರ್ಭದಲ್ಲಿ ಪೊಲೀಸರೇ ದೂರುದಾರರನ್ನು ರಾಜಿ ಪಂಚಾಯತಿಕೆಗೆ ಬರುವಂತೆ ಸೂಚಿಸುವುದು ಸರಿಯಲ್ಲ. ಈ ಬಗ್ಗೆ ಎಲ್ಲ ಪೊಲೀಸ್‌ ಅಧಿಕಾರಿಗಳಿಗೂ ಸೂಚನೆ ನೀಡಲಾಗುವುದು ಎಂದು ದ.ಕ. ಜಿಲ್ಲಾ ಪ್ರಭಾರ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಹೇಳಿದ್ದಾರೆ.

ಎಸ್‌ಪಿ ಕಚೇರಿಯಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಹವಾಲು ಆಲಿಕೆ ಸಭೆಯಲ್ಲಿ ಅವರು ಅಹವಾಲಿಗೆ ಸ್ಪಂದಿಸುತ್ತಾ ಮಾತನಾಡಿದರು.

ದಲಿತ ದೌರ್ಜನ್ಯದ ಬಗ್ಗೆ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಎಫ್ಐಆರ್‌ ಬೇಡ. ರಾಜಿ ಪಂಚಾಯಿತಿಕೆ ಮಾಡೋಣ. ನಿಮ್ಮ ದೂರಿನಂತೆಯೇ ಎದುರಿನವರು ಕೂಡ ದೂರು ನೀಡುತ್ತಾರೆ ಎನ್ನುತ್ತಾರೆ. ಅನೇಕ ಕಡೆ ದಲಿತ ದೌರ್ಜನ್ಯ ದೂರುಗಳು ದಾಖಲಾದ ಮರುದಿನ ಪ್ರತಿದೂರು ಕೂಡ ದಾಖಲಾಗುತ್ತಿವೆ. ಇಂತಹ ವಿದ್ಯಮಾನ ಜಿಲ್ಲೆಯಾದ್ಯಂತ ನಡೆಯುತ್ತಿದೆ. ಇದರಿಂದ ಸಮರ್ಪಕ ತನಿಖೆಯಾಗಿ ನ್ಯಾಯ ಸಿಗುವುದಿಲ್ಲ’ ಎಂದು ದಲಿತ ಮುಂದಾಳು ಶೇಖರ್‌ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಭಾರ ಎಸ್‌ಪಿ ರಿಷ್ಯಂತ್‌ ಅವರು, ಯಾವುದೇ ಘಟನೆಗಳ ಸಂದರ್ಭದಲ್ಲಿ ದೂರು ದಾಖಲಾದರೆ ಅದಕ್ಕೆ ಪ್ರತಿದೂರು ಕೂಡ ನೀಡಬಹುದು. ಇದು ಪ್ರತಿಯೋರ್ವರ ಹಕ್ಕು ಕೂಡ ಆಗಿದೆ. ಆದರೆ ಪೊಲೀಸರೇ ಯಾವುದೇ ಕಾರಣಕ್ಕೂ ತೊಂದರೆಗೊಳಗಾದವರು ದೂರು ನೀಡದಂತೆ ತಡೆಯುವುದು, ರಾಜಿ ಪಂಚಾಯತಿಕೆಗೆ ಪೊಲೀಸರೇ ಆಸಕ್ತಿ ವಹಿಸುವುದು ತಪ್ಪು ಎಂದರು.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ನಿಷ್ಕ್ರಿಯ ಈ ಹಿಂದೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ದಲಿತರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ನಿಗಾ ವಹಿಸಿ ಕ್ರಮ ಕೈಗೊಳ್ಳುತ್ತಿತ್ತು. ಯಾವುದೇ ಇಲಾಖೆಗೆ ಸಂಬಂಧಿಸಿದ ದೂರುಗಳಿದ್ದರೂ ಅವುಗಳ ಬಗ್ಗೆ ಪರಿಶೀಲನೆ ನಡೆಸುತ್ತಿತ್ತು. ಆದರೆ ಈಗ ಸಂಪೂರ್ಣ ನಿಷಿ¢ಯವಾಗಿದೆ ಎಂದು ಶೇಷಪ್ಪ ದೂರಿದರು. ಇದಕ್ಕೆ ದನಿಗೂಡಿಸಿದ ಶೇಖರ್‌, ಗ್ರಾ.ಪಂ. ಸದಸ್ಯರೋರ್ವರು ನಕಲಿ ಜಾತಿ ಪ್ರಮಾಣಪತ್ರ ಪಡೆದ ಬಗ್ಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿ ಎರಡೂವರೆ ವರ್ಷಗಳಾದರೂ ಹಿಂಬರಹ ಕೂಡ ನೀಡಿಲ್ಲ ಎಂದು ಆರೋಪಿಸಿದರು. ಈ ಸಂದರ್ಭ ಮಾತನಾಡಿದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಈ ಬಗ್ಗೆ ತನಿಖೆ ನಡೆದಿದ್ದು, ವರದಿಯನ್ನು ಎಡಿಜಿಪಿಯವರಿಗೆ ಸಲ್ಲಿಸಲಾಗಿದೆ ಎಂದರು. ತನಿಖೆ ಭಾರೀ ವಿಳಂಬವಾಗಿ ನಡೆದಿದೆ ಎಂದು ದಲಿತ ಮುಂದಾಳುಗಳು ಅಸಮಾಧಾನ ವ್ಯಕ್ತಪಡಿಸಿದರು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಠಾಣಾ ಸಭೆಗಳ ಮಾಹಿತಿ ನೀಡಿ
ಈಶ್ವರಿ ಶಂಕರ್‌ ಮಾತನಾಡಿ, ಬೆಳ್ತಂಗಡಿ ಪೊಲೀಸರು ತೊಂದರೆಗೊಳಗಾದವರ ಮೇಲೆಯೇ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್‌ ಠಾಣೆಗಳಲ್ಲಿ ನಡೆಯುವ ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆಯ ಮಾಹಿತಿ ದೊರೆಯುತ್ತಿಲ್ಲ ಎಂದರು. ಈ ಬಗ್ಗೆ ಗಮನ ಹರಿಸಲಾಗುವುದು. ಪ್ರತಿ ತಿಂಗಳ ಮೂರನೇ ರವಿವಾರ ಠಾಣಾ ಮಟ್ಟದ ಸಭೆ ನಡೆಸಲಾಗುತ್ತಿದೆ. ಒಂದು ವೇಳೆ ಬೇರೆ ದಿನಾಂಕಗಳಲ್ಲಿ ಸಭೆಗಳು ನಡೆಯುತ್ತಿದ್ದರೆ ಸಂಬಂಧಿಸಿದವರೆಲ್ಲರಿಗೂ ಮಾಹಿತಿ ನೀಡಬೇಕು. ಇದರ ಜವಾಬ್ದಾರಿಯನ್ನು ಬೀಟ್‌ ಪೊಲೀಸರಿಗೆ ವಹಿಸಬೇಕು ಎಂದು ಎಸ್‌ಪಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೈಜ ಆರೋಪಿಗಳನ್ನು ಬಂಧಿಸಿ
ಶಿಬಾಜೆಯ ಶ್ರೀಧರ ಅವರ ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಇದರಲ್ಲಿ ಹಲವರ ಕೈವಾಡವಿದೆ ಎಂದು ದಲಿತ ಮುಂದಾಳು ಎಸ್‌.ಪಿ. ಆನಂದ ಅವರು ಆರೋಪಿಸಿದರು. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್‌ಪಿ ಭರವಸೆ ನೀಡಿದರು.

ಪುತ್ತೂರಿನ ಪ್ರಭಾರ ಡಿವೈಎಸ್‌ಪಿ ಗಾನಾ, ಬಂಟ್ವಾಳದ ಪ್ರಭಾರ ಡಿವೈಎಸ್‌ಪಿ ವೇಣುಗೋಪಾಲ್‌ ಉಪಸ್ಥಿತರಿದ್ದರು.

ಸಾಮಾಜಿಕ ಜಾಲ ತಾಣ ಬಳಕೆ ನಿಯಂತ್ರಣದಲ್ಲಿರಲಿ
ವಾಟ್ಸ್‌ಆ್ಯಪ್‌ ಮತ್ತಿತರ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸುವ ಸಂದೇಶಗಳು, ನಡೆಯುವ ಚರ್ಚೆಗಳು ಹಲವಾರು ಘಟನೆಗಳಿಗೆ ಕಾರಣವಾಗುತ್ತಿವೆ. ಇತ್ತೀಚೆಗೆ ನಡೆಯುತ್ತಿರುವ ಪ್ರಕರಣಗಳಲ್ಲಿ ಹೆಚ್ಚಿನವು ಇದೇ ರೀತಿಯ ಕಾರಣದಿಂದ ಉಂಟಾಗಿವೆ. ಈ ಬಗ್ಗೆ ಎಲ್ಲರೂ ಗಂಭೀರವಾಗಿ ಯೋಚಿಸಬೇಕು. ಪೊಲೀಸ್‌ ಇಲಾಖೆ ಈಗಾಗಲೇ ಸಾಮಾಜಿಕ ಜಾಲತಾಣ ನಿಯಂತ್ರಣ ಘಟಕದ ಮೂಲಕವೂ ನಿಗಾ ವಹಿಸುತ್ತಿದೆ. ಸಾರ್ವಜನಿಕರು ಯಾವುದೇ ರೀತಿಯ ಅನಗತ್ಯವಾದ ಸಂದೇಶಗಳನ್ನು ಕಳುಹಿಸುವುದು, ಫಾರ್ವರ್ಡ್‌ ಮಾಡುವುದು, ಈ ಬಗ್ಗೆ ಪ್ರಚೋದನಾತ್ಮಕವಾಗಿ ಪ್ರತಿಕ್ರಿಯಿಸುವುದು ಮಾಡಬಾರದು ಎಂದು ರಿಷ್ಯಂತ್‌ ಮನವಿ ಮಾಡಿದರು.

ಇತರ ದೂರುಗಳು
ಲೇಡಿಗೋಶನ್‌ ಪರಿಸರದಲ್ಲಿ ಮಕ್ಕಳನ್ನು ದುಡಿಸಿಕೊಂಡು ದೌರ್ಜನ್ಯವೆಸಗಲಾಗುತ್ತಿದೆ ಎಂದು ಶೇಷಪ್ಪ ದೂರಿದರು. ಸಭೆಯಲ್ಲಿ ಪ್ರಸ್ತಾವವಾಗುವ ಬೇರೆ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳ ಬಗ್ಗೆಯೂ ಪೊಲೀಸರು ಗಮನಹರಿಸಿ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸಬೇಕು ಎಂದು ವಿಶ್ವನಾಥ್‌ ಮತ್ತಿತರು ಮನವಿ ಮಾಡಿದರು. ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದಲ್ಲಿ ಹೊಳೆ ಬದಿ ಮನೆಯವರು ಅಳವಡಿಸಿರುವ ಸಿಸಿ ಕೆಮರಾದಿಂದಾಗಿ ಸ್ನಾನ ಮಾಡುವವರಿಗೆ ತೊಂದರೆಯಾಗುತ್ತಿದೆ ಎಂದು ವಿಶ್ವನಾಥ ಅಲೆಕ್ಕಾಡಿ ದೂರಿದರು. ಈ ಬಗ್ಗೆ ಪೊಲೀಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಎಸ್‌ಪಿ ತಿಳಿಸಿದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.