Haveri: ಪತ್ನಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ
Team Udayavani, Jun 7, 2023, 1:40 PM IST
ಹಾವೇರಿ : ಮಾರಕಾಸ್ತ್ರದಿಂದ ಪತ್ನಿಯ ಬರ್ಬರ ಹತ್ಯೆ ಮಾಡಿ ನಂತರ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಾಲೂಕಿನ ಸಂಗೂರು ಗ್ರಾಮದಲ್ಲಿ ನಡೆದಿದೆ.
ದ್ರಾಕ್ಷಾಣೆವ್ವ ವಾರ್ತಿ(45 ವರ್ಷ) ಪತಿಯಿಂದ ಹತ್ಯೆಗೆ ಒಳಗಾದ ಪತ್ನಿ. ಪತ್ನಿಯ ಹತ್ಯೆ ಮಾಡಿದ ನಂತರ ಪ್ರಭು ವಾರ್ತಿ(52 ವರ್ಷ) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪತ್ನಿಯ ಮೇಲಿನ ಸಂಸಯದಿಂದ ಪತಿ ಮತ್ತು ಪತ್ನಿಯ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಬುಧವಾರ ಬೆಳಗಿನ ಜಾವ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಪತಿ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪತ್ನಿಯ ಹತ್ಯೆ ನಂತರ ಅಲ್ಲಿಯೇ ಮನೆ ಮುಂದೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿ ಹತ್ಯೆ ಮಾಡಿ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ವಿಷಯ ತಿಳಿದು ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಎಸ್ಪಿ ಡಾ.ಶಿವಕುಮಾರ ಗುಣಾರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.