ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ


Team Udayavani, Jun 3, 2023, 5:30 PM IST

ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ

ಗದಗ: ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯ  2023-24ನೇ ಸಾಲಿನಲ್ಲಿ ಎರಡೇ ತಿಂಗಳಲ್ಲಿ ರೋಣ ತಾಲೂಕು ಪಂಚಾಯತಿ ನಿಗದಿತ ಗುರಿ ಸಾಧಿಸಿ ಮಾನವ ದಿನಗಳ ಸೃಜನೆ ಮಾಡುವ ಮೂಲಕ ರಾಜ್ಯದಲ್ಲೇ ಉತ್ತಮ ನರೇಗಾ ಕೆಲಸಗಳನ್ನು ಮಾಡಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

2023-24ರಲ್ಲಿ ವರ್ಷದಲ್ಲಿ ರೋಣ ತಾಲೂಕು  ಪಂಚಾಯತಿ 24 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 6,43,733 ಮಾನವ ದಿನಗಳನ್ನು ಸೃಜಿಸುವ ಮೂಲಕ 1880.05 ಲಕ್ಷ ರೂ. ಆರ್ಥಿಕ ಪ್ರಗತಿ ಸಾಧನೆ ಮಾಡಿರುವುದು ಕೂಡ ರಾಜ್ಯ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಶಂಸೆಗೆ ಪಾತ್ರವಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಚೀಟಿ ಹೊಂದಿರುವ
ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಕೆಲಸ ಪಡೆಯುವ ಹಕ್ಕು ನೀಡುವುದಷ್ಟೇ ಅಲ್ಲದೇ, ಸಾಕಷ್ಟು ರೈತರಿಗೆ ತಮ್ಮದೇ ಜಮೀನಿನಲ್ಲಿ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳನ್ನು ಉತ್ತೇಜಿಸುವ ಕೆಲಸಗಳನ್ನು ಮಾಡಿಕೊಂಡು ಅವರ ಜಮೀನಿನ ಉತ್ಪಾದಕತೆ ಹೆಚ್ಚಿಸಿ, ಕುಟುಂಬದ ಜೀವನೋಪಾಯ ಮಾರ್ಗಗಳನ್ನು ಬಲಪಡಿಸಲು ಸಹ ನರೇಗಾ ಯೋಜನೆ ಸಹಕಾರಿಯಾಗಿದೆ.

ರೋಣ ತಾಲೂಕಿನ 24 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ದನದ ಕೊಟ್ಟಿಗೆ, ಬಚ್ಚಲು  ಗುಂಡಿ, ಕೋಳಿ ಶೆಡ್‌, ಕುರಿ ಶೆಡ್‌, ಕೃಷಿ ಬಾವಿ, ಕೃಷಿ ಹೊಂಡ, ಕಲ್ಯಾಣಿಗಳ ಪುನಃಶ್ಚೇತನ, ಅರಣ್ಯೀಕರಣ ಸೇರಿದಂತೆ ಕಾಮಗಾರಿಗಳನ್ನು ಅನುಷ್ಠಾನಕ್ಕೆ ಕ್ರಿಯಾ ಯೋಜನೆ ಮಾಡಲಾಗಿದೆ.

ಸಮಗ್ರ ಶಾಲಾ ಅಭಿವೃದ್ಧಿಗಾಗಿ ಶಾಲಾ ಕಾಂಪೌಂಡ್‌, ಪೌಷ್ಟಿಕ ಕೈತೋಟ, ದಾಸೋಹ ಭವನ, ಆಟದ ಮೈದಾನ, ಶೌಚಾಲಯವನ್ನು ಈ ಯೋಜನೆಯಡಿ ಮಾಡಿಕೊಂಡಿದ್ದಾರೆ. ಜಲ ಸಂರಕ್ಷಣೆ ಕಾಮಗಾರಿಗಳು ಸೇರಿದಂತೆ ಮಣ್ಣಿನ ಸವಕಳಿ ತಡೆಗಟ್ಟಿ ಅಂತರ್ಜಲ ಮಟ್ಟ ಹೆಚ್ಚಿಸಲು ಚೆಕ್‌ ಡ್ಯಾಂ, ನೀರು ಕಾಲುವೆ, ಇಂಗು ಗುಂಡಿಗಳನ್ನು ಮಾಡಲಾಗುತ್ತಿದೆ. ಸರ್ಕಾರದ ಯೋಜನೆಯಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮೃತ ಸರೋವರಕ್ಕೆ ಆಯ್ಕೆಯಾದ ಸರೋವರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ರೋಣ ತಾಲೂಕಿನ ಆರ್ಥಿಕ ವರ್ಷ ಮಾನವ ದಿನ ಸೃಜನೆ
2019-20ನೇ ಸಾಲಿನಲ್ಲಿ 8,85,737
2020-21ನೇ ಸಾಲಿನಲ್ಲಿ 6,11,574
2021-22ನೇ ಸಾಲಿನಲ್ಲಿ 9,29,521
2022-23ನೇ ಸಾಲಿನಲ್ಲಿ 4,98,878
2023-24ನೇ ಸಾಲಿನಲ್ಲಿ ಈವರೆಗೆ 6,43,733 ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಸಾಧನೆ ಮಾಡಿದೆ.

ನರೇಗಾ ಯೋಜನೆಯ ಅರ್ಹ ಫಲಾನುಭವಿಗಳು
ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಬಡತನ ರೇಖೆ ಕೆಳಮಟ್ಟದಲ್ಲಿ ಇರುವ ಇತರೆ ಕುಟುಂಬಗಳು ಸ್ತ್ರೀ ಪ್ರಧಾನ ಕುಟುಂಬಗಳು
ಭೂ-ಸುಧಾರಣಾ ಫಲಾನುಭವಿಗಳು ಇಂದಿರಾ ಆವಾಸ್‌ ಯೋಜನೆಯ ಫಲಾನುಭವಿಗಳು ಅರಣ್ಯ ಹಕ್ಕು ಕಾಯ್ದೆಯ ಫಲಾನುಭವಿಗಳು ವಿಕಲಚೇತನ ಪ್ರಧಾನ ಕುಟುಂಬಗಳು ಬುಡಕಟ್ಟು ಹಾಗೂ ಅಲೆಮಾರಿ ಜನಗಳು ಸಣ್ಣ ಮತ್ತು ಅತೀ ಸಣ್ಣ ರೈತರು.

ಗ್ರಾಮೀಣ ಭಾಗದ ಕೂಲಿಕಾರರಿಗೆ ನರೇಗಾ ಯೋಜನೆಯಡಿ ಪ್ರತಿದಿನ ಹೆಣ್ಣು ಮತ್ತು ಗಂಡಿಗೆ ಸಮಾನವಾಗಿ 316 ರೂ. ಕೂಲಿ
ನೀಡಲಾಗುತ್ತಿದೆ. 2023-24ರಲ್ಲಿ ಎರಡೇ ತಿಂಗಳಲ್ಲಿ ರೋಣ ತಾಪಂ ನಿಗದಿತ ಗುರಿ ಸಾ ಧಿಸಿದ್ದು ಶ್ಲಾಘನೀಯ. ರೋಣ ನರೇಗಾ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.
ಡಾ| ಸುಶೀಲಾ ಬಿ., ಜಿಪಂ ಸಿಇಒ, ಗದಗ

ಮೊದಲ ದಿನದಿಂದಲೇ ರೋಣ ತಾಲೂಕಿನ ನರೇಗಾ ಸಿಬ್ಬಂದಿ ಆರ್ಥಿಕ ವರ್ಷದಲ್ಲಿ ಉತ್ತಮ ಪ್ರಗತಿ ಸಾಧಿಸುವ ಗುರಿ ಹೊಂದಿದ್ದರು. ಹಾಗಾಗಿ, ಅವರು ಬೇಗ ಗುರಿ ಸಾಧಿಸಿದ್ದಾರೆ.
ಬಸವರಾಜ ಅಡವಿಮಠ,
ಉಪ-ಕಾರ್ಯದರ್ಶಿ, ಜಿಪಂ, ಗದಗ

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.