ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

Team Udayavani, Jun 4, 2023, 8:20 AM IST

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು : ಅಪರಾಧ ಕೃತ್ಯಗಳು ಮರುಕಳಿಸದಂತೆ ಆರೋಪಿಗಳಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳುವ ಪ್ರಕ್ರಿಯೆ ನಡೆಸಲಾಗುತ್ತಿದ್ದು ಕಳೆದ 5 ವರ್ಷಗಳಲ್ಲಿ “ನೈತಿಕ ಪೊಲೀಸ್‌ಗಿರಿ’ ಎಂದು ಕರೆಯಲ್ಪಡುವ ಘಟನೆಗಳಲ್ಲಿ ಭಾಗಿಯಾದವರನ್ನು ಗುರುತಿಸಲಾಗಿದ್ದು ಅವರಿಂದಲೂ ಇದೇ ರೀತಿ ಮುಚ್ಚಳಿಕೆ ಪಡೆದುಕೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದ್ದಾರೆ.

ಸೋಮೇಶ್ವರದಲ್ಲಿ ನಡೆದ “ನೈತಿಕ ಪೊಲೀಸ್‌ಗಿರಿ’ ಘಟನೆಯ ಹಿನ್ನೆಲೆಯಲ್ಲಿ ಶನಿವಾರ ಪತ್ರಕರ್ತರು ಆಯುಕ್ತರನ್ನು ಪ್ರಶ್ನಿಸಿದಾಗ, ಮುಂಜಾಗರೂಕತ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್‌ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗುವುದು. ಇದುವರೆಗೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಕಾನೂನುಬಾಹಿರ ಕೃತ್ಯಗಳಲ್ಲಿ ಈ ಹಿಂದೆ ಪಾಲ್ಗೊಂಡಿದ್ದ 1,200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ ಒಂದು ವರ್ಷ ಅವಧಿ ಹೊಂದಿರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುವುದು. ಮುಚ್ಚಳಿಕೆ ನಿಯಮ ಉಲ್ಲಂ ಸಿದರೆ ಜಾಮೀನು ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು ಮತ್ತೂಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು. ಕಳೆದ ವರ್ಷ ಜಾಮೀನು ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂ ಸಿದ 9 ಮಂದಿಯ 1.90 ಲ.ರೂ. ಬಾಂಡ್‌ ಮೊತ್ತವನ್ನು ಸರಕಾರದ ಖಜಾನೆಗೆ ಒಪ್ಪಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

62 ಮಂದಿ ಗಡೀಪಾರು
ಕಳೆದ ಒಂದು ವರ್ಷದಲ್ಲಿ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯ 62 ಮಂದಿ ರೌಡಿಶೀಟರ್‌ಗಳನ್ನು ಗಡೀಪಾರು ಮಾಡಲಾಗಿದ್ದು ಅವರ ಮೇಲೆ ನಿರಂತರ ನಿಗಾ ಇಡಲಾಗಿದೆ. ರಾಜ್ಯದ ಇತರ ಕಡೆಗಳಿಗೆ ಹೋಲಿಸಿದರೆ ಅತೀ ಹೆಚ್ಚು ಮಂದಿ ರೌಡಿಗಳನ್ನು ಮಂಗಳೂರಿನಿಂದ ಗಡೀಪಾರು ಮಾಡಲಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಗಸ್ತು ಹೆಚ್ಚಳ
ಸೋಮೇಶ್ವರ ಬೀಚ್‌ನಲ್ಲಿ “ನೈತಿಕ ಪೊಲೀಸ್‌ಗಿರಿ’ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಬೀಚ್‌ಗಳು, ಮಾಲ್‌ಗ‌ಳು ಸೇರಿದಂತೆ ಜನರು ಹೆಚ್ಚು ಸೇರುವ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಲಾಗಿದೆ. ಕಾನೂನು ಬಾಹಿರವಾಗಿ ಯಾವುದೇ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಸೋಮೇಶ್ವರ : ಆರೋಪಿಗಳಿಗೆ ನ್ಯಾಯಾಂಗ ಬಂಧನ
ಸೋಮೇಶ್ವರ ಬೀಚ್‌ನಲ್ಲಿ ಗುರುವಾರ ನಡೆದ “ನೈತಿಕ ಪೊಲೀಸ್‌ಗಿರಿ’ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿರುವ 7 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ನ್ಯಾಯಾಲಯವು ಜೂ.14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಓರ್ವ ಅಪ್ರಾಪ್ತನನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದ್ದು ಮಂಡಳಿಯ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.